ಕರ್ನಾಟಕಸರ್ಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮವಾದ “ಜನತಾದರ್ಶನ” ಕ್ಕೆ ಸಚಿವ ಡಿ.ಸುಧಾಕರ್ ರಿಂದ ಚಾಲನೆ

by | 25/09/23 | ಸುದ್ದಿ


ಹಿರಿಯೂರು :
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮವಾದ “ಜನತಾದರ್ಶನ” ಕಾರ್ಯಕ್ರಮವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಇಂದು ಜಾರಿಗೊಳಿಸಿದ್ದು, ಈ ಕಾರ್ಯಕ್ರಮವನ್ನು ಮಾನ್ಯಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಪ್ರಾರಂಭಿಸಲಾಗಿದೆ, ಈ ಕಾರ್ಯಕ್ರಮದ ಮೂಲಕ ಸಾರ್ವಜನಿಕರ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಮುಖ್ಯಉದ್ದೇಶವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ತಾಹಾ ಪ್ಯಾಲೇಸ್ ನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಚಿತ್ರದುರ್ಗ ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ “ಜನತಾದರ್ಶನ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಅವರು ಮಾತನಾಡಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಪ್ರತಿ 15 ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳಿಂದ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ತಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಪಡೆಯಬಹುದು ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಕಳೆದ 2021-22 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯಶಿಕ್ಷಕ ಹಾಗೂ ಶಿಕ್ಷಕಿಯರುಗಳನ್ನು ಸಚಿವ ಸುಧಾಕರ್ ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯಾಪ್ರಭು ಪಾರಿತೋಷಕಗಳನ್ನು ನೀಡಿ ಗೌರವಿಸಿದರು. ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಶೂಗಳು ಸೇರಿದಂತೆ, ವಿಕಲಚೇತನರಿಗೆ ತ್ರಿಚಕ್ರವಾಹನ ವಿತರಿಸಲಾಯಿತು. ಹಾಗೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯಾಪ್ರಭು, ಜಿಲ್ಲಾ ನಿರ್ವಹಣಾಧಿಕಾರಿ ಹೆಚ್.ಸೋಮಶೇಖರ್, ಡಿಡಿಪಿಐ ರವಿಶಂಕರ್ ರೆಡ್ಡಿ, ಜಿಲ್ಲಾ ಆರೋಗ್ಯಾಧಿಕಾರಿ ರಂಗನಾಥ್, ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್, ಕೃಷಿ ಇಲಾಖೆ ಮಂಜುನಾಥ್, ಯೋಜನಾ ಇಲಾಖೆ ವೀರೇಂದ್ರ ಕುಮಾರ್, ಯೋಗೇಶ್ವರ್, ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿವರ್ಗ, ವಿವಿಧ ಶಾಲೆಗಳ ಮುಖ್ಯಶಿಕ್ಷಕರುಗಳು ಹಾಗೂ ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page