ಕರ್ನಾಟಕ ‘ನಾಮಕರಣದ ಸುವರ್ಣ ಸಂದರ್ಭಕ್ಕೆ ವಿಶೇಷ ಕಾರ್ಯಕ್ರಮ- ಸಚಿವ ಶಿವರಾಜ್ ತಂಗಡಗಿ

by | 09/06/23 | ಕರ್ನಾಟಕ


ಬೆಂಗಳೂರು :ಮೈಸೂರು ರಾಜ್ಯ’ ಕರ್ನಾಟಕ ‘ಎಂದು ನಾಮಕರಣ ಗೊಂಡು 50 ವರ್ಷ ಪೂರ್ಣ ಗೊಳ್ಳುತ್ತಿರುವ ಸಂದರ್ಭದಲ್ಲಿ ವಿಶೇಷವಾದ ಕಾರ್ಯಕ್ರಮ ಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲು ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಅವರು ಇಂದು ಕನ್ನಡ ಭವನದ ಅಂತರಂಗದಲ್ಲಿ ನಡೆದ ಇಲಾಖೆಯ ಆಯವ್ಯಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಮೈಸೂರು ರಾಜ್ಯ 20- 10-1973 ರಂದು ಕರ್ನಾಟಕ ಎಂದು ಮರುನಾಮಕರಣವಾಗಿದ್ದು ಅದಕ್ಕೆ ಈಗ 50 ವರ್ಷ ಪೂರೈಸುತ್ತಿದೆ, ಈ ಐತಿಹಾಸಿಕ ಸಂದರ್ಭದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಸಾರುವಂತಹ ವಿಶೇಷವಾದ ಕಾರ್ಯಕ್ರಮಗಳನ್ನು ರೂಪಿಸಿ ವರ್ಷವಿಡಿ ಆಯೋಜಿಸಲು ಸೂಕ್ತ ರೂಪರೇಷೆಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.

ಈ ಬಾರಿ ಆಯವ್ಯಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನವನ್ನು ಕೋರಲಾಗುವುದು, ಆ ಮೂಲಕ ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳು ವ್ಯಾಪಕವಾಗಿ ಮತ್ತು ಹೆಚ್ಚು ಆಕರ್ಷಣೀಯವಾಗಿ ಯೋಜಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ರವೀಂದ್ರ ಕಲ್ಲಾಕ್ಷೇತ್ರವನ್ನು ನವೀಕರಿಸಿ ಅಲ್ಲಿನ ಆಸನ ವ್ಯವಸ್ಥೆ ಧ್ವನಿ ಮತ್ತು ಬೆಳಕು ಗಳ ಸುಧಾರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಅವರು ಹೇಳಿದರು.

ಕರ್ನಾಟಕದ ಪರಂಪರೆಯನ್ನು ಬಿಂಬಿಸುವಂತಹ ಚಾಲುಕ್ಯ ಉತ್ಸವ, ಆನೆಗುಂದಿ ಉತ್ಸವ , ಲಕ್ಕುಂಡಿ ಉತ್ಸವ ,ಹಂಪಿ ಉತ್ಸವ, ನವರಸಪುರ ಉತ್ಸವ, ಕದಂಬ ಉತ್ಸವ, ಇಟಗಿ ಉತ್ಸವ ಹಾಗೂ ಕನಕಗಿರಿ ಉತ್ಸವ ಮುಂತಾದ ಉತ್ಸವಗಳನ್ನು ಇನ್ನು ಮುಂದೆ ನಿಗದಿತ ದಿನಾಂಕ ಗಳಂದು ಪ್ರವಾಸಿಗರ ಅನುಕೂಲವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಆಯೋಜಿಸಬೇಕು. ಮತ್ತು ಅದಕ್ಕೊಂದು ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕೆಂದು ಅವರು ಹೇಳಿದರು.

ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗಗಳಲ್ಲಿ ಜಾನಪದ ಲೋಕ ಸ್ಥಾಪನೆಗೆ ಸೂಕ್ತ ಯೋಜನೆ ರೂಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಐತಿಹಾಸಿಕ ಸ್ಮಾರಕಗಳ ಮುಂದೆ ಪ್ರತಿ ತಿಂಗಳು ರಜಾ ದಿನಗಳಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳುವಂತೆ ಸಚಿವರು ಸಭೆಯಲ್ಲಿನಿರ್ದೇಶಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ , ನಿರ್ದೇಶಕ ವಿಶ್ವನಾಥ ಪಿ ಹಿರೇಮಠ ಹಾಗೂ ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page