ಹಿರಿಯೂರು :
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಬೆಂಗಳೂರು ಈ ಸಂಘಟನೆಯ ಹಿರಿಯೂರು ತಾಲ್ಲೂಕು ನೂತನ ಶಾಖೆಯ ಉದ್ಘಾಟನೆ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 28ರ ಶನಿವಾರದಂದು ನಗರದ ರೋಟರಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಹೆಚ್.ಎಸ್ ಮಾರುತೇಶ್ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ 2022-23ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್.ಎಸ್ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ದಿನಪತ್ರಿಕೆ, ವಾರಪತ್ರಿಕೆ ವರದಿಗಾರರು ಮತ್ತು ಸಂಪಾದಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಗಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂಬುದಾಗಿ ಮಾರುತೇಶ್ ಮನವಿ ಮಾಡಿದ್ದಾರೆ.
ತಾಲೂಕಿನಲ್ಲಿ ನಡೆಯುವಂತಹ ಭ್ರಷ್ಟಾಚಾರ ಅಕ್ರಮಗಳು, ಮರಳು ಮಣ್ಣು ಮಾಫಿಯ, ನೊಂದವರ ಧ್ವನಿಯಾಗಿ ನ್ಯಾಯ ದೊರಕಿಸಿ ಕೊಡುವ, ಪ್ರಾಮಾಣಿಕ ಪ್ರಯತ್ನವಾಗಿ ಈ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಸಂಘಟನೆಯನ್ನು ಹಿರಿಯೂರಿನಲ್ಲಿ ಪ್ರಾರಂಭಿಸುತ್ತಿರುವ ಈ ಸಂದರ್ಭದಲ್ಲಿ ನಗರದ ಹಾಗೂ ತಾಲ್ಲೂಕಿನ ಜನತೆಯ ಹಾಗೂ ಸಮಾನ ಮನಸ್ಕ ಗೆಳೆಯರ, ಸಹೃದಯರ ಸಹಕಾರ ಕೋರುತ್ತಿದ್ದೇವೆ ಎಂದರಲ್ಲದೆ,
ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್ ರವರು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ, ಕಾರ್ಯಕ್ರಮದಲ್ಲಿ ಪೊಲೀಸ್ ಅಸ್ತ್ರಾ ಕನ್ನಡ ಕಿರುಚಿತ್ರ ಪೋಸ್ಟರ್ ಬಿಡುಗಡೆ ಸಹ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಸಂಘಟನೆಯ ತಾಲ್ಲೂಕು ಸಮಿತಿ ಗೌ. ಅಧ್ಯಕ್ಷರಾದ ಐನಳ್ಳಿ ಇಬ್ರಾಹಿಂ, ಕಾರ್ಯಾಧ್ಯಕ್ಷರಾದ ಅರ್ಜುನ್ ಬ್ಯಾಡರಹಳ್ಳಿ, ಪ್ರಧಾನ ಕಾರ್ಯದರ್ಶಿ ಜಿ.ಕೆ.ಮಾರುತಿ ಗೂಳ್ಯ, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಶ್ರೀಮತಿ ಆಶಾ ಮಾರುತೇಶ್ ಅರ್ಪಿಸುವ ಸೂರ್ಯ ಬ್ರದರ್ಸ್ ರವರ ಜೈಂಕಾರ ಮೆಲೋಡಿಸ್ ಆರ್ಕೆಸ್ಟ್ರಾ ಚಿತ್ರದುರ್ಗ ಇವರಿಂದ ಆರ್ಕೆಸ್ಟ್ರಾ ಕಾರ್ಯಕ್ರಮ ಇರುತ್ತದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆ್ಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂಬುದಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಹೆಚ್ಎಸ್ ಮಾರುತೇಶ್ ಮನವಿ ಮಾಡಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪ್ರಾರಂಭೋತ್ಸವ – ಪ್ರತಿಭಾ ಪುರಸ್ಕಾರ ಸಮಾರಂಭ ತಾಲ್ಲೂಕು ಸಮಿತಿ ಅಧ್ಯ ಕ್ಷ : ಹೆಚ್.ಎಸ್ ಮಾರುತೇಶ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments