ಕಳಪೆ ಗುಣ ಮಟ್ಟದ ಕಾಮಗಾರಿ ಕೆಲವೇ ದಿನಗಳಲ್ಲಿ‌ಕಿತ್ತುಹೋದ ರಸ್ತೆ ಕುಸಿದ ಡಕ್ ಪ್ರಾಣ ಭೀತಿಯಲ್ಲಿ ಸಂಚರಿಸುವ ಗ್ರಾಮಸ್ಥರು.

by | 26/11/23 | ತನಿಖಾ ವರದಿ

‌‌‌‌
ಚಳ್ಳಕೆರೆ ನ.26. ನರೇಗಾ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಈ ಯೋಜನೆಯು ಗ್ರಾಪಂ ಪಂಚಾಯಿತಿಯ ಸಮಗ್ರ ಅಭಿವೃದ್ದಿಗೆ ವರದಾನವಾಗಿದೆ ಇದನ್ನೆ ಬಂಡವಾಳ ಮಾಡಿಕೊಂಡ ಕೆಲವು ಕಾಮಗಾರಿ ಹೆಸರಿನಲ್ಲಿ ಹಣ ಜೇಬು ತುಂಬಿಸಿಕೊಳ್ಳಲು ಮುಂದಾಗಿದ್ದಾರೆ.

ಹೌದು ಇದು ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ದೇವರೆಡ್ಡಿಹಳ್ಳಿ ಗ್ರಾಪಂ ವ್ಯಾಪ್ತಿಯ ವಸೂರು ಗ್ರಾಮದಲ್ಲಿ ನರೇಗಾ ಯೋಜನಡಯಡಿ ನಿರ್ಮಿಸಿದ ಸಿ ಸಿ ರಸ್ತೆ ಹಾಗೂ ಡಕ್ ನಿರ್ಮಿಸಿ ಆರು ತಿಂಗಳಲ್ಲೆ ರಸ್ತೆ ಹಾಗೂ ಡಕ್ ಕಿತ್ತುಹೋಗಿದ್ದು ಇದರಿಂದ ವಾಹನ ಸವಾರರಿಗೆ ಅಪಘಾತಕ್ಕೆ ಕೈಬೀಸಿ ಕರೆಯುವಂತಾಗಿದೆ.
ನರೇಗಾ ಯೋಜನೆಯಡಿಯಲ್ಲಿ ಕಾಂಕ್ರಿಟ್ ಚರಂಡಿ ಕಾಮಗಾರಿಯನ್ನು ಅತ್ಯಂತ ಕಳಪೆಯಾಗಿ ನಿರ್ವಹಿಸಿದ್ದಾರೆ ನಿರ್ಮಿಸಿ ಕೆಲವೇ ದಿನಗಳಲ್ಲಿ ಕಿತ್ತು ಹೋಗಿದ್ದು ಈ ರಸ್ತೆಯಲ್ಲಿ ವಿದ್ಯಾರ್ಥಿಗಲಕು.ವೃದ್ದರು.ವಿಕಲಚೇತನರು ವಾಹನಗಳು ಸಂಚರಿಸುವ ಮುಖ್ಯ ರಸ್ತೆಯಾಗಿದ್ದು ಡಕ್ ಕುಸಿದಿದ್ದು ವಾಹನ ಸವಾರರು ಮಕ್ಕಳು ವೃದ್ದರು ಪ್ರಾಣ ಭಯದಲ್ಲಿ ಸಂಚರಿಸುವಂತಾಗಿದೆ ಈ ಬಗ್ಗೆ ಅಧಿಕಾರಿಗಳ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಯುವಕ ಅಶೋಕ್ ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.


ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿರುವ ಕಾಂಕ್ರಿಟ್ ರಸ್ತೆ ಹಾಗೂ ಡಕ್ ಕಳಪೆ ಕಾಮಗಾರಿಯಿಂದಾಗಿ ಕುಸಿದಿದ್ದು ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ರಸ್ತೆ ಅಪಘಾತಕ್ಕೆ ತುತ್ತಾಗುವ ಮುನ್ನವೇ ದುರಸ್ಥಿ ಪಡಿಸುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page