ಕರ್ನಾಟಕ ರಾಜ್ಯದಲ್ಲಿ ಮತ್ತೆ ಬರಗಾಲದ ಕರಾಳ ಛಾಯೆ ಬಂದಂತಿದೆ .ಶ್ರೀಜಪಾನಂದಸ್ವಾಮಿ

by | 28/08/23 | ಕೃಷಿ


ಪಾವಗಡ ಆ.28. ಕರ್ನಾಟಕ ರಾಜ್ಯದಲ್ಲಿ ಮತ್ತೆ ಬರಗಾಲದ ಕರಾಳ ಛಾಯೆ ಬಂದಂತಿದೆ . ಈವರೆಗೆ ಅಧಿಕೃತ ಪ್ರಕಟಣೆಯಲ್ಲಿ ರಾಜ್ಯ ಸರ್ಕಾರ ನೀಡಿರುವ ಪಟ್ಟಿಯಲ್ಲಿ ಅತ್ಯಂತ ಕ್ಲಿಷ್ಟಕರವಾದ ಹಾಗೂ ಭಯಾನಕ ಬರ ಸ್ಥಿತಿ ಬಾಗಲಕೋಟೆ ಹಾಗೂ ಬಳ್ಳಾರಿ ಚಿತ್ರದುರ್ಗ. ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬರದ ಛಾಯೆ ಬಂದಂತಿದೆ . ಎಂದಿನಂತೆ ಶ್ರೀ ರಾಮಕೃಷ್ಣ ಸೇವಾಶ್ರಮ , ಪಾವಗಡ , ಕಳೆದ 30 ವರ್ಷಗಳಿಂದ ಎಡೆಬಿಡದೆ ಪ್ರವಾಹ ಆಗಲಿ ಅಥವಾ ಭೀಕರ ಬರಗಾಲವಾಗಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ತನ್ನ ಸೇವಾ ಕಾರ್ಯಗಳನ್ನು ಮುಂದುವರಿಸಿಕೊಂಡು ಬರುತ್ತದೆ . ಈ ನಿಟ್ಟಿನಲ್ಲಿ ಈಗಾಗಲೇ ಶ್ರೀರಾಮಕೃಷ್ಣ ಸೇವಾಶ್ರಮದ ಸ್ವಯಂಸೇವಕರು ಹಾಗೂ ಹಿತೈಷಿಗಳು ಬಾಗಲಕೋಟೆ , ಜಮಖಂಡಿ , ಹುನುಗುಂದ , ಮುಂತಾದ ಪ್ರದೇಶಗಳಲ್ಲಿ ವಸ್ತು ಸ್ಥಿತಿಯನ್ನು ಪರಿಶೀಲಿಸಲು ಕಾರ್ಯನಿರತವಾಗಿದೆ . ಪೂಜ್ಯ ಸ್ವಾಮಿ ಜಪಾನಂದ ಜೀ ಪ್ರಕಾರ ಕೆಲವೇ ದಿನಗಳಲ್ಲಿ ಈ ಭೀಕರ ಬರಗಾಲ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯವನ್ನು ಕೈಗೆತ್ತಿಕೊಳ್ಳಲು ಮುಂದಾಗಿದೆ ಎಂದು ತಿಳಿಸಿರುತ್ತಾರೆ. ಈ ನಿಟ್ಟಿನಲ್ಲಿ ಪಾವಗಡ , ಮಧುಗಿರಿ , ಚಳ್ಳಕೆರೆ, ಕೂಡ್ಲಿಗಿ, ನಾಯಕನಹಟ್ಟಿ, ಬಾಗಲಕೋಟೆ , ಜಮಖಂಡಿ , ಹುನಗುಂದ , ಮುಧೋಳ್ , ಬಿಳಗಿ , ಗುಳೇದಗುಡ್ಡ , ಇಳುಕಲ್ , ಬಾದಾಮಿ ಮುಂತಾದ ತಾಲೂಕುಗಳಲ್ಲಿ ವಸ್ತು ಸ್ಥಿತಿಯನ್ನು ಕಂಡು ತದನಂತರ ಎಷ್ಟು ಸಹಸ್ರ ಜನಗಳಿಗೆ ಸಹಕಾರ ಹಾಗೂ ಪರಿಹಾರ ನೀಡಬೇಕು ಎಂಬುದನ್ನು ಸದ್ಯದಲ್ಲಿಯೇ ಸರ್ಕಾರದ ಅಧಿಕೃತ ಪಟ್ಟಿಯಲ್ಲಿ ಇರುವಂತಹ ಪ್ರದೇಶಗಳಲ್ಲಿ ಕಾರ್ಯಾ ಆರಂಭ ಮಾಡಲು ಶ್ರೀರಾಮಕೃಷ್ಣ ಸೇವಾಶ್ರಮ ಪಾವಗಡ ಎಂದಿನಂತೆ ತನ್ನ ಸೇವಾ ಕಾರ್ಯವನ್ನು ಆರಂಭಿಸುತ್ತಿದೆ . ಎಂದು ಮಾಹಿತಿ ನೀಡಿದ್ದಾರೆ ಈ ಪ್ರದೇಶಗಳಲ್ಲಿ ಮೂರು ವರ್ಷಗಳ ವರ್ಷಗಳ ಹಿಂದೆ ಪ್ರವಾಹ ಪರಿಹಾರ ಕಾರ್ಯವನ್ನು ಕೈಗೊಂಡಿದ್ದನ್ನು ನೆನಪಿಸಿಕೊಂಡು ಅಲ್ಲಿಯ ಜನತೆ ಹಾಗೂ ಸಾರ್ವಜನಿಕರು ಮತ್ತು ಆಡಳಿತ ವರ್ಗ ಶ್ರೀ ರಾಮಕೃಷ್ಣ ಸೇವಾಶ್ರಮ , ಪಾವಗಡ , ಹಾಗೂ ಇನ್ನಿತರ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸಿರುವುದನ್ನು ಮನದಟ್ಟು ಮಾಡಿಕೊಂಡಿದ್ದಾರೆ ಹಾಗಾಗಿ ಅಲ್ಲಿಯ ಜನತೆ ಹಾಗೂ ಆಡಳಿತ ವರ್ಗದವರು ಶ್ರೀ ರಾಮಕೃಷ್ಣ ಸೇವಾಶ್ರಮ , ಪಾವಗಡಕ್ಕೆ , ಸರ್ವ ರೀತಿಯಲ್ಲಿ ಸಹಕಾರ ನೀಡಲು ಮುಂದೆ ಬಂದಿರುತ್ತಾರೆ ಎಂಬುದನ್ನು ಸ್ವಾಮಿ ಜಪಾನಂದ ಜಿ ಮಹಾರಾಜರವರು ಮಾಹಿತಿ ನೀಡಿರುತ್ತಾರೆ. ಇದೇ ಸಂದರ್ಭದಲ್ಲಿ ಅಲ್ಲಿಯ ಮುಖ್ಯಸ್ಥರು ಜನಪ್ರತಿನಿಧಿಗಳು ತಮಗೆ ಹಾಗೂ ತಮ್ಮ ಸೇವ ಕಾರ್ಯಗಳಿಗೆ ಎಲ್ಲ ರೀತಿಯ ಪೂರ್ಣ ಸಹಕಾರ ನೀಡುತ್ತಾ ಬಂದಿರುವುದು ಗಮನಾರ್ಹವಾಗಿದೆ ಎಂಬುದನ್ನು ನೆನಪಿಸಿಕೊಂಡರು . ಈ ಬಾರಿ ಬಹುಶಹ ಹೆಚ್ಚಿನ ಪೀಡಿತರಿಗೆ ಪರಿಹಾರ ನೀಡುವುದಾಗಿ ಘೋಷಿಸುತ್ತಾರೆ . ಈ ಪವಿತ್ರ ಕಾರ್ಯಕ್ರಮಕ್ಕೆ ಅನೇಕ ಸಂಸ್ಥೆಗಳು ಎಂದಿನಂತೆ ಶ್ರೀ ರಾಮಕೃಷ್ಣ ಸೇವಾಶ್ರಮ ಪಾವಗಡ ಕೆ ಕೈಜೋಡಿಸಿರುತ್ತಾರೆ . ಒಟ್ಟಿನಲ್ಲಿ ದೇಶದ ಅದರಲ್ಲಿಯೂ ದಕ್ಷಿಣ ಭಾರತದ ಸರಿಸುಮಾರು ಆರು ರಾಜ್ಯಗಳ ಪ್ರಕೃತಿ ವಿಕೋಪಕ್ಕೆ ತುತ್ತಾದಾಗ ಶ್ರೀ ರಾಮಕೃಷ್ಣ ಸೇವಾಶ್ರಮ ಪಾವಗಡ ಪರಮಪೂಜ್ಯ ಸ್ವಾಮಿ ಜಪಾನಂದಜಿ ರವರ ನೇತೃತ್ವದ ತಂಡ ಅಹರ್ನಿಷಿ ಕೆಲಸ ಮಾಡುವುದನ್ನು ಇಡೀ ದೇಶ ಕಂಡಿದೆ ಹಾಗಾಗಿ ಕಷ್ಟದಲ್ಲಿರುವ ರಿಗೆ ಹಾಗೂ ಬರಗಾಲದಿಂದ ಪೀಡಿತರಾಗಿ ಯಾವುದೇ ರೀತಿಯ ಬೆಳೆ ಇಲ್ಲದೆ ಹಾಕಿದ ಬೆಳೆಯು ಸಂಪೂರ್ಣ ನಾಶವಾಗಿ ರೈತಾಪಿ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ಪರಮಪೂಜ್ಯ ಸ್ವಾಮಿ ಜಪಾನಂದ ಜೇವರು ಸದಾ ಸೇವೆಗಾಗಿ ಆತುರಿಯುತ್ತಿರುವುದನ್ನು ಈಗಾಗಲೇ ಇಡೀ ದೇಶ ಕಂಡಿದೆ ಈ ಈ ಸಂದರ್ಭದಲ್ಲಿಯೂ ಸಹ ಅಂದರೆ 2023 ಸೆಪ್ಟೆಂಬರ್ ಮೊದಲ ವಾರದಿಂದ ಬರಗಾಲ ಪರಿಹಾರ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ ಸ್ವಾಮಿ ಜಪಾನಂದ ಜೇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ . ಈ ಸಮಯೋಚಿತ ಸೇವಾ ಯಜ್ಞಕ್ಕೆ ಯಾರು ಬೇಕಾದರೂ ತಮ್ಮ ಸಹಾಯ ಹಸ್ತವನ್ನು ನೀಡಬಹುದಾಗಿದೆ ಇಚ್ಛೆಯುಳ್ಳವರು ಶ್ರೀರಾಮಕೃಷ್ಣ ಸೇವಾಶ್ರಮ ಪಾವಗಡ ದೂರವಾಣಿ ಸಂಖ್ಯೆ 9 4 4 8 1 0 6 012 ಕರೆ ಮಾಡಿ ತಿಳಿಸಬಹುದಾಗಿದೆ . ಈ ಸೇವಾ ಯಜ್ಞಕ್ಕೆ ಎಲ್ಲರ ಸಹಕಾರ ಹಾಗೂ ಶುಭಾಶಯಗಳು ನಿರೀಕ್ಷಿಸುತ್ತೇವೆ ಎಂದು ಪೂಜ್ಯ ಸ್ವಾಮಿ ಜಪಾನಂದ ಜಿ ಅವರು ಸ್ವಾಮಿ ವಿವೇಕಾನಂದ ಸೇವಾ ತಂಡದ ಪರವಾಗಿ ವಿನಂತಿಸಿಕೊಂಡಿರುತ್ತಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page