ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್

by | 30/05/24 | ಸುದ್ದಿ

ಚಳ್ಳಕೆರೆ: ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಅವರ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್ ಅಭಿಪ್ರಾಯಪಟ್ಟರು. 

ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸಿಐಟಿಯು ಸಂಘಟನೆ ಸಂಸ್ಥಾಪನ ದಿನ ಹಾಗೂ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು

ಕಾರ್ಮಿಕರ ಶ್ರಮವನ್ನು ಗೌರವಿಸುವ ಸಲುವಾಗಿ ಭಾರತದಲ್ಲಿ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ದಿನದ 15 ಗಂಟೆಗಳ ಕಾಲ ಇದ್ದ ಕೆಲಸದ ಸಮಯದ ಮಿತಿಯನ್ನು ಎಂಟು ಗಂಟೆಗಳ ಅವಧಿಗೆ ತರಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಕಾರ್ಮಿಕರು ಅಮೆರಿಕಾದ ಚಿಕಾಗೋ ನಗರದಲ್ಲಿ ಮೇ 1 1886 ರಂದು ಪ್ರತಿಭಟನೆ ನಡೆಸಲು ಮುಂದಾದರು ಹೋರಾಟ ತೀವ್ರ ಸ್ವರೂಪ ಪಡೆದಿದ್ದರಿಂದ ಇದನ್ನು ಹತ್ತಿಕ್ಕಲು ಮೇ 4ರಂದು ಪೊಲೀಸರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದರು ಈ ದಮನಕಾರಿ ನೀತಿಯನ್ನು ಖಂಡಿಸಿ ಅಲ್ಲಿನ ಜನರು ಪ್ರತಿ ವರ್ಷ 1ರಂದು ಕಾರ್ಮಿಕ ದಿನವನ್ನಾಗಿ ಆಚರಿಸುವಂತೆ ಒತ್ತಾಯಿಸಲು ಇದರ ಫಲವಾಗಿ 1916ರಲ್ಲಿ ಕೆಲಸದ ಕಾಲಮಿತಿಯನ್ನು ಕಡಿತಗೊಳಿಸಿ 8 ಗಂಟೆಗಳ ಕಾಲ ಕೆಲಸ ಎಂದು ಆದೇಶ ನೀಡಿದರು ಅಂದಿನಿಂದ ಕಾರ್ಮಿಕ ದಿನಾಚರಣೆಯನ್ನು ಆಚರಿಸಲು ಮುಂದಾಯಿತು ಎಂದು ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು ಕಾರ್ಮಿಕ ಹಿತರಕ್ಷಣಗಾಗಿ43 ಕಾನೂನುಗಳನ್ನು ಜಾರಿಗೆ ತರಬೇಕು ಆದರೆ ಕೇಂದ್ರದ ಬಿಜೆಪಿ ಸರ್ಕಾರ 43 ಕಾನೂನುಗಳನ್ನು ರದ್ದುಗೊಳಿಸಿ 4 ಲೇಬರ್ ಕೋಡ್ ಮಾದರಿಯಲ್ಲಿ ಜಾರಿಗೆ ತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಇದರಿಂದ ಯಾವುದೇ ಅನುಕೂಲ ಕಾರ್ಮಿಕರಿಗೆ ಆಗುವುದಿಲ್ಲ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿದ್ದು ಅಂಗನವಾಡಿ ಆಶಾ ಬಿಸಿ ಊಟ ನೌಕರರಿಗೆ ವೇತನವನ್ನು ಹೆಚ್ಚಳ ಮಾಡಿಲ್ಲ ದೇಶದಲ್ಲಿ 42 ಕೋಟಿ ಅಸಂಘಟಿತ ಕಾರ್ಮಿಕರಿದ್ದು ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಕಾನೂನು ವಿರೋಧಿ ನೀತಿಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಐಟಿಯು ಸಂಘಟನೆ ಸೇರಿದಂತೆ ರೈತ ಸಂಘಟನೆಗಳು ಹೋರಾಟ ಮಾಡಿದ ಫಲವಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಂಡಿದ್ದೇವೆ ಹೊರತು ಯಾವುದೇ ರಾಜಕೀಯ ಪಕ್ಷಗಳು ಕಾರ್ಮಿಕರ ಹಿತಕ್ಕಾಗಿ ಯೋಜನೆಗಳನ್ನು ರೂಪಿಸಿಲ್ಲ ಎಂದು ಕಿಡಿಕಾರಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಐಟಿಯು ಸಂಘಟನೆಯ ತಾಲೂಕು ಅಧ್ಯಕ್ಷ ಟಿ ನಿಂಗಣ್ಣ ಮಾತನಾಡಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಾ ಬಂದಿದ್ದು ರೈತ ಕಾರ್ಮಿಕರ ಹಿತ ಕಾಯುವುದು ಸಿಐಟಿಯು ಸಂಘಟನೆಯ ಸಂಸ್ಥಾಪನೆ ದಿನದ ಧ್ಯೇಯವಾಗಿದ್ದು ಎಲ್ಲ ಅಸಂಘಟಿತ ಕಾರ್ಮಿಕ ವಲಯದ ಬೇಡಿಕೆಗಳನ್ನು ಈಡೇರಿಸಿಕೊಳ್ಳುವುದು ಸಿಐಟಿಯು ಸಂಘಟನೆಯ ಮುಖ್ಯ ಉದ್ದೇಶವಾಗಿದೆ ಚುನಾವಣೆಗಳ ಸಂದರ್ಭದಲ್ಲಿ ಕಾರ್ಮಿಕರ ಹಿತ ಕಾಯುವ ಶಾಸಕ ಹಾಗೂ ಸಂಸದರನ್ನು ಆಯ್ಕೆ ಮಾಡಿದರೆ ಮಾತ್ರ ಕಾರ್ಮಿಕರು ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಇಂದಿರಮ್ಮ ಮಾತನಾಡಿ ಕೇಂದ್ರದ ಮೋದಿ ಸರ್ಕಾರ ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಕೇವಲ ಶ್ರೀಮಂತರ ಪರವಾದ ಯೋಜನೆಗಳನ್ನು ರೂಪಿಸುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಮಹಿಳೆಯರ ಹಿತ ಕಾಪಾಡಬೇಕಾದ ಕೇಂದ್ರ ಸರ್ಕಾರ ಮಹಿಳೆಯರ ಪರವಾಗಿ ಯಾವುದೇ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಮುನ್ನ ನಗರದ ಪ್ರವಾಸಿ ಮಂದಿರದಿಂದ ಎಪಿಎಂಸಿ ಮಾರುಕಟ್ಟೆ ವರೆಗೆ ಮೆರವಣಿಗೆ ಮೂಲಕ ಕಾರ್ಮಿಕ ಸಂಘಟನೆ ಮುಖಂಡರು ತೆರಳಿದರು.

ಈ ಸಂದರ್ಭದಲ್ಲಿ ಸಿಐಟಿಯು ಸಂಘಟನೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಟಿ ತಿಪ್ಪೇಸ್ವಾಮಿ ಈ ನಾಗರಾಜ್ ದುರ್ಗಾವರ ಬೋರಯ್ಯ ರಾಜಣ್ಣ ಶಿವಣ್ಣ ಓಬಯ್ಯ ಮಂಜುನಾಥ ಕೆ ಪ್ರಭು ತಿಪ್ಪೇಸ್ವಾಮಿ ಬೋರಮ್ಮ ಚೆನ್ನಕೇಶವ ಗಂಗಮ್ಮ ಕೆ ನಾಗರಾಜ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಸಂಘಟನೆಯ ಕಾರ್ಮಿಕರು ಸೇರಿದಂತೆ ಹಲವರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page