ಮಂಡ್ಯ : ಕಾಂಗ್ರೆಸ್ ನವರು ದೇಶದ ಪರವಾಗಿದ್ದಾರೋ ಅಥವಾ ಭಯೋತ್ಪಾದಕರ ಪರವಾಗಿದ್ದಾರೋ ಎಂಬ ಬಗ್ಗೆ ಸ್ಪಷ್ಟವಾದ ಉತ್ತರ ಬೇಕು. ಕಾಂಗ್ರೆಸ್ ನ ನಿಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ನವರು ಟಿಪ್ಪುವಿನ ಬಗ್ಗೆ ಹಾಗೂ ಭಯೋತ್ಪಾದಕರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಾರೆ. ಇಂತಹ ಕೆಲಸಕ್ಕೆ ಕೈಹಾಕಿದರೆ ಇಲ್ಲಿನ ಜನ ಹಾಗೂ ಕಾನೂನು ಅವರನ್ನು ಕ್ಷಮಿಸುವುದಿಲ್ಲ ಎಂದರು.
ಕಾಂಗ್ರೆಸ್‌ನಿಂದ ರಾಜ್ಯಕ್ಕೆ ದೌರ್ಭಾಗ್ಯ :
ಕಾಂಗ್ರೆಸ್ ನವರ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಮೋದಿಯವರದ್ದು, ಸಿದ್ದರಾಮಯ್ಯನವರ ಚಿತ್ರದ ಚೀಲ ಮಾತ್ರ ಕಾಂಗ್ರೆಸ್ ನವರದ್ದು. ಬಡ ಎಸ್ ಸಿ ಎಸ್ ಟಿ ಮಕ್ಕಳ ಹಾಸ್ಟೆಲ್ ಗಳ ದಿಂಬು ಹಾಸಿಗೆ ಖರೀದಿಯಲ್ಲಿ ಹಗರಣ, ಸಣ್ಣ ಮತ್ತು ಬೃಹತ್ ನೀರಾವರಿಯಲ್ಲಿ ಭ್ರಷ್ಟಾಚಾರ ಮಾಡಿ, ಕಾಂಗ್ರೆಸ್ ರಾಜ್ಯಕ್ಕೆ ದೌರ್ಭಾಗ್ಯವನ್ನು ತಂದರು. ಮಂಡ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ಕನಸು ಕಾಣುತ್ತಿದ್ದಾರೆ. ಆದರೆ ಜನ ಜಾಗೃತರಾಗಿದ್ದು, ದಕ್ಷಿಣ ಭಾಗದ ಕರ್ನಾಟಕದಲ್ಲಿ ಭಾಜಪ ಗೆಲುವನ್ನು ಕಾಣಲಿದೆ ಎಂಬ ವಿಶ್ವಾಸವಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಕಂದಾಯ ಸಚಿವ ಆರ್.ಅಶೋಕ್, ಕ್ರೀಡಾ ಸಚಿವ ಡಾ. ಕೆ.ಸಿ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಮುಖಂಡರುಗಳಾದ ಇಂದ್ರೇಶ್ ಸಿ.ಪಿ ಉಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
0 Comments