ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡುವಂತೆ ಕಾಡುಗೊಲ್ಲ ಮುಖಂಡರು ತಹಶೀಲ್ದಾರ್ ವಾಹನ ತಡೆದು ಪ್ರತಿಭಟನೆ.

by | 08/12/23 | ಪ್ರತಿಭಟನೆ


ಚಳ್ಳಕೆರೆ ಡಿ.8 ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ಸರ್ಕಾರಿ ಇಲಾಖೆ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಅಗತ್ಯ ದಾಖಲೆಗಳ ಅಗತ್ಯವಿದ್ದು ಈ ಸಂಬಂಧ ಕಾಡುಗೊಲ್ಲ ಸಮಾಜದ ಹೆಸರಿನಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡುವಂತೆ ಕಾಡುಗೊಲ್ಲ ಸಮುದಾಯದ ಮುಖಂಡರು ತಹಶೀಲ್ದಾರ್ ಗೆ ಪ್ರಶ್ನಿಸಿದ್ದಾರೆ.

ಚಳ್ಳಕೆರೆ ನಗರದ ತಾಲೂಕು ಕಚೇರಿ ಆವರಣದಲ್ಲಿ ಕಾಡುಗೊಲ್ಲ ಎಂದು ಜಾತ್ರಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ಸುತ್ತೋಲೆ ಇದ್ದರೂ ಸಹ ಕಾಡಗೊಲ್ಲರ ಜಾತಿ ಪ್ರಮಾಣ ಪತ್ರ ಕೊಡಲು ಮೀನಾ ಮೇಶ ಎಣಿಸುತ್ತಿದ್ದಾರೆ. ಜಿಲ್ಲಾ ಉಸ್ತುವರಿ ಸಚಿವ ಡಿ.ಸುಧಾಕರ್ ಹಾಗೂ ಶಾಸಕ ಟಿ.ರಘುಮೂರ್ತಿಯವರು ಹೇಳಿದರೂ ಸಹ ಅಧಿಕಾರಿಗಳು ಪ್ರಮಾಣ ಪತ್ರ ನೀಡಲು ಮುಂದಾಗುತ್ತಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ತಹಶೀಲ್ದಾರ್ ರೇಹಾನ್ ಪಾಷ ಮಾತನಾಡಿ ಮತ್ತೆ ಹೊಸದಾಗಿ ಅರ್ಜಿ ಹಾಕಿ ಬುಧವಾರ ಕೊಡುತ್ತೇನೆ ಎಂದು ಮಾತು ಕೊಟ್ಟಿರುತ್ತಾರೆ ಬೇರೆ ಬೇರೆ ತಾಲೂಕುಗಳಲ್ಲಿ ಕೊಟ್ಟಿದ್ದಾರೆ ನಮ್ಮ ತಾಲೂಕಲ್ಲಿ ಯಾಕೆ ಕೊಡುತ್ತಿಲ್ಲ..? ಎಂಬುವುದೇ ನಮ್ಮ ಪ್ರಶ್ನೆ?

ತಾಲೂಕಿನ ನಾಡ ಕಚೇರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ತಾಲೂಕು ಕಾಡುಗೊಲ್ಲರ ಸಂಘದ ವತಿಯಿಂದ ತಹಸೀಲ್ದಾರ್‌ ಮನವಿ ಸಲ್ಲಿಸಿದರು.
ಕಾಡುಗೊಲ್ಲರ ಸಂಘದ ಅಧ್ಯಕ್ಷ ರಾಜಣ್ಣ ಮಾತನಾಡಿ ಕಾಡುಗೊಲ್ಲ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡುವಂತೆ ರಾಜ್ಯ ಸರ್ಕಾರ ಆದೇಶ ಜಾರಿಪಡಿಸಿದ್ದು, ಅಗತ್ಯ ದಾಖಲೆಯೊಂದಿಗೆ ನಿಯಮಾನುಸಾರ ಅರ್ಜಿ ಸಲ್ಲಿಸಿದ್ದರೂ ಸಮುದಾಯದ ಹೆಸರಿನಲ್ಲಿ ಜಾತಿ ಆದಾಯ ಪತ್ರ ನೀಡುವಲ್ಲಿ ವಿಳಂಬವಾಗುತ್ತಿದೆ. ಹೀಗಾಗಿ ಸರ್ಕಾರದ ಆದೇಶದನ್ವಯ ಕಾಡುಗೊಲ್ಲರ ಸಮುದಾಯದ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡುವಂತೆ ತಾಲೂಕಿನ ಎಲ್ಲಾ ನಾಡಕಚೇರಿಯ ಅಧಿಕಾರಿ ವರ್ಗದವರಿಗೆ ನಿರ್ದೇಶನ ನೀಡುವಂತೆ ಸಂಘದ ಅನೇಕ ಮುಖಂಡರು ಒತ್ತಾಯಿಸಿದರು.

ಇದೇ ವೇಳೆ ತಾಲೂಕು ಕಾಡುಗೊಲ್ಲರ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page