ಚಿತ್ರದುರ್ಗ ಆಗಸ್ಟ್.30:
ಕಳೆದ ಜೂನ್ ತಿಂಗಳೊಂದರಲ್ಲಿಯೇ ವಿಶೇಷ ನ್ಯಾಯಾಲಯದ ಮುಂದೆ ಇದ್ದ ಹಲವು ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ, ರಾಜ್ಯಾದ್ಯಂತ ಭೂ ಕಬಳಿಕೆಯಾಗಿದ್ದ 224.4 ಎಕರೆ ಒತ್ತುವರಿ ಜಮೀನನ್ನು ಮರಳಿ ಸರ್ಕಾರದ ಸುಪರ್ದಿಗೆ ವಹಿಸಿ ಆದೇಶ ನೀಡಲಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿμÉೀಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಹೇಳಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಭೂ ಕಬಳಿಕೆ ನಿμÉೀಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಕುರಿತು ಆಯೋಜಿಸಲಾದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೋಟ್ಯಾಂತರ ರೂಪಾಯಿ ಮೌಲ್ಯದ 224.4 ಎಕರೆ ಜಮೀನು ಸರ್ಕಾರಕ್ಕೆ ಮರಳಿ ದೊರಕಿದೆ. ಸದ್ಯ ಸ್ಮಶಾನ ಹಾಗೂ ಸಾರ್ವಜನಿಕ ಉಪಯೋಗಕ್ಕೆ ಜಾಗ ಬೇಕು ಎಂದರೆ, ಸರ್ಕಾರ ಹಣ ನೀಡಿ ಭೂಮಿ ಕೊಂಡುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಕರ್ನಾಟಕ ಭೂ ಕಬಳಿಕೆ ನಿμÉೀಧ ಅಧಿನಿಯಮ ಬಲಿಷ್ಠ ಹಾಗೂ ಪರಿಣಾಮಕಾರಿಯಾಗಿದೆ. ಅಧಿಕಾರಿಗಳು ಕಾಯ್ದೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು, ಸರ್ಕಾರಿ ಭೂಮಿಯ ರಕ್ಷಣೆಗೆ ಕಾರ್ಯ ಪ್ರವೃತ್ತರಾಗಬೇಕು. ಅಧಿಕಾರಿಗಳು ಭೂ ಕಬಳಿಕೆ ಅಥವಾ ಒತ್ತುವರಿ ಗಮನಕ್ಕೆ ಬಂದರೆ, ವಿಶೇಷ ನ್ಯಾಯಾಲಯಕ್ಕೆ ಫಾರಂ 1 ರಲ್ಲಿ ಅರ್ಜಿ ಸಲ್ಲಿಸಿದರೆ ಸಾಕು, ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಒತ್ತಡ ಹಾಗೂ ಪ್ರಭಾವಗಳಿಗೆ ಮಣಿಯುವ ಅವಶ್ಯಕತೆ ಇಲ್ಲ. ಭೂ ಕಬಳಿಕೆಯ ಬಗ್ಗೆ ಮಾಹಿತಿ ಬಂದರೂ ಸಹ, ವಿಶೇಷ ನ್ಯಾಯಾಲಯ ಸ್ವಇಚ್ಛೆಯಿಂದ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುವುದು. ಒಂದು ವೇಳೆ ಭೂ ಒತ್ತುವರಿ ಕಂಡು ಬಂದರೂ ಸಹ ಅಧಿಕಾರಿಗಳು ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿದರೆ, ಭೂ ಕಬಳಿಕೆ ನಿμÉೀಧ ಅಧಿನಿಯಮದಡಿ, ಭೂ ಒತ್ತುವರಿಗೆ ಪೆÇ್ರೀತ್ಸಾಹ ನೀಡಿದ್ದಾರೆ ಎಂದು ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಎಚ್ಚರಿಸಿದರು.
ವಿಶೇಷ ನ್ಯಾಯಾಲಯದಲ್ಲಿ ಮಾಧ್ಯಮ ವರದಿಗಳನ್ನು ಆಧರಿಸಿ ಸಾಕಷ್ಟು ಭೂ ಕಬಳಿಕೆ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಹೀಗೆ ದಾಖಲಾದ ಹಲವು ಪ್ರಕರಣಗಳಲ್ಲಿ ಭೂ ಒತ್ತುವರಿಯನ್ನು ಸಹ ತೆರವುಗೊಳಿಸಲಾಗಿದೆ. ಮಲಪ್ರಭಾ ನದಿ ದಂಡೆ ಒತ್ತುವರಿ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಇದನ್ನು ಆಧರಿಸಿ ನ್ಯಾಯಾಲಯ ಸ್ವ ಇಚ್ಛೆಯಿಂದ ಪ್ರಕರಣ ಕೈಗೆತ್ತಿಕೊಂಡಿದೆ, ಈ ಬಗ್ಗೆ ಒಟ್ಟು 1800 ಹೆಚ್ಚು ಪ್ರಕರಣಗಳು ದಾಖಲಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಒತ್ತುವರಿ ಸಂಬಂಧ ಮಾಧ್ಯಮ ವರದಿ ಆಧಿರಿಸಿ 17 ಪ್ರಕರಣಗಳನ್ನು ದಾಖಲಿಸಲಾಗಿದೆ. ನ್ಯಾಯಾಂಗ, ಕಂದಾಯ, ಭೂ ಸರ್ವೇ, ಪೆÇಲೀಸ್ ಹಾಗೂ ಅರಣ್ಯ ಇಲಾಖೆಗಳು ಒಟ್ಟಾಗಿ ಬಿಗಿ ಮುಷ್ಠಿಯಿಂದ ಸರ್ಕಾರಿ ಭೂಮಿಯನ್ನು ರಕ್ಷಿಸಿದರೆ, ಎಂತಹುದೇ ವ್ಯಕ್ತಿ ಅಥವಾ ಸಮೂಹಗಳಿಂದಲೂ ಭೂ ಕಬಳಿಕೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಕೆರೆಗಳ ಸರಹದ್ದುಗಳನ್ನು ಗೊತ್ತುಪಡಿಸಿ ಏರಿಗಳನ್ನು ನಿರ್ಮಿಸುವ ಮೂಲಕ, ಕೆರೆಗಳ ಒತ್ತುವರಿ ತೆರವಿಗೆ ಅಧಿಕಾರಿಗಳು ಪ್ರಯತ್ನಿಸಬೇಕು. ಭೂ ಪರಿವರ್ತನೆ ನೀಡುವ ಪ್ರಾಧಿಕಾರಗಳು ಕೆರೆ ಹಾಗೂ ಸರ್ಕಾರಿ ಭೂಮಿ ಒತ್ತುವರಿ ಕುರಿತು ಪರಿಶೀಲನೆ ನಡೆಸಿ, ನಂತರ ಅನುಮತಿ ನೀಡುವಂತೆ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಸೂಚಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ್ ವಾಸುದೇವ್ ಮಾತನಾಡಿ, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ, ಕೆರೆ, ಅರಣ್ಯ ಹಾಗೂ ಕಂದಾಯ ಭೂಮಿ ಒತ್ತುವರಿ ಮಾಡಿ ದುರ್ಲಾಭ ಪಡೆಯುತ್ತಿರುವ ಪಟ್ಟಭದ್ರ ವ್ಯಕ್ತಿಗಳನ್ನು ಕಾನೂನಿನ ಚೌಕಟ್ಟಿಗೆ ತರುವ ಕೆಲಸ ಮಾಡಬೇಕು. ಅತಿಕ್ರಮಣ ತೆರವುಗೊಳಿಸಿ ಸರ್ಕಾರಕ್ಕೆ ಆಸ್ತಿ ಮರಳಿಸಬೇಕು. ಮಾಧ್ಯಮಗಳು ಸಹ ಸರ್ಕಾರಿ ಭೂ ಕಬಳಿಕೆ ಕುರಿತು ವಿಸ್ತøತ ವರದಿ ಪ್ರಕಟಿಸುವ ಮೂಲಕ ನ್ಯಾಯಾಲಯಗಳ ಗಮನ ಸೆಳೆಯಬೇಕು. ಇದನ್ನು ಆಧರಿಸಿ ನ್ಯಾಯಾಲಯಗಳು ಪ್ರಕರಣ ದಾಖಲಿಸಿ, ತನಿಖೆಗೆ ಆದೇಶಿಸಿ ಸರ್ಕಾರಿ ಭೂಮಿ ರಕ್ಷಣೆಯನ್ನು ಮಾಡಲು ಸಹಕಾರಿಯಾಗಲಿದೆ ಎಂದರು.
ಚಿತ್ರದುರ್ಗ ಜಿಲ್ಲೆ ಬರ ಪೀಡಿತ ಪ್ರದೇಶವಾಗಿದ್ದು, ಕೆರೆಗಳ ಒತ್ತುವರಿ ಮೋಜಿಣಿ ಮಾಡುವುದು ಅಗತ್ಯವಿದೆ. ಕೆರೆ ಒತ್ತುವರಿ ನಿರ್ವಹಣೆ ಸಮಿತಿ ಅಧ್ಯಕ್ಷನಾಗಿ ಸದ್ಯದಲ್ಲೇ ಕೆರೆಗಳ ಮೋಜಿಣಿ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಧೀಶ ರೋಣ್ ವಾಸುದೇವ್ ಹೇಳಿದರು.
72 ಸಾವಿರ ಹೆಕ್ಟೇರ್ ಕಂದಾಯ ಭೂಮಿ ಒತ್ತುವರಿ -ಜಿಲ್ಲಾಧಿಕಾರಿ ಟಿ.ವೆಂಕಟೇಶ್ :
ಚಿತ್ರದುರ್ಗ ಜಿಲ್ಲೆಯಲ್ಲಿ 7,70,702 ಹೆಕ್ಟೇರ್ ವಿಶಾಲ ಪ್ರದೇಶದಲ್ಲಿ, 2,06,594 ಹೆಕ್ಟೇರ್ ಜಾಗ ಕಂದಾಯ ಇಲಾಖೆ ಸುಪರ್ದಿಯಲ್ಲಿದೆ. ಇದರಲ್ಲಿ ಸುಮಾರು 72,000 ಹೆಕ್ಟೇರ್ ನಷ್ಟು ಜಾಗ ಒತ್ತುವರಿಯಾಗಿದೆ ಎಂಬ ಮಾಹಿತಿ ಇದೆ. ಈ ಒತ್ತುವರಿ ಜಾಗಗಳಿಗೆ ಫಾರಂ 50, 53 ಹಾಗೂ 57 ಅಡಿ ಭೂಮಿ ಮಂಜೂರಿಗೆ ಸಾಕಷ್ಟು ಜನರು ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗ ಹಿಂದುಳಿದ ಜಿಲ್ಲೆ, 3 ಎಕರೆಗಿಂತ ಕಡಿಮೆ ಜಾಗ ಒತ್ತುವರಿಯಾಗಿದ್ದು, ಅದನ್ನು ತೆರವು ಮಾಡುವುದರಿಂದ ಜೀವನ ಆಧಾರಕ್ಕೆ ತೊಂದರೆಯಾಗುತ್ತದೆ ಎನ್ನುವ ಅಂಶಗಳ ಹಿನ್ನೆಲೆಯಲ್ಲಿ ಈ ಒತ್ತುವರಿ ತೆರವುಗೊಳಿಸಿರಲಿಕ್ಕಿಲ್ಲ. ಈ ಎಲ್ಲಾ ಅಂಶಗಳ ಹೊರತಾಗಿಯೂ ಒತ್ತುವರಿಯಾದ 72,000 ಹೆಕ್ಟೇರ್ ಪೈಕಿ 15,000 ಹೆಕ್ಟೇರ್ ಭೂಮಿ ಒತ್ತುವರಿ ತೆರವುಗೊಳಿಸಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.
