ಹಿರಿಯೂರು :
ರಾಜ್ಯದಲ್ಲಿ ಕನ್ನಡ ಭಾಷೆ ಪ್ರಭುತ್ವ ಮಟ್ಟದಲ್ಲಿ ಬೆಳೆಯಬೇಕಾದರೆ ಕನ್ನಡನಾಡು ಹಾಗೂ ನುಡಿಯ ಬಗ್ಗೆ ಅಭಿಮಾನ ಮೂಡಿಸುವಂತಹ ಕಾರ್ಯಕ್ರಮಗಳು ನಡೆಯುತ್ತಲೇ ಇರಬೇಕು, ಈ ನಿಟ್ಟಿನಲ್ಲಿ ಕನ್ನಡನಾಡಿನ ಹಿರಿಮೆಯನ್ನು ಎತ್ತಿ ಹಿಡಿಯುವಂತಹ ಜಾನಪದ ನೃತ್ಯವನ್ನು ಅತ್ಯುತ್ತಮವಾಗಿ ಪ್ರದರ್ಶನ ನೀಡಿದ್ದಾರೆ ಎಂಬುದಾಗಿ ತಾಲ್ಲೂಕು ಕರವೇ ಅಧ್ಯಕ್ಷರಾದ ಶ್ರೀಯುತ ರಾಮಕೃಷ್ಣ ಹೇಳಿದರು.
ರಾಷ್ಟ್ರೀಯಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ನವಂಬರ್ 1ರಂದು ನಗರದ ನೆಹರು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮಾಡಿದ ಜಾನಪದ ನೃತ್ಯಕ್ಕೆ 10 ಸಾವಿರ ರೂಗಳನ್ನು ಶಾಲೆಗೆ ಕಾಣಿಕೆಯಾಗಿ ನೀಡಿ, ಅವರು ಮಾತನಾಡಿದರು.
ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲೂ ಉತ್ತಮ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬಹುದು ಎಂಬುದು ಸಾಬೀತಾಗಿದ್ದು, ಈ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸುಮಾರು 10 ಸಾವಿರ ರೂಗಳ ನಗದು ಬಹುಮಾನ ನೀಡುವ ಮೂಲಕ ಅಭಿನಂದಿಸಲಾಗುತ್ತಿದೆ ಎಂಬುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಗೌರವ ಅಧ್ಯಕ್ಷ ಗೋ.ಬಸವರಾಜ್, ಪ್ರಧಾನ ಕಾರ್ಯದರ್ಶಿ, ಡಿ.ಕೆ.ಎಸ್.ದಾದಾಪೀರ್, ನಗರಾಧ್ಯಕ್ಷ ಮಹಮ್ಮದ್ ಜಾಕೀರ್ ಅಸ್ಲಂ ಹಾಗೂ ಕರವೇ ಕಾರ್ಯಕರ್ತರು ಸರ್ಕಾರಿ ಜೂನಿಯರ್ ಕಾಲೇಜಿನ ಹಾಗೂ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಕನ್ನಡನಾಡಿನ ಹಿರಿಮೆಯನ್ನು ಎತ್ತಿ ಹಿಡಿಯುವಂತಹ ಜಾನಪದ ನೃತ್ಯ ಪ್ರದರ್ಶನ ನೀಡಿದ ಸರ್ಕಾರಿ ಶಾಲೆಗೆ ಕರವೇ ಯಿಂದ 10 ಸಾವಿರ ರೂ ನಗದು ಬಹುಮಾನ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments