ಮಡಿಕೇರಿ ನ.03-ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಕೃಷಿ ಇಲಾಖೆ ಕಾರ್ಯಕ್ರಮಗಳ ಸಂಬಂಧ ಕಾಲಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಶೇ.39 ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಮಾಹಿತಿ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ, ಮುಸುಕಿನ ಜೋಳ, ರಾಗಿ ಬಿತ್ತನೆ ಸಂಬಂಧಿಸಿದಂತೆ ಶೇ.67 ರಷ್ಟು ಪ್ರಗತಿ ಸಾಧಿಸಲಾಗಿದೆ. ಕಾಲ ಕಾಲಕ್ಕೆ ರಸಗೊಬ್ಬರ ಪೂರೈಕೆ ಮಾಡಲಾಗಿದೆ. ಹಾಗೆಯೇ ಬಿತ್ತನೆ ಬೀಜವನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಪ್ರಗತಿ ಸಾಧಿಸಲಾಗಿದೆ. ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಶೇ.90 ರಷ್ಟು ಪ್ರಗತಿ ಸಾಧಿಸಲಾಗಿದೆ. ಪಿಎಂ.ಕಿಸಾನ್ ಯೋಜನೆಯಡಿ ಇಕೆವೈಸಿ ಯಡಿ ಹೆಸರು ನೋಂದಾಯಿಸಲಾಗುತ್ತಿದೆ ಎಂದು ಸೋಮಸುಂದರ ಅವರು ವಿವರಿಸಿದರು.
ರೈತರ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 2019 ರಿಂದ ಇದುವರೆಗೆ 29 ಪ್ರಕರಣಗಳಲ್ಲಿ 28 ಪ್ರಕರಣಗಳಿಗೆ ಪರಿಹಾರ ವಿತರಿಸಲಾಗಿದ್ದು, ಒಂದು ಪ್ರಕರಣ ಪರಿಹಾರ ವಿತರಿಸಲು ಬಾಕಿ ಇದೆ ಎಂದು ಅವರು ತಿಳಿಸಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿ ಕುಮಾರ್ ಪಿ.ಗೌಡ, ಕೃಷಿ ಇಲಾಖೆಯ ನಿರ್ದೇಶಕರಾದ ಡಾ.ಜಿ.ಟಿ.ಪುತ್ರ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಕೃಷಿ ಇಲಾಖೆ ಅಧಿಕಾರಿಗಳು ಇತರರು ಇದ್ದರು.
ಕಾಲಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಸಾಧಿಸಿ: ಎನ್. ಚಲುವರಾಯಸ್ವಾಮಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments