ಕರ್ನಾಟಕ

ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ.


ಬೆಂಗಳೂರು ಜೂ.6 ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದ ಬಾರೆ
ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದರು.ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಗರಣದ ಬಗ್ಗೆ ಕೆಲಕಾಲ ಸಿಎಂ ಜೊತೆಗೆ ಚರ್ಚೆ ನಡೆಸಿದರು. ಆ ಬಳಿಕ ಈ ಪ್ರಕರಣದ ಹೊಣೆ ಹೊತ್ತಂತ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಅಂದಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿದೆ. ತನಿಖೆ ನಡೆಸುತ್ತಿರುವಂತ ಎಸ್‌ಐಟಿ ಅಧಿಕಾರಿಗಳು ಎಂಡಿ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ರಾಜೀನಾಮೆ ನೀಡುವಂತೆ ವಿರೋಧ ಪಕ್ಷಗಳು ಒತ್ತಾಯಿಸಿ ಪ್ರತಿಭಟನೆ ಕಾವು ಹೆಚ್ಚಾಗಿದ್ದರಿಂದ ಸರಕಾರಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ಸಮಾಜಕಲ್ಯಾಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ತೊಡೆತಟ್ಟಿ ಗೆಲುವು ಸಾಧಿಸಿದ್ದ ಬಿ. ನಾಗೇಂದ್ರ ಅವರಿಗೆ ಸಮಾಜ ಕಲ್ಯಾಣ ಸಚಿವ ಸ್ಥಾನ ಸಿಕ್ಕಿತ್ತು ಸಿದ್ದರಾಮಯ್ಯ ಅವರ ಸಂಪುಟ ಸೇರುವಲ್ಲಿ ಅವರು ಯಶಸ್ವಿಯಾಗಿದ್ದರು 2023ರ ಮೇ 27ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು 2024 ರ ಜೂ6 ಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 2024-25ನೇ ಸಾಲಿನ ರಿಯಾಯಿತಿ ದರದ ಬಸ್‌ ಪಾಸ್‌ಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು ಜೂ.1 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 2024-25ನೇ ಸಾಲಿನ ರಿಯಾಯಿತಿ ದರದ ಬಸ್‌ ಪಾಸ್‌ಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಗಳು ಬಸ್‌ ಪಾಸ್‌ಗಾಗಿ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇಲ್ಲ. ಅಲ್ಲದೇ ವಿದ್ಯಾರ್ಥಿಗಳು ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು 30 ರೂ. ಸೇವಾ ಶುಲ್ಕ ಪಾವತಿಸಬೇಕಿದೆ.

ಸೂಚನೆ: ಶಕ್ತಿ ಯೋಜನೆಯ ಫಲಾನುಭವಿಗಳು ಬಸ್‌ ಪಾಸ್‌ ಮಾಡಿಸಬೇಕಿಲ್ಲ.

You cannot copy content of this page