ಕುಡಿಯುವ ನೀರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆ ಅವಘಡ ಸಂಭವಿಸಿದಂತೆ ಎಚ್ಚರಿಕೆಯಿಂದ ಕ್ರಮ ವಹಿಸಿ

by | 14/06/24 | ಸುದ್ದಿ


ಚಿತ್ರದುರ್ಗ ಜೂನ್14:
ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಂತಹ ಯಾವುದೇ ಅಹಿತಕರ ಅವಘಡ ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರಿನ ಸೇವನೆಯಿಂದ ಸಾವುಂಟಾಗುವ ಪ್ರಕರಣಗಳು ಜರುಗಬಾರದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಸಂಬಂಧದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮ, ಜನವಸತಿ ಪ್ರದೇಶಗಳಲ್ಲಿ ಬರುವ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆಯಡಿಯಲ್ಲಿ ಬರುವ ಎಲ್ಲಾ ಪೈಪ್‍ಲೈನ್‍ಗಳನ್ನು ಪ್ರತಿದಿನವೂ ಕಣ್ಗಾವಲು ನಡೆಸಿ, ಯಾವುದಾದರೂ ಪೈಪ್‍ಲೈನ್‍ಗಳು ಹಾನಿಯಾಗಿರುವುದು ಕಂಡುಬಂದರೆ ಕೂಡಲೇ ದುರಸ್ಥಿ ಕಾರ್ಯ ಕೈಗೊಂಡು ಯಾವುದೇ ಕಲುಷಿತ ನೀರು ಕುಡಿಯುವ ನೀರಿನೊಂದಿಗೆ ಸೇರದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ ಎಲ್ಲಾ ನೀರು ಶೇಖರಣಾ ಘಟಕಗಳನ್ನು ಕಾಲ-ಕಾಲಕ್ಕೆ ಸ್ವಚ್ಛಗೊಳಿಸಿ ಪ್ರತಿ ಹಂತದಲ್ಲಿಯೂ ಕ್ಲೋರಿನೇಷನ್ ಮಾಡಬೇಕು. ಮುಂದಿನ ಒಂದು ವಾರದೊಳಗೆ ಜಿಲ್ಲೆಯ ಎಲ್ಲಾ ಓವರ್ ಹೆಡ್ ಟ್ಯಾಂಕ್‍ಗಳನ್ನು ಸ್ವಚ್ಛಗೊಳಿಸಬೇಕು. ನೀರಿನ ಮೂಲಗಳಾದ ಕೊಳವೆಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಹಾಗೂ ಕೊಳಚೆ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯನ್ನು ಕೈಗೊಂಡು ಆ ನೀರಿನ ಮೂಲದ ಸುತ್ತಲೂ ಕಾಂಕ್ರಿಟ್‍ನಿಂದ ಕಟ್ಟೆ ಕಟ್ಟಬೇಕು ಎಂದು ತಿಳಿಸಿದರು.
