ಚಳ್ಳಕೆರೆ ಆ.31. ಪ್ರಸ್ತುತ ಎಲ್ಲಡೆ ಮುಂಗಾರು ಮಳೆ ಕೊರತೆ, ಅಂತರ್ಜಲ ಕುಸಿತದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ. ಕೆರೆ, ಕಟ್ಟೆಗಳು ನೀರಿಲ್ಲದೆ ಬಣಗುಡುತ್ತಿದ್ದು, ಜನ, ಜಾನುವಾರುಗಳು ನೀರಿಗಾಗಿ ಪರಿತಪಿಸುತ್ತಿದ್ದಾರೆ ಶಾಲಾ ಮಕ್ಕಳ ಬಿಸಿಯೂಟಕ್ಕೂ ನೀರಿಲ್ಲದೆ ವಿದ್ಯಾರ್ಥಿಗಳು ನೀರಿಗಾಗಿ ಪ್ರತಿಭಟನೆ ನಡೆಸಿದ್ದಾರೆ.


ಹೌದು ಇದು ನನ್ನಿವಾಳ ವಾಳ ಗ್ರಾಪಂ ವ್ಯಾಪ್ತಿಯ ಹೆಚ್ಚುಬುಕಟ್ಟು ಹಾಗೂ ಪಶುಸಂಗೋಪನೆಯಿಂದ ಜೀವನ ನಡೆಸುವ ಲಿಂಗ್ಲೋರಹಟ್ಟಿಯಲ್ಲಿ ಸುಮಾರು 40 ಕ್ಕೂ ಹೆಚ್ಚು ಮನೆಗಳಿದ್ದು ಈ ಹಟ್ಟಿಹಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಿದ್ದು ಕಳೆದ ಒಂದು ತಿಂಗಳಿಂದ ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ. ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 20 ವಿದ್ಯಾರ್ಥಿಗಳಿದ್ದು ಕುಡಿಯಲು ಹಾಗೂ ಬಿಸಿಯೂಟ ತಯಾರಿಸಲು ನೀರಿಲ್ಲದೆ ನೀರು ಕೊಡಿ ಕುಡಿಯಲು ನೀರು ಬಿಡಿ ಎಂದು ಪ್ರತಿ ಭಟನೆ ಮಾಡಿದ್ದಾರೆ. ಪಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.




ಈ ಸಂಬಂಧ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮದ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಗ್ರಾಮದಲ್ಲೇ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ನಿತ್ಯ ದೈನಂದಿನ ಚಟುವಟಿಕೆಗಳಿಗೆ ನೀರಿಲ್ಲದೆ ಗ್ರಾಮಸ್ಥರು ದೂರದ ಊರ ಹೊರ ಭಾಗದಲ್ಲಿ ರುವ ಖಾಸಗಿ ಬೋರ್‌ವೆಲ್‌ಹಾಗೂ ಕೊಳವೆ ಬಾವಿಗಳಿಂದ ಮಹಿಳೆಯರುಹಾಗೂ ವಯಸ್ಸಾದವರು ತಲೆ ಮೇಲೆ ಹೊತ್ತುತರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಆ ನೀರು ಕಲುಷಿತಗೊಂಡಿದ್ದು ಕುಡಿಯಲು ಯೋಗ್ಯವಾಗಿಲ್ಲ. ಕುಡಿದರೆ ಅನಾ ರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ಗ್ರಾಮದ ಶ್ರೀನಿವಾಸ್ ಮಾತನಾಡಿ, ಕುಡಿಯುವ ನೀರಿಗೆ ಮೊದಲು ಆದ್ಯತೆ ನೀಡಿ ಎಂದು ಸರ್ಕಾರದ ಆದೇಶ ವಿದ್ದರೂ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದಿಂದ ನಮ್ಮ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯಲು ಮತ್ತು ಬಳಸಲು ನೀರಿಲ್ಲದೇ ಪರದಾಡುತ್ತಿದ್ದೇವೆ. ಎಂದು ತಿಳಿಸಿದರು.
ಗ್ರಾಮದಲ್ಲಿ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
0 Comments