ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ, ಮತ್ತು ಸದಸ್ಯರಾಗಿ ಪತ್ರಕರ್ತ ಅಹೋಬಳಪತಿ ನೇಮಕ

by | 11/07/24 | ಸುದ್ದಿ

ಬೆಂಗಳೂರು:
ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಮಹತ್ವದ ಬೆಳವಣಿಗೆಯಲ್ಲಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಕಾಡೆಮಿ ಅಧ್ಯಕ್ಷರನ್ನಾಗಿ, ಮಾಧ್ಯಮ ಅಕಾಡೆಮಿಗೆ ಸದಸ್ಯರನ್ನಾಗಿ ಚಿತ್ರದುರ್ಗದ ಜನಪರ ಹೋರಾಟಗಾರ ಹಾಗೂ ಪತ್ರಕರ್ತರಾದ ಅಹೋಬಳಪತಿ ಸೇರಿದಂತೆ ಮತ್ತಿತರರನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಲಾಗಿದೆ.


ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಅಧ್ಯಕ್ಷೆ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು.
ಇಲ್ಲಿಯವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ರವರ ಅಭಿಪ್ರಾಯವಾಗಿತ್ತು.
ಕೆ.ವಿ.ಪ್ರಭಾಕರ್ ರವರ ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇತರೆ ಹಲವು ಅರ್ಹರ ಹೆಸರುಗಳನ್ನು ಪರಿಶೀಲಿಸಿ ಅಂತಿಮವಾಗಿ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂಬುದಾಗಿ ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.
ಹಾಗೆಯೇ, ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಎಂ.ಎನ್.ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದೆ.
ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ.
ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ಮತ್ತು ಜನಪರ ಹೋರಾಟಗಾರ ಪತ್ರಕರ್ತರಿಗೆ ಸ್ಥಾನ ಕಲ್ಪಿಸಿರುವ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ
ಸಿದ್ಧರಾಮಯ್ಯನವರು, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಧನ್ಯವಾದಗಳನ್ನು ಅರ್ಪಿಸಲಾಗಿದೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page