ಮಂಡ್ಯ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರಿಗೆ ಸರ್ಕಾರ ನೀಡಿರುವ ಸೂಚನೆಗಳನ್ವಯ ಕನಿಷ್ಠ ವೇತನ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ (ಕೋಟೆ) ಅವರು ತಿಳಿಸಿದರು.
ಅವರು ಡಿಸೆಂಬರ್ 20 ರಂದು ಕೆ.ಆರ್.ಎಸ್ ಅಣೆಕಟ್ಟು ಹಾಗೂ ಕೆ.ಆರ್.ಎಸ್ (ಕೆ.ಎಸ್.ಟಿ.ಡಿ.ಸಿ) ಅತಿಥಿಗೃಹದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರ ಸಮಸ್ಯೆ ಕುರಿತು ಅಧಿಕಾರಿಗಳ ಸಭೆ ನಡೆಸಿದರು.
ಸಫಾಯಿ ಕರ್ಮಚಾರಿ ಆಯೋಗದ ಸೂಚನೆಗಳನ್ನು ಅನುಷ್ಠಾನ ಮಾಡಿರುವುದಿಲ್ಲ. ಕನಿಷ್ಠ ವೇತನವನ್ನು ಕಾರ್ಮಿಕ ಇಲಾಖೆಯಿಂದ ಲೆಕ್ಕಚಾರ ಮಾಡಿಸಿ ಅದರಂತೆ ವೇತನ ನೀಡಬೇಕಿರುತ್ತದೆ ಅದು ಕಂಡುಬAದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಮಾಹಿತಿಯೊಂದಿಗೆ ಜನವರಿ 6 ರಂದು ಸಫಾಯಿ ಕರ್ಮಚಾರಿ ಆಯೋಗದ ಮುಂದೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಫಾಯಿ ಕರ್ಮಚಾರಿ ಆಯೋಗ ನೀಡಲಾಗುವ ನಿರ್ದೇಶನಗಳು ಪಾಲನೆಯಾಗದಿರುವುದು ಕಂಡು ಬಂದಲ್ಲಿ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಂಜುಳಾ ದೇವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
0 Comments