ಕವಾಡಿಗರಹಟ್ಟಿ ಪ್ರಕರಣ ಮರುಕಳಿಸದಂತೆ ಎಚ್ಚರ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ಕುಡಿಯುವ ನೀರು ಪೂರೈಕೆ: ಮುನ್ನೆಚ್ಚರಿಕೆ ವಹಿಸಲು ತಾಕೀತು

by | 21/08/23 | ಆರೋಗ್ಯ


ಹಿರಿಯೂರು ಆ.21:
ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಹಿರಿಯೂರು ನಗರದ ನೆಹರು ಮೈದಾನದಲ್ಲಿ ಸೋಮವಾರ ನಗರಸಭೆ ವತಿಯಿಂದ ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆ, ನೈರ್ಮಲ್ಯೀಕರಣದ ಬಗ್ಗೆ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಗರ ಮತ್ತು ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೈರ್ಮಲ್ಯ ಮತ್ತು ಕುಡಿಯುವ ನೀರಿನ ಕಾರಣಕ್ಕೆ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯ ಕಲುಷಿತ ನೀರು ಸೇವನೆಯ ಪ್ರಕರಣ ಮರುಕಳಿಸದ ರೀತಿಯಲ್ಲಿ ಅಧಿಕಾರಿಗಳು ಎಚ್ಚರವಹಿಸಬೇಕು. ಜೊತೆಗೆ ಸಾರ್ವಜನಿಕರೂ ತಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿರಿಸಿಕೊಂಡು, ಹಾಗೂ ವೈಯಕ್ತಿಕ ಸ್ವಚ್ಛತೆ ಕಾಯ್ದುಕೊಳ್ಳುವ ಮೂಲಕ ಯಾವುದೇ ರೋಗಗಳು ಹರಡದಂತೆ, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು. ಅಲ್ಲದೆ ನೀರು ಮತ್ತು ನೈರ್ಮಲ್ಯ ಕುರಿತು ಅರಿವು ಮೂಡಿಸುವ ಕರಪತ್ರಗಳನ್ನು ಸಾರ್ವಜನಿಕರಿಗೆ ಸಚಿವರು ವಿತರಿಸಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಮನೆಯ ಕಸವನ್ನು ವಿಂಗಡಿಸಿ ಕಸದ ವಾಹನಗಳಿಗೆ ಕೊಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಕಸವನ್ನು ಬೀದಿಗೆ ತಂದು ಸುರಿದರೆ ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ಕೊಟ್ಟಂತೆ ಆಗುತ್ತದೆ. ಬಯಲು ಶೌಚ ಪದ್ಧತಿಯನ್ನು ಸಂಪೂರ್ಣ ನಿಲ್ಲಿಸಬೇಕು ಎಂದು ಹೇಳಿದರು.
ಪ್ರತಿಯೊಬ್ಬರು ಕಾಯಿಸಿ ಆರಿಸಿದ ನೀರನ್ನೇ ಕುಡಿಯಬೇಕು. ಇದರಿಂದ ನೀರಿನಲ್ಲಿ ಯಾವುದೇ ರೋಗಕಾರಕ ಸೂಕ್ಷ್ಮಾಣು ಜೀವಿಗಳಿದ್ದಲ್ಲಿ ಅವು ನಾಶವಾಗಿ, ಶುದ್ಧ ಹಾಗೂ ರೋಗಾಣು ರಹಿತ ಕುಡಿಯುವ ನೀರು ಲಭಿಸಿದಂತಾಗುತ್ತದೆ. ಸ್ವಚ್ಛತೆ ಕೆಲಸ ನಗರಸಭೆಯ ಜವಾಬ್ದಾರಿ ಎಂಬ ಧೋರಣೆ ಸಾರ್ವಜನಿಕರಲ್ಲಿ ಬೇಡ. ಪರಿಸರವನ್ನು ಸ್ವಚ್ಛವಾಗಿರಿಸಿಕೊಂಡು, ರಸ್ತೆಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡದೆ, ವ್ಯವಸ್ಥಿತ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ನಗರಸಭೆಯೊಂದಿಗೆ ನಾಗರೀಕರು ಸಹಕರಿಸಿದರೆ ಮಾತ್ರ ಸುಂದರ ನಗರ ನಿರ್ಮಾಣವಾಗಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೇಶ್ ಕುಮಾರ್, ಡಿವೈಎಸ್ಪಿ ಚೈತ್ರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಘವೇಂದ್ರ, ಪೌರಾಯುಕ್ತ ಎಚ್. ಮಹಂತೇಶ್, ಆರೋಗ್ಯ ಇಲಾಖೆಯ ವಿನಯ್, ಮುಖಂಡರಾದ ಖಾದಿರಮೇಶ್, ಈರಲಿಂಗೇಗೌಡ, ಕಂದಿಕೆರೆ ಸುರೇಶ್ ಬಾಬು, ಸಾದತ್ ಉಲ್ಲಾ, ಕಂದಿಕೆರೆ ಜಗದೀಶ್, ನಗರಸಭೆ ಸದಸ್ಯರು ಇದ್ದರು.

ಬೃಹತ್ ಜಾಥಾ:
******* ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಲು ಏರ್ಪಡಿಸಿದ್ದ ಬೃಹತ್ ಜಾಗೃತಿ ಜಾಥಾ ಹಿರಿಯೂರು ನಗರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಸಂಚರಿಸಿತು. ಜಾಥಾದಲ್ಲಿ ನಗರಸಭೆ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು, ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರಿನ ಕುರಿತು “ಬಿಸಿ ಬಿಸಿಯಾದ ಆಹಾರ ಸೇವಿಸಿ”, “ಪರಿಸರ ಸ್ವಚ್ಛತೆ ನಮ್ಮ ನಿಮ್ಮೆಲ್ಲರ ಜವಾಬ್ದಾರಿ”, “ಕಾಯಿಸಿ ಆರಿಸಿದ ನೀರು ಕುಡಿಯಿರಿ”, “ಕಸಕಡ್ಡಿಗಳನ್ನು ಎಲ್ಲೆಂದರಲ್ಲಿ ಹಾಕಬೇಡಿ” ಮುಂತಾದ ಜಾಗೃತಿ ಸಂದೇಶಗಳ ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತ ಘೋಷಣೆಯೊಂದಿಗೆ ಸಾಗಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page