ಕಾಂಗ್ರೆಸ್ ತನ್ನ ಕಾಲದ ಹಗರಣಗಳ ಬಗ್ಗೆ ಮೊದಲು ಉತ್ತರ ನೀಡಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by | 15/02/23 | ರಾಜಕೀಯ

ಬೆಂಗಳೂರು : ಕಾಂಗ್ರೆಸ್ ನವರ ಹಿಂದಿನ ಹಗರಣಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಅವರ ಮೇಲಿರುವ ಆರೋಪಗಳಿಗೆ ಉತ್ತರ ಕೊಡಲಿ. ಅವರ ಕಾಲದಲ್ಲಿ ಆಗಿರುವ ಟೆಂಡರ್ ಹಗರಣಗಳ ಬಗ್ಗೆ ಉತ್ತರ ಕೊಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಹೋಟೆಲ್ ಕ್ಯಾಪಿಟಲ್ ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಅವರು ಹಿಂದೆ ಮಾಡಿರುವ ಕರ್ಮಕಾಂಡವನ್ನು ನೆನಪು ಮಾಡಿಕೊಂಡು ಮಾತನಾಡುತ್ತಾರೆ. ಯಾವ ಗುತ್ತಿಗೆದಾರರನ್ನು ನೀಡಬೇಡಿ. ಮುಂದೆ ಅಧಿಕಾರಕ್ಕೆ ಬಂದು ತನಿಖೆ ಮಾಡಿಸುತ್ತೇವೆ ಎಂದು ಧಮಕಿ ಹಾಕುತ್ತಿದ್ದಾರೆ. ಇದರ ಅರ್ಥ ಏನೆಂದರೆ ಅಧಿಕಾರಕ್ಕೆ ಬಂದರೆ ಸುಲಿಗೆ ಮಾಡಲು ಬರುತ್ತಿದ್ದಾರೆ ಎನ್ನುವುದು ಬಹಳ ಸ್ಪಷ್ಟವಾಗಿದೆ. ಅವರ ಅವರ ಅಜೆಂಡಾ ಅವರೇ ಹೇಳಿಕೊಂಡಿದ್ದಾರೆ. ಶೇ 40 ರಷ್ಟು ಕಮಿಷನ್ ಆರೋಪ ಯಾವುದೂ ನಿರೂಪಿತವಾಗಿಲ್ಲ. ನ್ಯಾಯಾಲಯದಲ್ಲಿ ಕೊಡುವುದಾಗಿ ಹೇಳಿದ್ದು ಇನ್ನೂ ಕೊಟ್ಟಿಲ್ಲ. ಅವರು ಎಲ್ಲಿ ಬೇಕಾದರೂ ನಿರ್ದಿಷ್ಟ ಪ್ರಕರಣ ದಾಖಲು ಮಾಡಿದರೆ ತನಿಖೆಯಾಗುತ್ತದೆ. ಅದನ್ನು ಮಾಡುವುದು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆದರೆ ಏನೂ ಪ್ರಯೋಜನವಿಲ್ಲ ಎಂದರು.

ಪಾರದರ್ಶಕ ವ್ಯವಸ್ಥೆ :

ಗುಳಿಹಟ್ಟಿ ಶೇಖರ್ ಅವರು ಸಾಮಾನ್ಯವಾಗಿ ಪತ್ರ ಬರೆದಿದ್ದಾರೆ. ನಾವು ಅವರಿಗೆ ಪತ್ರ ಮುಖೇನ ನಿರ್ದಿಷ್ಟ ಪ್ರಕರಣವಿದ್ದರೆ ನೀಡಲಿ, ತನಿಖೆ ಮಾಡುತ್ತೇವೆ ಎಂದು ಕೇಳುತ್ತಿದ್ದೇವೆ. ನಿನ್ನೆ ಸದನದಲ್ಲಿಯೂ ಸ್ಪಷ್ಟವಾಗಿ ಕೇಳಿದ್ದೇವೆ. ಯಾವುದಾದರೂ ಅಧಿಕಾರಿ ಯಾವುದೇ ಹಂತದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ತನಿಖೆ ಮಾಡುತ್ತೇವೆ ಎನ್ನುವುದು ನಮ್ಮ ನಿಲುವಾಗಿದೆ. ಇದ್ಯಾವುದೂ ನೀಡದೆ, ಕೇವಲ ಹೇಳಿಕೆ ನೀಡಿದರೆ ಆಗುವುದಿಲ್ಲ. ಕಾಂಗ್ರೆಸ್ 5 ವರ್ಷ ಆಡಳಿತ ಮಾಡಿದೆ. ಅವರೂ ಟೆಂಡರ್ ಕರೆದಿದ್ದಾರೆ. ನಾವು ಬಂದ ನಂತರ ಟೆಂಡರ್ ಪರಿಶೀಲನಾ ಸಮಿತಿಯನ್ನು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನೇಮಕ ಮಾಡಿದ್ದೇವೆ. ಟೆಂಡರ್ ಪರಿಶೀಲನೆಯಾಗುತ್ತದೆ ಹಾಗೂ ಇಡೀ ಪ್ರಕ್ರಿಯೆ ಪಾರದರ್ಶಕವಾಗಿದೆ. ಯಾರು ಬೇಕಾದರೂ ದೂರು ನೀಡಬಹುದಾಗಿದೆ.

