ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೋಲಿಸ್ ಇಲಾಖೆ ಜತೆ ಗೃಹರಕ್ಷಕ ದಳದ ಪಾತ್ರ ಮುಖ್ಯವಾಗಿದೆ ಶಾಸಕ ಟಿ.ರಘುಮೂರ್ತಿ.

by | 01/11/23 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ನ.1. ಪೊಲೀಸ್ ಇಲಾಖೆಯ ಅವಿಭಾಜ್ಯ ಅಂಗವಾದ ಇಲ್ಲಿನ ಗೃಹರಕ್ಷಕ ದಳದ ಸಿಬ್ಬಂದಿಗೆ ಬಹಳ‌ದಿನಗಳ ಬೇಡಿಕೆ ಈಡೇರುವಂತಾಗಿದ್ದು ನಿಮ್ಮ ಇಲಾಖೆ ಹೆಸರೇ ಹೇಳುವಂತೆ ಸಾರ್ವಜನಿಕರಿಗೆ ಉತ್ತಮ ಸೇವೆ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಹಳೆ ತಾಲೂಕು ಕಚೇರಿ ಕಟ್ಟಡದಲ್ಲಿ ಗೃಹರಕ್ಷಕ ದಳದ ಕಚೇರಿ ಉದ್ಘಾಟಿಸಿ ಮಾತನಾಡಿದರು.


ಚಳ್ಳಕೆರೆ ನಗರದ ಘಟಕದಲ್ಲಿ ಸುಮಾರು 56 ಸಿಬ್ಬಂದಿ ಕರ್ತವ್ಯನಿರ್ವಹಿಸುತ್ತಿದ್ದು, ಗೃಹರಕ್ಷಕ ಸಿಬ್ಬಂದಿಗೆ ಸ್ವಂತ ಕಚೇರಿಯೇ ಇರಲಿಲ್ಲ.ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯ ಕಾರ್ಯ ಶ್ಲಾಘನೀಯ. ಜಾತ್ರೆ ಹಬ್ಬ ಉತ್ಸವ.ಚುನಾವಣೆ. ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಸಾರ್ವಜನಿಕರ ರಕ್ಷಣೆ ಸಂಚಾರಿ ದಟ್ಟಣೆ ನಿಯಂತ್ರಿಸುವುದು ತಾಲೂಕಿನ ಗೃಹರಕ್ಷಕ ದಳ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸರ ಜೊತೆಗೆ ಗೃಹರಕ್ಷಕ ದಳವನ್ನು ಸರ್ಕಾರ ಬಳಸಿಕೊಳ್ಳುತ್ತದೆ ಈ ನಿಟ್ಟಿನಲ್ಲಿ ಉತ್ತಮ ಕಾರ್ಯವನ್ನು ಸಿಬ್ಬಂದಿಗಳು ನಿರ್ವಹಿಸುತ್ತಿದ್ದು ಅವರ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಹಂತ ಹಂತವಾಗಿ ಪರಿಹರಿಸಲು ಚಿಂತನೆ ನಡೆಸಿದೆ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ತಿಳಿಸಿದರು.

ಗೃಹರಕ್ಷಕ ದಳದ ಜಿಲ್ಲಾ ಸಂಯೋಜಕರಾದ ಸಂಧ್ಯಾ  ಮಾತನಾಡಿ ಗೃಹರಕ್ಷಕ ದಳದ ಸಿಬ್ಬಂದಿಗಳು ಹಗಲು ರಾತ್ರಿ ಎನ್ನದೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವರ ಜೀವನ ಭದ್ರತೆಗಾಗಿ ಸರ್ಕಾರ ಹಾಗೂ ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ಕೋರಿದರು.

ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ.ಮುಖ್ಯಮಂತ್ರಿ ಪದಕ ಪಡೆದ ಗೃಹರಕ್ಷಕ ದಳದ ಜಿಲ್ಲಾ ಸಂಯೋಜಕರಾದ ಸಂಧ್ಯಾ . ತಹಶೀಲ್ದಾರ್ ರೇಹಾನ್ ಪಾಷ. ಪತ್ರಕರ್ತ ಗೋಪನಹಳ್ಳಿ ಶಿವಣ್ಣರ ಇವರನ್ನು ಗೃಹ ರಕ್ಷ ದಳದವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಗೃಹರಕ್ಷಕ ದಳದ ಸಂಯೋಜಕರಾದ ಜಗನ್ನಾಥ್ ಜಿಲ್ಲಾ ಮಟ್ಟದ ಗೃಹರಕ್ಷಕ ದಳದ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *