ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಸುಮಾರು 20 ಎಕರೆಯಲ್ಲಿ ಬೆಳೆದಿದ್ದ ಭತ್ತ ಬೆಂಕಿಗೆ ಆಹುತಿಯಾದ ಘಟನೆ ತಾಲೂಕಿನ ಕೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೈತರು ಕಷ್ಟಪಟ್ಟು ಬೆಳೆದಿದ್ದ ಕಬ್ಬು ಇನ್ನೇನೂ ಕೈಗೆ ಬಂತು ಎನ್ನುವಷ್ಟರಲ್ಲಿ ಈ ಅವಘಡ ಸಂಭವಿಸಿದೆ. ಸುಮಾರು 20ಕ್ಕೂ ಹೆಚ್ಚು ಎಕರೆ ಬೆಂಕಿಗೆ ಆಹುತಿಯಾಗಿದ್ದು ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸಪಟ್ಟರು. ಸುಮಾರು 50 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ.
ಕಬ್ಬು ಗದ್ದೆಯ ಮೇಲೆ ವಿದ್ಯುತ್ ತಂತಿಗಳು ಜೋತು ಬಿದ್ದಿದ್ದು, ಇದರಿಂದ ಶಾರ್ಟ್ ಸರ್ಕ್ಯೂಟ್ ಆಗಿದೆ. ಇದಕ್ಕೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ. ಇಂಥ ಘಟನೆ ಆಗಿದ್ದಾಂಗೆ ನಡೆಯುತ್ತಲೇ ಇರುತ್ತವೆ. ಆದ್ರೆ, ಬೆಸ್ಕಾಂ ಈ ಬಗ್ಗೆ ಹೆಚ್ಚು ಗಮನ ಹರಿಸಿಲ್ಲ. ನಿರ್ವಹಣೆಯನ್ನೂ ಸರಿಯಾಗಿ ಮಾಡುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಸ್ಕಾಂ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ..
ಬೆಸ್ಕಾಂ, ಸಕ್ಕರೆ ಕಾರ್ಖಾನೆಯವರು ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಮೊದಲೇ ಸರಿಯಾದ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ. ವಿಪರೀತ ಮಳೆ ಬಂದ ಕಾರಣ ಸಾಲ ಮಾಡಿ ಬೆಳೆದಿದ್ದ ಬೆಳೆಯೂ ನೀರು ಪಾಲಾಗಿದೆ. ಈಗ ಅಳಿದುಳಿದ ಬೆಳೆಯೂ ಬೆಂಕಿಗೆ ಆಹುತಿಯಾದರೆ ರೈತರು ಬದುಕುವುದಾದರೂ ಹೇಗೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಕೊಳೇನಹಳ್ಳಿ ಸತೀಶ್ ಪ್ರಶ್ನಿಸಿದ್ದಾರೆ.
0 Comments