ಕಂದಾಯ ಇಲಾಖೆ ಭೂಮಿ ಹೊರತಾಗಿ ಅರಣ್ಯ, ಮುಜುರಾಯಿ, ಸ್ಮಶಾನ, ಕೆರೆ ಒತ್ತುವರಿ ಪ್ರಕರಣಗಳು ಜಿಲ್ಲೆಯಲ್ಲಿವೆ. ವಿಶೇಷ ಭೂ ಕಬಳಿಕೆ ನಿμÉೀಧ ನ್ಯಾಯಾಲಯ, ಸುಪ್ರಿಂಕೋರ್ಟ್ ಹಸಿರು ನ್ಯಾಯಾಲಯಗಳ ಆದೇಶವಿದ್ದರೂ, ಕೆರೆ ಒತ್ತುವರಿ ಪೂರ್ಣ ಪ್ರಮಾಣದಲ್ಲಿ ತೆರವು ಆಗಿಲ್ಲ. ಜಿಲ್ಲೆಯಲ್ಲಿ ಮಳೆ ಬೀಳುವ ಪ್ರಮಾಣ ಕಡಿಮೆಯಿದೆ. ಅಂತರ್ಜಲ ಮಟ್ಟ ಕೂಡ ಕುಸಿದಿದೆ. ಸಣ್ಣ ನೀರಾವರಿ, ಜಲಾನಯನ ಸೇರಿದಂತೆ, ಕೆ.ಎಂ.ಇ.ಆರ್.ಸಿ ಹಾಗೂ ಡಿ.ಎಂ.ಎಫ್ ನಿಧಿಗಳ ಅಡಿ ಸಾವಿರಾರು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗಿದೆ. ದುರಂತವೆಂದರೆ ಈ ಜಲಮೂಲಗಳ ಸಂಗ್ರಹಕ್ಕೆ ಬೇಕಾದ ಕೆರೆಗಳೇ ಒತ್ತುವರಿಯಾಗಿವೆ. ಇದರಿಂದ ಹಣವೂ ವ್ಯರ್ಥವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬೇಸರ ವ್ಯಕ್ತಪಡಿಸಿದರು.
ಚಳ್ಳಕೆರೆ ಹಾಗೂ ಚಿತ್ರದುರ್ಗ ನಗರದ ಮೂಲ ನಕ್ಷೆಯಲ್ಲಿ ನಗರದ ಪ್ರಮುಖ ಬೀದಿಗಳು ಈಗಿರುವ ವಿಸ್ತೀರ್ಣದ ನಾಲ್ಕರಷ್ಟು ಅಗಲವಾಗಿವೆ. ಆದರೆ ಒತ್ತುವರಿಯಿಂದ ಇಂದು ಕಿರಿದಾಗಿವೆ. ಭೂ ಕಬಳಿಕೆ, ಅಧಿಕಾರಿಗಳ ನಿರ್ಲಕ್ಷ್ಯ ಇದಕ್ಕೆ ಕಾರಣವೆನ್ನಬಹುದಾಗಿದೆ. ಒತ್ತುವರಿ ಜಾಗ ತೆರವು ಗೊಳಿಸದೇ, ಅವುಗಳಿಗೆ ಖಾತೆ ಮಾಡಿಕೊಡಲಾಗಿದೆ. ಇಂದರಿಂದಾಗಿ ಒತ್ತುವರಿದಾರರು ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಿ ಕೂತಿದ್ದಾರೆ. ನಗರದ ಹಳೆಯ ಭೂ ನಕ್ಷೆಯ ಪ್ರಕಾರ ಒಂದು ನಯಾಪೈಸೆ ಪರಿಹಾರ ನೀಡದೇ ಚಿತ್ರದುರ್ಗ ಹಾಗೂ ಹಿರಿಯೂರು ನಗರಗಳಲ್ಲಿ ಒತ್ತುವರಿ ತೆರವುಗೊಳಿಸಬಹುದಾಗಿದೆ. ಚಳ್ಳಕೆರೆ ನಗರದಲ್ಲಿ ಈಗಾಗಲೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ಹೇಳಿದರು.