ಜಿಲ್ಲಾ ಮತ್ತು ತಾಲ್ಲೂಕು ಪ್ರಯೋಗಾಲಯಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕುಡಿಯುವ ನೀರಿನ ಮೂಲಗಳ ಗುಣಮಟ್ಟದ ಪರೀಕ್ಷೆಗಳನ್ನು ಮಳೆಗಾಲದ ಮುನ್ನ ಮತ್ತು ಮಳೆಗಾಲದ ನಂತರ ಕಡ್ಡಾಯವಾಗಿ ಹಾಗೂ ಅವಶ್ಯಕವಿದ್ದಾಗ ಪರೀಕ್ಷೆಗಳನ್ನು ಕೈಗೊಳ್ಳಬೇಕು. ಕಲುಷಿತ ಎಂದು ಕಂಡುಬರುವ ನೀರಿನ ಮೂಲಗಳಿಗೆ ಪರ್ಯಾಯವಾಗಿ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿಯಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯಗಳ ಪ್ರಗತಿ ಪರಿಶೀಲನೆಯನ್ನು ಮಾಸಿಕವಾಗಿ ಕೈಗೊಳ್ಳುವಂತೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಒಂದು ವೇಳೆ ನೀರು ಕಲುಷಿತ ಎಂದು ಕಂಡುಬಂದರೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ತಾ.ಪಂ ಇಒ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳ ತಂಡ ಸ್ಥಳ ಪರೀಕ್ಷೆ ನಡೆಸಿ, ಕೂಡಲೇ ಆ ನೀರಿನ ಮೂಲಗಳಿಂದ ಸರಬರಾಜು ಮಾಡುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ಪರ್ಯಾಯ ಮೂಲಗಳಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಲುಷಿತ ನೀರಿನ ಸೇವನೆಯ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಹಾಗೂ ತಂಡವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿಯುವ ನೀರಿನ ಸರಬರಾಜು ವಿತರಣೆ ವ್ಯವಸ್ಥೆಯ ಸಂಪೂರ್ಣ ತಪಾಸಣೆ ಹಾಗೂ ಪರಿಶೀಲನೆ ಮಾಡುವುದು ಹಾಗೂ ನೀರು ಕಲುಷಿತಗೊಳ್ಳುವ ಮೂಲಗಳ ಬಿಂದುಗಳನ್ನು ಗುರುತಿಸಬೇಕು. ಗ್ರಾಮ ಪಂಚಾಯಿತಿಗಳು ಬ್ಲೀಚಿಂಗ್ ಪೌಡರ್‍ಗಳು ಸಾಕಷ್ಟು ದಾಸ್ತಾನುಗಳನ್ನು ಇರಿಸಿಕೊಳ್ಳಬೇಕು ಮತ್ತು ಬಳಸುವಿಕೆಯ ವಿಧಾನಗಳಿಗನುಸಾರ ಉಪಯೋಗಿಸಬೇಕು. ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಗ್ರಾಮ ಪಂಚಾಯಿತಿಗಳಲ್ಲಿ ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯಿತಿಗಳ ಪಂಪ್ ಆಪರೇಟರ್‍ಗಳು, ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜತೆಗೆ ಕಾಯಿಸಿ ಆರಿಸಿದ ನೀರನ್ನು ಕುಡಿಯುವಂತೆ ಜನರಿಗೆ ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.
ಸ್ವಚ್ಛತಾ ಅಭಿಯಾನ ಅಚ್ಚುಕಟ್ಟಾಗಿರಲಿ:
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸುರಕ್ಷಿತ ಕುಡಿಯುವ ನೀರು ಬಳಕೆ ಕುರಿತಂತೆ ಈಗಾಗಲೇ ಜೂನ್ 11 ರಿಂದ ಸ್ವಚ್ಛತಾ ಅಭಿಯಾನ ಪ್ರಾರಂಭವಾಗಿದ್ದು, ಒಂದು ವಾರಗಳ ಕಾಲ ನಡೆಯುವ ಸ್ವಚ್ಛತಾ ಅಭಿಯಾನವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಛಾಯಾಚಿತ್ರಗಳೊಂದಿಗೆ ವರದಿಯನ್ನು ಜೂನ್ 21ರೊಳಗೆ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಂತೆ ತಿಳಿಸಿದರು.
ನರೇಗಾ ಪ್ರಗತಿ ಪರಿಶೀಲನೆ:
ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಪ್ರಗತಿ ಪರಿಶೀಲನೆಯನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು. ಉದ್ಯೋಗದಲ್ಲಿ ಮಾನವ ದಿನಗಳ ಸೃಜನೆ, ಸಂಚಿತ ಮತ್ತು ವಾರ್ಷಿಕ ಗುರಿಗೆ ಶೇಕಡವಾರು ಸಾಧನೆ, ಎಚ್‍ಹೆಚ್‍ಜಿ ಶೆಡ್ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್ ಸೇರಿದಂತೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಇದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page