ಹಿರಿಯೂರು:-
ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಮುಖಂಡರು-ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ…
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ದೃವೀಕರಣ ಆಗುತ್ತಿದ್ದು ಕ್ಷೇತ್ರದ ಶಾಸಕಿ ಶ್ರೀಮತಿ ಕೆ ಪೂರ್ಣಿಮಾ ಶ್ರೀನಿವಾಸ್ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು-ಕಾರ್ಯಕರ್ತರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಹಿರಿಯೂರು ತಾಲ್ಲೂಕು ಜೆ ಜಿ ಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಾಲ್ಮೀಕಿ ಸಮುದಾಯದ ಮುಖಂಡರಾದ ಶ್ರೀ ನಟರಾಜ್ ಅವರು ಅವರ ಅನೇಕ ಬೆಂಬಲಿಗರಾದ ಕರಿಯಪ್ಪ, ನಾಗೇಶ್, ಮಧು, ರಾಕೇಶ್, ಮೀಸೆ ಕರಿಯಣ್ಣ ಮುಂತಾದವರು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾದ ಜಗದಾಂಬ ಮಹೇಶ್, ಮುಖಂಡರಾದ ಶ್ರೀರಾಮಣ್ಣ, ಸುನಿಲ್, ಮಂಜುನಾಥ, ರಾಮಣ್ಣ, ಸುರೇಶ್, ಮುರುಳಿ ನರಸಿಂಹಮೂರ್ತಿ ಸೇರಿದಂತೆ ಬಿ ಜೆ ಪಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳು, ಸೇರಿದಂತೆ ಇತರರು ಉಪಸ್ಥಿತರಿದ್ದರು.,
0 Comments