ಚಳ್ಳಕೆರೆ ನ.20. ಕಾಡುಗೊಲ್ಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ ತಾಲೂಕು ಕಚೇರಿ ಮುಂದೆ ತಾಲೂಕು ಕಾಡುಗೊಲ್ಲರ ಸಂಘ,ಕರ್ನಾಟಕ ಕಾಡುಗೊಲ್ಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಡಾ ಕಾಂತರಾಜ್ ನಿಕಟಪೂರ್ವ ಹಿಂದಳಿದ ವರ್ಗಗಳ ಆಯೋಗದ ಅಧ್ಯಕ್ಷರ ವರದಿಯನ್ನು ಕೂಡಲೇ ಅನುಷ್ಠಾನಗೊಳಸ ಬೇಕು12 ಜಿಲ್ಲೆಯಗಳಲ್ಲಿ 40 ತಾಲೂಕುಗಳಲ್ಲಿ1250 ಕ್ಕೂ ಹೆಚ್ಚಿನ ಗೊಲ್ಲರಹಟ್ಟಿಗಳಲ್ಲಿ ಹಾಗೂ ಉದ್ಯೋಗ ಹಾಗೂ ವಿದ್ಯಾಭ್ಯಾಸ ಸಲುವಾಗಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸುಮಾರು 6 ರಿಂದ 8 ಲಕ್ಷ ಜನ ಸಂಖ್ಯೆ ಹೊಂದಿರುವ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದ್ದರೂ ಸಹ ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತರುವಲ್ಲಿ ಮೀನಾಮೇಷ ಎಣಿಸುತ್ತಿದೆ. ಹಲವು ಬಾರಿ ಪ್ರತಿಭಟನೆ ಮಾಡಿದರೂ ಸಹ ಸರಕಾರಗಳು ತಮ್ಮಬೇಡಿಯನ್ನು ಈಡೇರಿಸಲು ಇಚ್ಚಾ ಶಕ್ತಿ ತೋರುತ್ತಿಲ್ಲ ಕಾಡುಗೊಲ್ಲರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಜಾತಿಪಟ್ಟಿಗೆ ಸೇರಿಸುವಲ್ಲಿ ಯಶಸ್ವಿಯಾಗಿರುವ ಕಾಡುಗೊಲ್ಲ ಇನ್ನೂ ಜಾತಿ ಪ್ರಮಾಣ ಪತ್ರ ಸಿಕ್ಕಿಲ್ಲ, ಸಂಬಂಧಿಸಿದವರನ್ನು ಕೇಳಿದರೆ ಕೆಲವು ಕಾನೂನು ತೊಡಕುಗಳಿಂದ ವಿಳಂಬವಾಗಿದೆ ಎನ್ನುತ್ತಾರೆ. ಕೂಡಲೇ ರಾಜ್ಯ ಸರ್ಕಾರ ಕಾಡುಗೊಲ್ಲ ಸಮುದಾಯಕ್ಕೆ ಎಲ್ಲಾ ತಾಲ್ಲೂಕು ಕಚೇರಿಗಳಲ್ಲೂ ಜಾತಿ ಪ್ರಮಾಣ ಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕಾಡುಗೊಲ್ಲರು ಬುಡಕಟ್ಟು ಸಂಸ್ಕೃತಿ ಇಂದಿಗೂ ಆಚರಣೆಯಲ್ಲಿದೆ ಶೈಕ್ಷಣಿಕವಾಗಿ , ಆರ್ಥಿಕವಾಗಿ ಹಿಂದುಳಿದಿದ್ದು ಕೆಲವು ಕಡೆ ಕಾಡುಗೊಲ್ಲ ಎಂದು ಜಾತ್ರಿ ಪ್ರಮಾಣ ಪತ್ರ ನೀಡಿದ್ದರೂ ಸಹ ಸರಕಾರ ಕಾಡುಗೊಲ್ಲರ ಬೇಡಿಕೆ ಈಡೇರಿಸುವಲ್ಲಿ ವಿಳಂಭ ದೋರಣೆ ಮಾಡುತ್ತಿದದ್ದು ನಮ್ಮತಾಳ್ಮೆ ಪರಿಕ್ಷೆ ಮಾಡುತ್ತಿದೆ ಇನ್ನೇ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಅಷ್ಟರಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸ ಬೇಕಾಗುತ್ತದೆ ಎಂದು ಕಾಡುಗೊಲ್ಲ ಸಮುದಾಯದ ಮುಖಂಡರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ತಾಲೂಕ ಕಾಡುಗೊಲ್ಲ ಸಂಘದ ಅಧ್ಯಕ್ಷರು ಸದಸ್ಯರು, ಜಿಲ್ಲಾ ಪಂಚಾಯತ್ , ತಾಲೂಕ ಪಂಚಾಯತ್ ಮಾಜಿ ಸದಸ್ಯರು, ನಗರಸಭೆ, ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಕಾಡುಗೊಲ್ಲ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
0 Comments