ಮೈಸೂರು ಜಿಲ್ಲೆಯ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಸಾಲಿಗ್ರಾಮ ತಾಲೂಕಿನ ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಅವರು ರಾಜ್ಯ ಮಟ್ಟದ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ನೀಡುತ್ತಾ ಬರುತ್ತಿರುವ 2023 ನೇ ಸಾಲಿನ ರಾಜ್ಯಮಟ್ಟದ ಕನ್ನಡ ವಿಕಾಸ ರತ್ನ ಪ್ರಶಸ್ತಿಯನ್ನು ಸಾಮಾಜಿಕ ಸೇವಾ ಕಾರ್ಯಗಳು, ಸಂಘಟನೆ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸಿ ಕೊಂಡು ಬರುತ್ತಿರುವ ಸಾಲಿಗ್ರಾಮ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ಪತ್ರಕರ್ತರು, ಸಂಘಟಕರು, ಸಾಮಾಜಿಕ ಸೇವಾ ಕಾರ್ಯಕರ್ತರು ಆಗಿರುವ ಕೆ.ಟಿ.ಮೋಹನ್ ಕುಮಾರ್ ಅವರಿಗೆ ಮೈಸೂರಿನಲ್ಲಿ ನವೆಂಬರ್ 30ರಂದು ನಡೆಯುವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಹೆಚ್.ಎಲ್.ಯಮುನಾ ತಿಳಿಸಿದ್ದಾರೆ.
0 Comments