ಹಿರಿಯೂರು :
ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಸ್ತ್ರೀಯರು ಸಹ ಹೋರಾಡಬಹುದೆಂಬುದನ್ನು ತೋರಿಸಿಕೊಟ್ಟ ಮಹಾನ್ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮರವರ ತತ್ವ ಹಾಗೂ ಆದರ್ಶ ಇಂದಿನ ಸ್ತ್ರೀಯರಿಗೆ ಮಾದರಿಯಾಗಿದೆ ಎಂಬುದಾಗಿ ಸಮಾಜ ಸೇವಕಿ ಶ್ರೀಮತಿ ಶಶಿಕಲಾ ರವಿಶಂಕರ್ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕಿತ್ತೂರು ವಿಜಯೋತ್ಸವ” ಹಾಗೂ ಕಿತ್ತೂರುರಾಣಿ ಚೆನ್ನಮ್ಮ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಗಳಿಂದ ದೊರೆತಿರುವ ಸ್ವಾತಂತ್ರ್ಯವನ್ನು ಮತ್ತೊಮ್ಮೆ ಪರಕೀಯರ ಕೈಗೆ ಸಿಗದಂತೆ ಎಚ್ಚರ ವಹಿಸಬೇಕು, ಪ್ರಸ್ತುತ ಜಾಗತಿಕ ಆರ್ಥಿಕ ಶ್ರೇಣಿಯಲ್ಲಿ 5 ಶ್ರೇಯಾಂಕದಲ್ಲಿರುವ ಭಾರತ 2047ರ ವೇಳೆಗೆ ಆಗ್ರಪಂಕ್ತಿಯಲ್ಲಿ ಇರಬೇಕೆಂಬ ಗುರಿಯನ್ನು ಪ್ರತಿ ಭಾರತೀಯನು ಹೊಂದಿರಬೇಕು ಎಂದರಲ್ಲದೆ,
ಕಿತ್ತೂರುರಾಣಿ ಚೆನ್ನಮ್ಮಳ ಗಟ್ಟಿತನ, ಧೀಮಂತ ವ್ಯಕ್ತಿತ್ವ, ಪ್ರಶಿಕ್ಷಣ, ರಾಜತಾಂತ್ರಿಕ ನೈಪುಣ್ಯ, ಸ್ವಯಂನಿರ್ಧಾರ ತೆಗೆದುಕೊಳ್ಳುವ ಜಾಣ್ಮೆ, ಸ್ವಾಭಿಮಾನ, ರಾಷ್ಟ್ರಾಭಿಮಾನಗಳು ಈ ದೇಶದ ಪ್ರತಿಯೊಬ್ಬ ಮಹಿಳೆಯರಿಗೆ ಸ್ಪೂರ್ತಿಯಾಗಬೇಕು ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರಸ್ತೇದಾರ್ ಕೆ.ಟಿ.ತಿಪ್ಪೇಸ್ವಾಮಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ವಿದ್ಯಾಧಿಕಾರಿ ಶಿವಪ್ರಸಾದ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಟಿ.ಪಿ.ಮನೋಹರ್, ನಗರಸಭೆ ಆರೋಗ್ಯ ನಿರೀಕ್ಷಕ ಸುನೀಲ್, ಸಮಾಜ ಕಲ್ಯಾಣ ಇಲಾಖೆಯ ಸುರೇಶ್, ಕಂದಾಯ ನಿರೀಕ್ಷಕ ಶಿವಕುಮಾರ್, ತೋಟಗಾರಿಕೆ ಇಲಾಖೆ ಅಧಿಕಾರಿ ಮಂಜುನಾಥ್, ಶ್ರೀನಿವಾಸ್ ರೆಡ್ಡಿ, ಬಿ.ಚೆನ್ನಬಸವರಾಜು ಸೇರಿದಂತೆ ತಾಲ್ಲೂಕು ಕಚೇರಿ ನೌಕರರು ಉಪಸ್ಥಿರಿದ್ದರು.
ಕಿತ್ತೂರು ರಾಣಿ ಚೆನ್ನಮ್ಮರವರ ತತ್ವ ಹಾಗೂ ಆದರ್ಶ ಇಂದಿನ ಸ್ತ್ರೀಯರಿಗೆ ಮಾದರಿಯಾಗಿದೆ : ಶ್ರೀಮತಿಶಶಿಕಲಾರವಿಶಂಕರ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments