ಕುಡಿದ ಮತ್ತಿನಲ್ಲಿ ತಂದೆಯನ್ನು ಕೊಲೆ ಮಾಡಿದ ಪಾಪಿ ಮಗ

by | 06/11/23 | ಕ್ರೈಂ

Tooltip Text ಚಳ್ಳಕೆರೆ ಜನಧ್ವನಿ ವಾರ್ತೆ ನ.6 ಕುಡಿತದ ಚಟಕ್ಕೆ ಬಲಿಯಾಗಿದ್ದ ಮಗ ತಂದೆಯನ್ನೇ ಕ್ಷುಲ್ಲಕ ಕಾರಣಕ್ಕೆ ಹೊಡೆದು ಸಾಯಿಸಿದ ಘಟನೆ ನಡೆದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಬತ್ತಯ್ಯನಹಟ್ಟಿ ಗ್ರಾಮದ ವರವು ಕಾವಲಿನ ಜಮೀನಲ್ಲಿ ಕುಡಿದ ಮತ್ತಿನಲ್ಲಿ ತಡರಾತ್ರಿ ತಂದೆ ಮಗನ ನಡೆವೆ ನಡೆದ ಜಗಳ ಬೆಳಿಗ್ಗೆ ಕೊಲೆಯಲ್ಲಿ ಅಂತ್ಯವಾಗಿದೆ.
ಚಳ್ಳಕೆರೆ ತಾಲೂಕಿನ ವರವು ಕಾವಲು ಬಳಿ ಈ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೂರಯ್ಯ (55) ಕೊಲೆಯಾದ ವ್ಯಕ್ತಿ, ಮೋಹನ್ ತಂದೆಯನ್ನು ಹತ್ಯೆ ಮಾಡಿದ ಆರೋಪಿ.
ಘಟನೆ ನಡೆದ ನಂತರ ಚಳ್ಳಕೆರೆ ಠಾಣೆಗೆ ಬಂದು ಶರಣಾಗಿದ್ದಾನೆ.
ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,
ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಕುಮಾರ್, ಡಿವೈಎಸ್ ಪಿ ರಾಜಣ್ಣ, ವೃತ್ತ ನಿರೀಕ್ಷಕ ಸಮೀವುಲ್ಲಾ , ಪಿಎಸ್ ಐ ದೇವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಕಲು ಮಾಡಿಕೊಂಡು ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.[/protected]

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *