ಚಿತ್ರದುರ್ಗ ಡಿ23. ಕುಟುಂಬ ಭದ್ರತೆ, ಜೀವನ ನಿರ್ವಹಣೆಗೆ ಉದ್ಯೋಗ ಅತ್ಯಗತ್ಯವಾಗಿರುವುದರಿಂದ ಪ್ರತಿಯೊಬ್ಬರೂ ಉದ್ಯೋಗ ಮೇಳಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಪಂ ಸಿಇಓ ದೀವಾಕರ್ ಕಿವಿಮಾತು ಹೇಳಿದರು. ಜಿಲ್ಲಾಡಳಿತ, ಚಿತ್ರದುರ್ಗ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳ ವನ್ನು ಉದ್ಘಾಟಿಸಿ ಮಾತನಾಡಿದರು.
ಇಡೀ ಕುಟುಂಬ ನಿರ್ವಹಣೆಗೆ ಉದ್ಯೋಗ ಅವಶ್ಯ. ಇಂದಿನ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ಜೀವನ ನಿರ್ವಹಣೆಗೆ ಸರ್ಕಾರಿ ಅಥವಾ ಖಾಸಗಿ ಕ್ಷೇತ್ರ ಯಾವುದಾದರೂ ಸರಿಯೇ ನಿರುದ್ಯೋಗಿಗಳು ಕೆಲಸ ನಿರ್ವಹಿಸಲು ಸಿದ್ದರಾಗಿರಬೇಕು. ವಿದ್ಯೆಯ ಜೊತೆಗೆ ತಮ್ಮಲ್ಲಿರುವ ಪ್ರತಿಭೆ, ನೈಪುಣ್ಯ, ಕೌಶಲವನ್ನು ಉದ್ಯೋಗದಾತ ಕಂಪನಿಗಳ ಸಮ್ಮುಖದಲ್ಲಿ ಪ್ರಸ್ತುತಪಡಿಸಬೇಕು. ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕ, ಯುವತಿಯರು ಭೌತಿಕವಾಗಿ ಮಾತ್ರವಲ್ಲ; ಮಾನಸಿಕವಾಗಿ ಸದೃಢರಾಗಿರಬೇಕು’ ಎಂದು ತಿಳಿಸಿದರು.
ಈ ಮೇಳದಲ್ಲಿ ಕಂಪನಿಗಳ ಮುಖ್ಯಸ್ಥರು ಉದ್ಯೋಗಕಾಂಕ್ಷಿಗಳು ಹಾಗೂ ಅಪಾರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕುಟುಂಬ ಭದ್ರತೆ, ಜೀವನ ನಿರ್ವಹಣೆಗೆ ಉದ್ಯೋಗ ಅತ್ಯಗತ್ಯ ಜಿಪಂ ಸಿಇಓ ದಿವಾಕರ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments