ಕೃಷಿ, ತೊಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳನ್ನು ರೈತರ ಮನೆಬಾಗಿಲಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚನೆ.

by | 01/07/24 | ಕೃಷಿ

‌‌‌‌ ಚಳ್ಳಕೆರೆ ಜನಧ್ವನಿ ವಾರ್ತೆ ಜು.1 ಕೃಷಿ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಪ್ರತಿ ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ರೈತರಿಗೆ ಕಾರ್ಯಗಾರ ಹಮ್ಮಿಕೊಳ್ಳುವ ಮೂಲಕ ಬೆಳೆವಿಮೆ, ಬೆಳೆ ಪರಿಹಾರ ಸೇರಿದಂತೆ ವಿವಿಧ ಯೋಜನೆಗಳನ್ನು ರೈತರಿಗೆ ಸರಕಾರಿ ಯೋಜನೆಗಳು ತಲುಪಿಸುವಂತೆ ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ರೈತರಿಗೆ ತರಬೇತಿ ಕಾರ್ಯಗಾರ ಹಾಗೂ ಬೀಜೋಪಚಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಕಡಿಮೆ ನೀರಿನಲ್ಲಿ ಅತಿ ಹೆಚ್ಚು ಇಳುವರಿನೀಡಯುವ ಹೊಸ ತಳಿಗಳನ್ನು ರೈತರಿಗೆ ಪರಿಚಯ ಮಾಡುವ ಜತೆಗೆ ಗುಣಮಟ್ಟದ ಬಿತ್ತನೆ ಬೀಜ ಪರಿಕರಣಗಳನ್ನು ವಿತರಣೆ ಮಾಡಬೇಕು. ರೈತರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಬಬ್ಬೂರು ಕೃಷಿ ವಿಜ್ಞಾನಿ ಓಂಕಾರಪ್ಪ ಮಾತನಾಡಿ ಮಕ್ಕಳಿಗೆ ಪೋಲಿಯೋ ತಡೆಗಟ್ಟು ಹೇಗೆ ಲಸಿಗೆ ಹಾಕುತ್ತಾರೋ ಅದೇ ರೀತಿ ರೈತರು ಬಿತ್ತನೆ ಮಾಡುವಾಗಿ ಬಿತ್ತನೆ ಬೀಜಗಳಿಗೆ ಕೃಷಿ ಇಲಾಖೆ ಅಧಿಕಾರಿಗಳ ಮಾರ್ಗದರ್ಶನದಂತೆ ಬೀಜೋಪಚಾರ ಮಾಡಿದರೆ ಯಾವುದೇ ರೋಗಗಳು ಬರುವುದಿಲ್ಲ.
ಇತ್ತೀಚಿನ ದಿನಗಳಲ್ಲಿ ಕೊಟ್ಟಿಗೆ ಗೊಬ್ಬರ ಹಾಕದೆ ರಾಸಾಯಿನಿಕ ಗೊಬ್ಬರ ಬಳಕೆಯಿಂದ ಭೂಮಿ ಫಲವತ್ತದೆ ಕಳೆದು ಕೊಳ್ಳುತ್ತಿದೆ ರೈತರು ಸವಯವಗೊಬ್ಬರ ಬಳಕೆ ಮಾಡಿದರೆ ಉತ್ತಮ ಇಳುವರಿ ಹಾಗೂ ಸದೃಡ ಆರೋಗ್ಯ ಪಡೆಯಲು ಸಾಧ್ಯ ಬೆಳೆಗಳಿಗೆ ರೋಗ ಕಾಣಿಸಿಕೊಂಡ ತಕ್ಷಣ ಔಷಧಿ ಸಿಂಪರಣೆ ಮಾಡಬೇಕು ಉಲ್ಬಣಗೊಂಡರೆ ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದರು.
ಜಂಟಿ ಕೃಷಿ ನಿರ್ದೇಶಕ ಡಾ.ಮಂಜುನಾಥ್ ಮಾತನಾಡಿ ಗ್ರಾಪಂ ಗೊಬ್ಬರು ಕೃಷಿ ಸಖಿ, ಪಶುಸಖಿ, ವನ ