ಬೆಂಗಳೂರು : ನಿನ್ನೆ ಬೆಂಗಳೂರಿನ ಕೋರಮಂಗಲದಲ್ಲಿ ಹುಡುಗಿಯರು ಕುಡಿದ ಮತ್ತಿನಲ್ಲಿ ಎಡವಟ್ಟು ಮಾಡಿಕೊಂಡಿದ್ದು, ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಅವಾಂತರ ಮಾಡಿಕೊಂಡಿದ್ದಾರೆ.
ಕುಡಿದ ಮತ್ತಿನಲ್ಲಿ ತಾವು ಏನು ಮಾಡುತ್ತಿದ್ದೀವಿ ಎಂಬುದನ್ನೂ ತಿಳಿಯದೇ ನಡುರಸ್ತೆಯಲ್ಲಿಯೇ ಬಿದ್ದು ಒದ್ದಾಡಿ ಹುಚ್ಚಾಟ ಮೆರೆದಿದ್ದಾರೆ. ಕೋರಮಂಗಲದ ಡ್ರಂಕನ್ ಡ್ಯಾಡಿ ಎಂಬ ಪಬ್ ಮುಂದೆ ಅವಾಂತರ ಮಾಡಿಕೊಂಡಿದ್ದಾರೆ.
ನಿನ್ನೆ ರಾತ್ರಿ 12.30 ರಿಂದ 1 ಗಂಟೆಯ ನಡುವೆ ಈ ಘಟನೆ ನಡೆದಿದೆ. ಪಾನಮತ್ತ ಯುವತಿಯರು ಕೆಲ ಸಾರ್ವಜನಿಕರಿಗೆ ಹಲ್ಲೆ ಮಾಡಿರುವ ಆರೋಪ ಸಹ ಕೇಳಿಬಂದಿದೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಯುವತಿಯರಿಗೆ ವಾರ್ನ್ ಮಾಡಿ ಕಳುಹಿಸಿದ್ದಾರೆ.
0 Comments