ಕಲಾ ವಿಭಾಗದ ವಿದ್ಯಾರ್ಥಿಗಳು ಕಲಿಕೆಯ ಜೊತೆ ಕೌಶಲ್ಯ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ: ಪ್ರಾಂಶುಪಾಲ ಜಿ ಎಸ್ ಮಂಜುನಾಥ್ ಕರೆ 

by | 21/05/24 | ಶಿಕ್ಷಣ

ಚಳ್ಳಕೆರೆ: ರಾಜ್ಯ ಸರ್ಕಾರ ಪದವಿ ಹಂತದ ವಿದ್ಯಾರ್ಥಿಗಳಿಗೆ ನಿರುದ್ಯೋಗ ಸಮಸ್ಯೆ ಎದುರಿಸದೆ ತಮ್ಮ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲಿ ಎಂಬ ದೂರದೃಷ್ಟಿ ಉದ್ದೇಶದಿಂದ ಕಾಲೇಜು ಹಂತದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉತ್ತಮ ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಲಿ ಎಂಬ ಉದ್ದೇಶದಿಂದ ಕಲಿಕೆ ಜೊತೆ ಕೌಶಲ್ಯ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿಎಸ್ ಮಂಜುನಾಥ್ ತಿಳಿಸಿದರು. 


ನಗರದ ಕಾಲೇಜು ಆವರಣದಲ್ಲಿ ಕಲಾ ವಿಭಾಗದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸಿನಿಮಾಟಗ್ರಾಫಿ ಕುರಿತ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಲಾ ವಿಭಾಗವನ್ನು ಆರಿಸಿಕೊಂಡರೆ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿಲ್ಲ ಎಂಬ ಮಾತು ಹಿಂದಿನಿಂದಲೂ ಕೇಳಿ ಬಂದಿದೆ ಆದರೆ ಕಲಾ ವಿಭಾಗದಲ್ಲಿ ಉತ್ತಮವಾದ ಅವಕಾಶಗಳಿದ್ದು ಅವುಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ ಮನಸ್ಸು ಮಾಡಬೇಕು ಕೇವಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ವಿಫಲವಾದ ತಕ್ಷಣ ಸುಮ್ಮನಾಗದೆ ತಮ್ಮಲ್ಲಿ ಅಡಗಿರುವ ಕಲೆಯ ಕೌಶಲ್ಯವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರಪಡಿಸಿ ಹಲವಾರು ಯುವ ಪ್ರತಿಭೆಗಳು ಇಂದು ಬೆಳಕಿಗೆ ಬಂದಿದ್ದಾರೆ ಕಾಲೇಜಿನಲ್ಲಿ ನೀಡುವ ತರಬೇತಿಯನ್ನು ಉತ್ತಮ ರೀತಿಯಲ್ಲಿ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳುತ್ತ ಗಮನ ಹರಿಸಬೇಕು ತಾಲೂಕಿನಲ್ಲಿ ನಮ್ಮ ಕಾಲೇಜಿಗೆ ಉತ್ತಮವಾದ ಹೆಸರಿದೆ ದಾವಣಗೆರೆ ವಿಶ್ವವಿದ್ಯಾನಿಲಯದ ಉನ್ನತ ಅಧಿಕಾರಿಗಳು ಈ ಕಾರ್ಯಕ್ರಮವನ್ನು ಸಮರ್ಥವಾಗಿ ಏರ್ಪಡಿಸಿ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸಿರುವುದಕ್ಕೆ ಪ್ರಶಂಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು

ಕಾಲೇಜಿನ ಉಪನ್ಯಾಸಕ ಪ್ರೊ. ಕೆ ಚಿತ್ತಯ್ಯ ಮಾತನಾಡಿ ಕಲೆ ಎಂಬುದು ಎಲ್ಲರನ್ನೂ ಕೈಬೀಸಿ ಕರೆಯುತ್ತದೆ ಆದರೆ ಕೆಲವರನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತದೆ ಹಾಗೆ ಕಲಾ ವಿಭಾಗದ ವಿದ್ಯಾರ್ಥಿಗಳು ಸಹ ತಮ್ಮಲ್ಲಿರುವ ಅಗಾಧ ಪ್ರತಿಭೆಯನ್ನು ತಮ್ಮಲ್ಲಿ ಹೊಸಕಿ ಹಾಕದೆ ಸಮಾಜಕ್ಕೆ ತಿಳಿಯಪಡಿಸುವುದು ಅವಶ್ಯಕವಾಗಿದೆ ಹಲವಾರು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಉತ್ತಮ ವೇದಿಕೆ ದೊರೆತಿರುವುದಿಲ್ಲ ಹಲವರಲ್ಲಿ ನಟ, ನಿರ್ದೇಶಕ ,ಗಾಯಕ, ಸೇರಿದಂತೆ ಸಿನಿಮಾಗೆ ಸಂಬಂಧಪಟ್ಟ ಹಲವು ರೀತಿಯ ಕೌಶಲ್ಯಗಳು ಅಡಗಿರುತ್ತವೆ, ಆದರೆ ತರಬೇತಿ ಪಡೆಯಲು ಲಕ್ಷಾಂತರ ಹಣ ನೀಡಲು ಸಾಧ್ಯವಾಗದೆ ತಮ್ಮ ಪ್ರತಿಭೆಗಳನ್ನು ಮರೆಮಾಚುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಸರ್ಕಾರದ ಈ ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಕಾಲೇಜಿನಲ್ಲಿರುವ ಮೂಲಭೂತ ಸೌಲಭ್ಯಗಳನ್ನು ಬಳಸಿಕೊಂಡು ತರಬೇತುದಾರರ ಮಾರ್ಗದರ್ಶನದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವರ್ಗ ತರಬೇತಿದಾರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page