ಭ್ರಷ್ಟಾಚಾರಕ್ಕೆ ರಹದಾರಿ :

ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಿಗಮದಲ್ಲಿ ಎರಡು ಹಂತದ ಪರಿಶೀಲನೆಯನ್ನು ತೆಗೆದವರು ಅವರು, ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದರು.

Latest News >>

ಮಹಾವೀರರ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ: ತಹಸಿಲ್ದಾರ್ ರೆಹಾನ್ ಪಾಷ

ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಜೈನ ಸಮುದಾಯ ವತಿಯಿಂದ ಇಂದು ಮಹಾವೀರ  ಜಯಂತಿಯನ್ನು ಲೋಕಸಭಾ ಚುನಾವಣೆ...

ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ನ ಸ್ಥಳಕ್ಕೆಮುಖ್ಯಕಾರ್ಯದರ್ಶಿಯಾದ ಅಂಜುಮ್ ಫರ್ವೇಜ್ ಭೇಟಿ

ಹಿರಿಯೂರು: ವಾಣಿವಿಲಾಸ ಸಾಗರದ ಐಮಂಗಲ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ಸ್ಥಳಕ್ಕೆ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀರಾಮನವಮಿ- ಶ್ರೀರಾಮ ಭಕ್ತರಿಂದ ಪಾನಕ. ಕೋಸಂಬರಿ ವಿತರಣೆ- ವಿಶೇಷ ಪೂಜೆ.

ಚಳ್ಳಕೆರೆ ಜನಧ್ವನಿ ವಾರ್ತೆ ಏ17. ಶ್ರೀರಾಮನವಮಿ ಅಂಗವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀರಾಮ ಜಪದೊಂದಿಗೆ ಸಡಗರ ಸಂಭ್ರಮದಿಂದ...

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡವಂತ ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ :ಕಸವನಹಳ್ಳಿ ರಮೇಶ್ ಆರೋಪ

ಹಿರಿಯೂರು: ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ ಹಾಗೂ ಭದ್ರಾ...

ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು ಪ್ರಯತ್ನ: ಎಚ್.ಎನ್.ಶಿವೇಗೌಡ

ಹಿರಿಯೂರು: ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು...

ಯುಗಾದಿ ಹಬ್ಬಕ್ಕೆ ಬಂದವರಿಗೆ ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು.

ಚಳ್ಳಕೆರೆ ಏ11 ಯುಗಾದಿ ಹಬ್ಬ ಮುಗಿಸಿಕೊಂಡು ಮತ್ತೆ ಬೆಂಗಳೂರಿಗೆ ತೆರಳಲು ಸಾರಿಗೆ ಬಸ್ಸುಗಳ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ....

ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಅಗತ್ಯವಸ್ತುಗಳ ಖರೀದಿ ಬಲು ಜೋರು..

ಚಳ್ಳಕೆರೆ ಚಳ್ಳಕೆರೆ ಏ.8 ಅಗತ್ಯ ವಸ್ತುಗಳ ಬೆಳೆ ಏರಿಕೆ , ಬಿಸಿಲಿನ ತಾಪ ಹಾಗೂ ಬರಗಾಲದ ನಡುವೆಯೂ ರಂಜಾನ್ ಹಾಗೂ ಯುಗಾದಿ ಹಬ್ಬದ ಖರೀದಿ ಭರಾಟೆ...

ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು‌ ಶಾಂತಿ‌ಸೌಹಾರ್ಧತೆಯಿಂದ ಆಚರಿಸಿ ಠಾಣಾಧಿಕಾರಿ ಕೆ.ಕುಮಾರ್.

ಚಳ್ಳಕೆರೆ ಏ.8 ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಠಾಣಾಧಿಕಾರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page