ಚಳ್ಳಕೆರೆ ಮಾ.9
ಕುಟುಂಬ ನಿರ್ವಹಣೆಗಾಗಿ ಅಪಾಯದ ಸ್ಥಳಗಳಲ್ಲಿ ಕೂಲಿ ಕೆಲಸ ಮಾಡುವ ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಕಾರ್ಮಿಕ ಇಲಾಖೆಯಲ್ಲಿ ನೊಂದಾಣ ಮಾಡಿಕೊಳ್ಳುವ ಜಾಗೃತಿ ಬೆಳೆಸಿಕೊಳ್ಳಬೇಕು ಎಂದು ರಾಜ್ಯ ಕೂಲಿ ಮತ್ತು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಎಂ.ಎಚ್. ಸ್ವಾಮಿ ಹೇಳಿದರು.
ನಗರದ ಪಾವಗಡ ರಸ್ತೆಯಲ್ಲಿನ ಸಂಘದ ಕಚೇರಿಯಲ್ಲಿ ಗುರುವಾರ ಅರ್ಹ ನೊಂದಾಯಿತಿ ಕೂಲಿ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.
ಕಾರ್ಮಿಕರ ನೊಂದಾಣ ಜಾಗೃತಿಗಾಗಿ ಹಳ್ಳಿ ಹಳ್ಳಿಗೂ ಸಂಪರ್ಕ ಮಾಡಲಾಗುತ್ತಿದೆ. ಅರ್ಹ ಕೂಲಿ ಕಾರ್ಮಿಕರು ಯಾರ ಮಧ್ಯವರ್ತಿ ಇಲ್ಲದೆ ಸಂಘದ ಸಂಪರ್ಕದಲ್ಲಿ ನೊಂದಾಣ ಮಾಡಿಕೊಳ್ಳಬೇಕು. ಇದರಿಂದ ಫಲಾನುಭವಿಗಳ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಾಹ ಕಾರ್ಯಗಳಿಗೆ ಪ್ರೋತ್ಸಾಹ ಧನ ಮತ್ತು ಅಪಘಾತ ವಿಮೆ ಸೌಲಭ್ಯವಿದೆ. ವಿವಿಧ ಕಸುಬು ಆಧಾರಿತ ಫಲಾನುಭವಿಗಳಿಗೆ ಪರಿಕರಗಳ ವಿತರಣೆ ಮಾಡಲಾಗುತ್ತದೆ. ನೊಂದಾಣ ದಾರರಾಗಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳುವ ಜಾಗೃತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಸಂಘದ ಕಾರ್ಯದರ್ಶಿ ಟಿ. ಅವಿನಾಶ್ ಮಾತನಾಡಿ, ದುಡಿಯುವ ಕೂಲಿ ಕಾರ್ಮಿಕರಿಗೆ ಕೆಲಸ ಸಿಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕಟ್ಟಡ ನಿರ್ಮಾಣದ ಅಪಾಯದ ಸ್ಥಿತಿಯಲ್ಲಿ ಕಾರ್ಮಿಕರ ಕೆಲಸ ಕಾಣುತ್ತೇವೆ. ಇಂತಹ ಸ್ಥಿತಿಯಲ್ಲಿ ಕಾರ್ಮಿಕರಿಗೆ ಬದುಕಿನ ಭದ್ರತೆ ಬೇಕಿದೆ. ಇಲಾಖೆಯಲ್ಲಿ ನೊಂದಾಣ ಮಾಡಿಕೊಂಡಾಗ, ಕುಟುಂಬದ ರಕ್ಷಣೆ ಮತ್ತು ವೃತ್ತಿ ಭದ್ರತೆ ಇರುತ್ತದೆ ಎಂದು ಕಿವಿಮಾತು ಹೇಳಿದರು.
ಸಂಘದ ಉಪಾಧ್ಯಕ್ಷ ಖಾಜಾ ಹುಸೇನ್, ನಿರ್ದೇಶಕ ಆರ್. ದೇವರಾಜ್, ನೊಂದಾಯಿತ ಕಾರ್ಮಿಕರಾದ ಆರ್. ರವಿವರ್ಮ, ಕೆ.ಪಿ.ಅಜಯ್, ಎಂ. ನಾಗರಾಜ, ಅಶೋಕ, ಪ್ರದೀಪ, ಮೂರ್ತಿ, ಸಣ್ಣ ನಿಂಗಪ್ಪ, ನರಸಿಂಹರಾಜು ಮತ್ತಿತರರು ಇದ್ದರು.
ಕುಟುಂಬ ನಿರ್ವಹಣೆಗಾಗಿ ಅಪಾಯದ ಸ್ಥಳಗಳಲ್ಲಿ ಕೂಲಿ ಕೆಲಸ ಮಾಡುವ ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಕಾರ್ಮಿಕ ಇಲಾಖೆಯಲ್ಲಿ ನೊಂದಾಣ ಮಾಡಿಕೊಳ್ಳುವ ಜಾಗೃತಿ ಬೆಳೆಸಿಕೊಳ್ಳಬೇಕು ಎಂದು ರಾಜ್ಯ ಕೂಲಿ ಮತ್ತು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಎಂ.ಎಚ್. ಸ್ವಾಮಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments