ಕವಾಡಿಗರ ಹಟ್ಟಿ-ಆಶ್ರಯ ಬಡಾವಣೆ ಆಯ್ದ ಸ್ಥಳಗಳಲ್ಲಿ ಗುಂಪು ಸಭೆ ಸುಳ್ಳು ಸುದ್ದಿಗಳ ಕಡೆ ಕಿವಿಗೊಡದೆ, ಸ್ವಚ್ಛತೆಯ ಕಡೆ ಗಮನ ಹರಿಸಿ

by | 24/08/23 | ಆರೋಗ್ಯ


ಚಿತ್ರದುರ್ಗ ಆ.24:
ಚಿತ್ರದುರ್ಗ ನಗರ ಸಮೀಪದ ಕವಾಡಿಗರಹಟ್ಟಿ-ಆಶ್ರಯ ಬಡಾವಣೆಯ ಆಯ್ದ ಸ್ಥಳಗಳಲ್ಲಿ ಸಮಾಲೋಚನೆ ಗುಂಪು ಸಭೆಗಳನ್ನು ನಡೆಸಿ ಸಾರ್ವಜನಿಕರಿಗೆ ವಿಶ್ವಾಸ ಹಾಗೂ ಭರವಸೆ ಮೂಡಿಸುವ ಕೆಲಸ ನಡೆಸಲಾಯಿತು.
ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಗುರುವಾರ ಜನಜಾಗೃತಿಯ ಒಂದು ಭಾಗವಾಗಿ ಕವಾಡಿಗರಹಟ್ಟಿ-ಆಶ್ರಯ ಬಡಾವಣೆಯ ಮನೆ ಮನೆ ಭೇಟಿ ಅಂತರ್ ವೈಯಕ್ತಿ ಸಮಾಲೋಚನೆ ನಡೆಸಲಾಯಿತು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ಜನರು ಸುಳ್ಳು ಸುದ್ದಿಗಳನ್ನು ಆಲಿಸದೆ ಪರಿಸರ ಸ್ವಚ್ಛತೆ, ವೈಯಕ್ತಿಕ ಸ್ವಚ್ಛತೆ, ಶುಚಿಯಾದ ಆಹಾರ ಸೇವನೆ ಮಾಡುವತ್ತ ಗಮನಹರಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ತಾತ್ಕಾಲಿಕ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದೆ. ಇದರ ಉಪಯೋಗವನ್ನು ಪಡೆದುಕೊಳ್ಳಿ. ಅನಾವಶ್ಯಕ ಭಯಪಡುವುದು ಬೇಡ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಕೈ ತೊಳೆಯುವ ವಿಧಾನ ಸಾಬೂನಿನ ಉಪಯೋಗ ಶೌಚಾಲಯಗಳ ಬಳಕೆ ಕಾಯಿಸಿ ಆರಿಸಿದ ನೀರಿನ ಉಪಯೋಗ ಜೀರ್ಣವಾಗುವಂತಹ ಆಹಾರ ಬಳಕೆಯ ಬಗ್ಗೆ ಮಾರ್ಗದರ್ಶನ ನೀಡಿದರು.
ಮನೆ ಮನೆ ಭೇಟಿಯ ಸಮಯದಲ್ಲಿ ಆಪ್ತ ಸಮಾಲೋಚನೆ ನಡೆಸಲಾಯಿತು. ಆರು ವಿವಿಧ ಸ್ಥಳಗಳಲ್ಲಿ ಗುಂಪು ಸಭೆಗಳನ್ನು ನಡೆಸಲಾಯಿತು. ಕರಪತ್ರಗಳ ನೀಡುವಿಕೆಯ ಮೂಲಕ ಆರೋಗ್ಯ ಮಾಹಿತಿ ಶಿಕ್ಷಣ ನೀಡಲಾಯಿತು.
ಕಾರ್ಯಕ್ರಮದಲ್ಲಿ ಡಾ.ಯಶಸ್, ಡಾ.ಸೀಮಾ, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್, ನಂದೀಶ್, ಸಮುದಾಯ ಆರೋಗ್ಯ ಅಧಿಕಾರಿಗಳು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page