ಕನ್ನಡ ರಾಜ್ಯೋತ್ಸವ ಕೇವಲ ನವಂಬರ್ ಗೆ ಸೀಮಿತವಾಗದೆ ಕನ್ನಡ ನಾಡು ನುಡಿ, ಜಲ ಭಾಷೆ ರಕ್ಷಣೆಗೆ ಎಲ್ಲರೂ ಒಂದಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ.

by | 01/11/23 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ನ.1.
ರಾಷ್ಟ್ರಕ್ಕೆ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ರಾಷ್ಟ್ರನಾಯಕರಂತೆ ಕರ್ನಾಟಕದ ಏಕೀಕರಣಕ್ಕಾಗಿ ದುಡಿದ ನಾಯಕರ ಆದರ್ಶಗಳನ್ನು ರಾಜ್ಯದ ನಾಡುನುಡಿಗಾಗಿ ಪಕ್ಷಗಳ ಬೇದಭಾವ ಮರೆತು ಕನ್ನಡ ರಾಜ್ಯೋತ್ಸವ ಕೇವಲ ಆಚರಣೆಗೆ ಸೀಮಿತವಾಗದೆ ಕನ್ನಡ ,ನಾಡುನುಡಿ, ಜಲ ಭಾಷೆಗಾಗಿ ಎಲ್ಲಾರೂ ಹೊಂದಾಗ ಬೇಕು ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಕಢಶಾಲೆಯ ಆವರಣದ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಧ್ಯಕ್ಷತೆವಹಿಸಿ ಮಾತನಾಡಿದರು.
ಕನ್ನಡ ಭಾಷೆಯನ್ನು ಉಳಿಸಿ ಅನ್ಯಭಾಷೆಯನ್ನು ಕಲಿಯಬೇಕೆಂದು ಪರಕೀಯರು ತಮ್ಮ ವ್ಯಾಪಾರದ ಅಭಿವೃದ್ಧಿಗಾಗಿ ಅಖಂಡ ಭಾರತವನ್ನು ಹರಿದು ಹಂಚಿ ಹಲವಾರು ಪ್ರಾಂತ್ಯಗಳನ್ನಾಗಿ ಮಾಡಿಕೊಂಡು ತಮ್ಮ ದೇಶದ ಸಂಪತ್ತನ್ನು ಕೊಳ್ಳೆಹೊಡೆದರು ಇದನ್ನು ಮನಗಂಡ ನಮ್ಮ ಸಾಹಿತಿಗಳು, ಚಿಂತಕರು ಚಳುವಳಿ ಮೂಲಕ ಕನ್ನಡ ಭಾಷೆಯನ್ನಾಡುವ ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಲು ಸಾಧ್ಯವಾಯಿತು ಎಂದರು.
ಇದೇ ಸಂದರ್ಭದಲ್ಲಿ ಕನ್ನಡರಾಜ್ಯೋತ್ಸವ ಕಾರ್ಯಕ್ರಮಲ್ಲಿ ನಾಡು ನುಡು, ಜಲ ,ಭಾಷೆ ಬಗ್ಗೆ ಸಾಹಿತಿಗಳು ಬರೆದ 5 ಹಾಡುಗಳನ್ನು್ ಹಾಡುವಂತೆ ಸರಕಾರದ ಆದೇಶದಂತೆ ಹಾಡಲಾಗಿದ್ದು. ಬರಪೀಡಿತ ತಾಲೂಕು ಎಬ್ಬ ಹಣೆ ಪಟ್ಟಿಕೊಂಡಿರುವ ನಮ್ಮ ತಾಲೂಕಿನ ಬೆಳಗೆರೆ ಕೃಷ್ಣಶಾಸ್ತ್ರಿ ,, ಸಿರಿಯಜಿಲ್ಲಿ, ವೀರಬಡಪ್ಪ, ಸುಧಾವಿಷ್ಟುಮೂರ್ತಿ, ಪಿ.ತಿಪ್ಪೇಸ್ವಾಮಿ ಸೇರಿದಂತೆ 6 ಜನರಿಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ರಂಗಭೂಮಿ ಕಲಾವಿಧ ಹಾಗೂ ನಿವೃತ್ತ ಶಿಕ್ಷಕ ಪಿ.ತಿಪ್ಪೇಸ್ವಾಮಿಯಗೆ ಶುಭ ಹಾರೈಸಿದರು.
ತಹಶೀಲ್ದಾರ್ ರೇಹಾನ್ ಪಾಷಾ ಮಾತನಾಡಿ ಪ್ರತಿಯೊಬ್ಬರ ಮನೆ ಮನಗಳಲ್ಲಿ ಕನ್ನಡ ರಾಜ್ಯೋತ್ಸವ ಹಬ್ಬದ ವಾತಾವರಣ ನಿರ್ಮಿಸುವಂತಾಗ ಬೇಕು ಪ್ರತಿಯೊಂದು ಮನೆಯಿಂದಲೇ ಕನ್ನಡ ನೆಲ,ಜಲ, ಭಾಷೆಗೆ ಒತ್ತು ನೀಡ ಬೇಕು, ವ್ಯಾಪಾರ ವಹಿವಾಟು ನಡೆಸುತ್ತಿರುವ ಅಂಗಡಿ ಮುಗ್ಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡದ ನಾಮಫಲಕರಗಳನ್ನು ಹಾಕಬೇಕು ಸರಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯಲ್ಲಿ ಆಡಳಿತ ನಡೆಸುವಂತೆ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಮೊದಲು ತಾಲೂಕು ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿ ಕನ್ನಡಾಂಭೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಮೆರವಣಿಗೆ ಮೂಲಕ ಬಿಸಿನೀರು ಮುದ್ದಪ್ಪ ಪ್ರೌಢಶಾಲೆ ಆವರಣಕ್ಕೆ ಮೆರವಣಿಗೆ ಮೂಲಕ ವೇಧಿಯತ್ತ ಬರಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ, ಸದಸ್ಯರಾದ ಸುಮಕ್ಕ, ಮಂಜುಳ, ಸದಸ್ಯರಾದ ರಮೇಶ್ಗೌಡ, ವೈ.ಪ್ರಕಾಶ್, ಜೈತುಂಬಿ, ಮಲ್ಲಿಕಾರ್ಜುನ, ನಿರ್ಮಲ,ಸುಮ, ಕೆ.ವೀರಭದ್ರಯ್ಯ, ಕವಿತ, ಸಾವಿತ್ರಿ, ತಾಪಂ ಇಒ ಶಶಿಧರ್, ಪೌರಾಯುಕ್ತ ಚಂದ್ರಪ್ಪ, ಡಿವೈಎಸ್ಪಿ ರಾಜಣ್ಣ, ವೃತ್ತನಿರೀಕ್ಷರಾದ ಆರ್.ಎಫ್,ದೇಸಾಯಿ, ಸಮೀವುಲ್ಲ, ಬಿಇಒ ಸುರೇಶ್, ಅರಣ್ಯಾಧಿಕಾರಿ ಸಿಡಿಪಿಒ ಹರಿಪ್ರಸಾದ್, ಕಾರ್ಮಿಕ ನಿರೀಕ್ಷಕಿ ಕುಸುಮ, ಎಸ್ಟಿ ಇಲಾಖೆ ಶಿವರಾಜ್, ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು..
ಇದೇ ಸಂದರ್ಭದಲ್ಲಿ ವಿವಿಧ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.


ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿ ಕಾರ್ಯಕಮ ನಡೆಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page