ಈ ಕಾರ್ಯಗಾರಕ್ಕೆ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ. ಏಕೆಂದರೆ ಎಲ್ಲಾ ಇಲಾಖೆಗಳಿಗೂ ಸರ್ಕಾರಿ ಜಾಗಗಳನ್ನು ಮಂಜೂರು ಮಾಡಿ ವಶಕ್ಕೆ ನೀಡಲಾಗಿದೆ. ಈ ಜಾಗಗಳ ರಕ್ಷಣೆ ಹೊಣೆ ಆಯಾ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಭೂ ರಕ್ಷಣೆ ಸಂಬಂದಿಸಿದಂತೆ, ಭೂ ಕಬಳಿಕೆ ನಿμÉೀಧ, ಮೋಜಣಿ, ಕರ್ನಾಟಕ ಭೂ ಕಂದಾಯ, ನಗರ ಪಾಲಿಕೆ, ಪಂಚಾಯತ್ ರಾಜ್, ಕೆರೆ ಸಂರಕ್ಷಣೆ ಅಭಿವೃದ್ಧಿ ಪ್ರಾಧಿಕಾರ, ಅರಣ್ಯ ಸಂರಕ್ಷಣೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಹಾಗೂ ವಕ್ಫ್ ಅಧಿನಿಯಮಗಳನ್ನು ಸರ್ಕಾರ ಜಾರಿಗೊಳಿಸಿದೆ. ಈ ಕಾಯ್ದೆಗಳನ್ನು ಬಳಸಿ ಭೂ ಒತ್ತುವರಿ ತಡೆಯುವುದು ಹೇಗೆ ಎಂಬುದನ್ನು ಕಾರ್ಯಗಾರದಲ್ಲಿ ತಿಳಿಸಿಕೊಡಲಾಗುವುದು. ಅನಧಿಕೃತ ಭೂ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಿಸಿಕೊಳ್ಳಲು ಆದೇಶ ಪಡೆದ ಉದಾಹರಣೆಗಳು ಸಾಕಷ್ಟಿವೆ. ನ್ಯಾಯಲಯಕ್ಕೆ ಸಲ್ಲಿಸುವ ಭೂ ದಾಖಲೆಗಳು ಅಧಿಕೃತವಾಗಿರಬೇಕು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಸರ್ಕಾರಿ ಭೂಮಿಯನ್ನು ಮಂಜೂರು ಮಾಡುವಾಗ ಜಾಗರೂಕರಾಗಿರಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಉದ್ಘಾಟನೆ ಸಮಾರಂಭದಲ್ಲಿ ಭೂ ಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಅಪರ ನಿರ್ದೇಶಕ ಕೆ.ಜಯಪ್ರಕಾಶ್, ಭೂ ಕಬಳಿಕೆ ನಿμÉೀಧ ವಿಶೇಷ ನ್ಯಾಯಲಯದ ಕಂದಾಯ ಸದಸ್ಯರಾದ ಎಸ್.ಪಾಲಯ್ಯ, ಅಶ್ವತ್ಥನಾರಾಯಣ ಗೌಡ.ಕೆ.ಹೆಚ್, ವಿಲೇಖನಾಧಿಕಾರಿ ಹೆಚ್.ಕೆ.ನವೀನ್, ಪೆÇಲೀಸ್ ಅಧೀಕ್ಷಕ ರಂಜೀತ್ ಕುಮಾರ್ ಬಂಡಾರು, ಹೆಚ್ಚುವರು ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ವಂದನೆ ಸಲ್ಲಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ, ಕಂದಾಯ, ಅರಣ್ಯ, ನಗರಾಭಿವೃದ್ಧಿ, ಪೊಲೀಸ್, ಶಿಕ್ಷಣ ಇಲಾಖೆ ಹಾಗೂ ಪೌರಾಡಳಿತ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
0 Comments