ಕಾಡುಗೊಲ್ಲ ಸಮಾಜದ ಅಭಿವೃದ್ಧಿಗಾಗಿ ನಾನು ಸದಾ ಶ್ರಮಿಸುತ್ತೇನೆ : ಜಿಲ್ಲಾಉಸ್ತುವಾರಿ ಸಚಿವ ಸುಧಾಕರ್

by | 01/07/24 | ಸುದ್ದಿ


ಹಿರಿಯೂರು :
ಕಾಡುಗೊಲ್ಲ ಸಮಾಜದ ಅಭಿವೃದ್ಧಿಗಾಗಿ ನಾನು ಸದಾ ಶ್ರಮಿಸುತ್ತೇನೆ, ಕಾಡುಗೊಲ್ಲ ಸಮಾಜಕ್ಕೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತೇನೆ, ಕಳೆದ 20 ವರ್ಷಗಳಿಂದ ನಿಮ್ಮ ಕಷ್ಟಸುಖಗಳಿಗೆ ಭಾಗಿಯಾಗುತ್ತಲೇ ಬಂದಿದ್ದೇನೆ ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ತುಳಸಿ ನಾರಾಯಣರಾವ್ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘ, ತಾಲೂಕು ಕಾಡುಗೊಲ್ಲ ಸಂಘ ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ 2023- 24 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 80ಕ್ಕಿಂತ ಹೆಚ್ಚು ಅಂಕಗಳನ್ನ ಪಡೆದಂತಹ ಕಾಡುಗೊಲ್ಲ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಡುಗೊಲ್ಲ ಸಮಾಜದ ಸಮುದಾಯ ಭವನವನ್ನು ಸಹ ಮಂಜೂರು ಮಾಡಿಸಿ ಕೊಡುವುದಾಗಿ ಹೇಳಿದ ಅವರು ಕಾಡುಗೊಲ್ಲ ಸಮಾಜದ ವಿದ್ಯಾರ್ಥಿಗಳಿಗೆ ನನ್ನ ಶಕ್ತಿ ಮೀರಿ ಸಹಾಯ ಮಾಡುತ್ತೇನೆ ಎಂಬುದಾಗಿ ಸಚಿವರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಕಾಡುಗೊಲ್ಲ ಸಮುದಾಯದ 260 ವಿದ್ಯಾರ್ಥಿಗಳಿಗೆ ಮತ್ತು ಸಮುದಾಯದ ಮುಖಂಡರಿಗಳಿಗೆ ಸನ್ಮಾನ ಮಾಡಲಾಯಿತು.
ರಾಜ್ಯ ಕಾಡುಗೊಲ್ಲ ಸಂಘದ ಅಧ್ಯಕ್ಷರಾದ ರಾಜಣ್ಣ ಮಾತನಾಡಿ, ಕಾಡುಗೊಲ್ಲ ಸಮಾಜದ ಬಹಳ ಹಿಂದುಳಿದಂತಹ ಸಮಾಜ ಪ್ರತ್ಯೇಕವಾಗಿ ಎಸ್.ಟಿ.ಮೀಸಲಾತಿ ನಮ್ಮ ಸಮಾಜಕ್ಕೆ ಬಹಳ ಅಗತ್ಯವಿದೆ, ಆದ್ದರಿಂದ ಎಸ್ ಟಿ ಮೀಸಲಾತಿಗಾಗಿ ಹೋರಾಟ ಮಾಡಲು ಸದಾ ನಿಮ್ಮೊಂದಿಗೆ ನಾನು ಇರುತ್ತೇನೆ, ಇದರ ಬಗ್ಗೆ ಸಂಶಯ ಬೇಡ ಮತ್ತು ವಿದ್ಯಾರ್ಥಿಗಳಿಗೆ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನಪಡೆಯಿರಿ ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯೂರು ತಾಲೂಕು ಕಾಡುಗೊಲ್ಲ ಸಂಘದ ಅಧ್ಯಕ್ಷರಾದ ಪಿ.ಆರ್.ದಾಸ್ ರವರು ವಹಿಸಿದ್ದರು. ವನಕಲ್ಲು ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬಸವ ರಮಾನಂದ ಶ್ರೀಗಳು ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿದ್ದರು.
ಇದೇ ಸಂದರ್ಭದಲ್ಲಿ ಚಿತ್ರದುರ್ಗ ಸಂಸದರಾದ ಗೋವಿಂದ ಕಾರಜೋಳ, ಇವರನ್ನು ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ವತಿಯಿಂದ ಶಾಲುಹೊದಿಸಿ, ಸನ್ಮಾನಿಸಿ, ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘ ಗೌರವಾಧ್ಯಕ್ಷ ಶ್ರೀಮೀಸೆ ಮಾಲಿಂಗಪ್ಪ, ಮತ್ತು ಸಂಘಟನಾ ಕಾರ್ಯದರ್ಶಿ ಕೆಟಿ.ತಿಪ್ಪೇಸ್ವಾಮಿ, ಕಾಡುಗೊಲ್ಲ ಸಂಘದ ಮುಖಂಡರು ಮತ್ತು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿಬಿ ಪಾಪಣ್ಣ, ಕಾಡುಗೊಲ್ಲ ಸಮಾಜದ ಮುಖಂಡ ಆಲದ ಮರದಹಟ್ಟಿ ರಂಗಯ್ಯ, ನಗರಸಭಾ ಮಾಜಿ ಅಧ್ಯಕ್ಷರಾದ ಶ್ರೀಮತಿ ಶಿವರಂಜಿನಿ, ಶ್ರೀರಂಗಸ್ವಾಮಿ, ನಗರ ಸದಸ್ಯ ಚಿತ್ರಜಿತ್ ಯಾದವ್, ಬಿಜೆಪಿ ಚಿತ್ತಪ್ಪ, ಅಭಿನಂದನ್, ಕಾಡುಗೊಲ್ಲ ಸಂಘದ ಮುಖಂಡ ವೇಣುಕಲ್ಲು ಗುಡ್ಡ ಕಾಡುಗೊಲ್ಲ ಸಮಾಜದ ಹಿರಿಯ ಮುಖಂಡರುಗಳು, ಯುವಕರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page