ಕರ್ನಾಟಕ

ಈ ಬೃಹತ್‌ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ

ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಈ ಭಾಗದ ಜನರ ಬಹು ದಿನಗಳ ಕನಸು ನನಸಾಗಲಿದೆ.
ತುಮಕೂರು ಜಿಲ್ಲೆಯ ಪಾವಗಡ ಹಾಗೂ ಕ್ವಾದಿಗುಂಟೆ ಬಳಿ ನಡೆಯುತ್ತಿರುವ ಕಾಮಗಾರಿಗಳನ್ನು ಬುಧವಾರ ವೀಕ್ಷಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ, ಬಹುಗ್ರಾಮ ನೀರು ಸರಬರಾಜು ಯೋಜನೆ ಮೂಲಕ ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಚಿಲಕನಹಟ್ಟಿ ಮತ್ತು 14 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಕೂಡ್ಲಿಗಿ ತಾಲ್ಲೂಕಿನ ಉಜ್ಜಿನಿ ಮತ್ತು 215 ಗ್ರಾಮೀಣ ವಸತಿ ಪ್ರದೇಶಗಳು; ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣ ಮತ್ತು 132 ಗ್ರಾಮೀಣ ವಸತಿ ಪ್ರದೇಶಗಳು, ಚಳ್ಳಕೆರೆ ತಾಲ್ಲೂಕಿನ 360 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ತುರವನೂರು ಮತ್ತು 58 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಪಾವಗಡ ಪಟ್ಟಣ ಹಾಗೂ ತಾಲ್ಲೂಕಿನ 357 ಗ್ರಾಮೀಣ ವಸತಿ ಪ್ರದೇಶಗಳು ಸೇರಿದಂತೆ 1,138 ಗ್ರಾಮಗಳು ಹಾಗೂ 2 ಪಟ್ಟಣಗಳು ತುಂಗಭದ್ರ ನೀರಿನ ಸೌಲಭ್ಯ ಪಡೆಯಲಿವೆ ಎಂದು ಸಚಿವರು ತಿಳಿಸಿದರು.


ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ಹಾಗೂ ಪಾವಗಡ ನೀರು ಸರಬರಾಜು ಯೋಜನೆಯ ಕಾಮಗಾರಿಗಳು ಶೇ.95 ಭಾಗದಷ್ಟು ಮುಕ್ತಾಯಗೊಂಡಿದ್ದು, ಕೊಳವೆ ಮಾರ್ಗಗಳ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಎಲ್ಲ ಯೋಜನೆಗಳ ವಿದ್ಯುತ್‌ ಸರಬರಾಜು ಮಂಜೂರಾತಿಗಳು (ಸಿಇಐಜಿ ಮತ್ತು ಬೆಸ್‌ಕಾಂ) ದೊರೆತಿದ್ದು, ಈ ಬೃಹತ್‌ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

2,132.02 ಕೋಟಿ ರೂ. ವೆಚ್ಚದ ಯೋಜನೆಯ ಕಾಮಗಾರಿಗಳು ಕಳೆದ ವರ್ಷದಿಂದ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮೇ 2024ರವರೆಗೆ 1,852.15 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದೂ ಸಚಿವರು ಹೇಳಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಅಂತರರಾಷ್ಟ್ರೀಯ ಮಾನದಂಡಗಳಂತೆ ಪ್ರತಿಯೊಬ್ಬರಿಗೂ ಪ್ರತಿ ನಿತ್ಯ 85 ಲೀಟರ್‌ ನೀರು ಒದಗಿಸಲಾಗುವುದು, ಪಟ್ಟಣದ ಜನರು ಪ್ರತಿ ನಿತ್ಯ 135 ಲೀಟರ್‌ ನೀರು ಪಡೆಯುವರು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ನೀರು ಸಂಸ್ಕರಣ ಘಟಕಗಳ ಕಾಮಗಾರಿಗಳು ಮುಕ್ತಾಯಗೊಂಡಿದ್ದು, ಕೊಳವೆ ಮಾರ್ಗಗಳನ್ನು ಅಳವಡಿಸುವ ಕಾಮಗಾರಿಗಳು ಮುಕ್ತಾಯಗೊಂಡಿವೆ ಎಂದೂ ಹೇಳಿರುವ ಸಚಿವರು 568 ಒವರ್‌ಹೆಡ್‌ ಟ್ಯಾಂಕ್‌ಗಳ ನಿರ್ಮಾಣ ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ ಎಂದೂ ತಿಳಿಸಿದ್ದಾರೆ.ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಕ್ಯಾದಿಗುಂಟೆ ಗ್ರಾಮದ ಕೆಂಚಮ್ಮನಹಳ್ಳಿ ಗೇಟ್ ನಲ್ಲಿ ನಡೆದ ಐ.ಪಿ.ಎಸ್.3 ಯೋಜನೆಯ ಪ್ರಗತಿ ಪರಿವೀಕ್ಷಣೆ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಚಳ್ಳಕೆರೆ ತಾಲ್ಲೂಕಿನ ಕ್ಯಾದಿಗುಂಟೆ ಗ್ರಾಮದ ಸಮೀಪ ಕೆಂಚಮ್ಮನ ಹಳ್ಳಿ ಗೇಟ್ ನಲ್ಲಿ ಐ.ಪಿ.ಎಸ್.3 ಯೋಜನೆಯ ಪ್ರಗತಿ ಪರಿವೀಕ್ಷಣೆ ಮತ್ತು ಅಧಿಕಾರಿಗಳೊಂದಿಗೆ ಆಗಮಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ರವರನ್ನು ಸನ್ಮಾನಿಸಿ ಆತ್ಮೀಯವಾಗಿ ಶಾಸಕ ಟಿ.ರಘುಮೂರ್ತಿ ಬರಮಾಡಿಕೊಂಡರು ಹಾಗೂ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ, ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಮುಖಂಡರುಗಳಾದ ನರಸಿಂಹಮೂರ್ತಿ, ದೇವರಾಜ್, ಶಶಿ, ವರದರಾಜ್, ನಾಗರಾಜ್, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರದುರ್ಗ ಜಿಲ್ಲಿಗೆ ಆಮ್ಲನ್ ಆಧಿತ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನೇಮಕ.

ಬೆಂಗಳೂರು ಜು.6.ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ.

ಈ ಮೂಲಕ ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾನುಗಳ ವಿಚಾರಣೆ, ಅನಿರೀಕ್ಷಿತ ತಪಸಾಣೆ ಕೈಗೊಂಡು ವರದಿಗೆ ಸೂಚಿಸಿದೆ
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ಉಲ್ಲೇಖಿತ ಅಧಿಸೂಚನೆ ದಿನಾಂಕ:11.12.2023 ರಲ್ಲಿ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.

You cannot copy content of this page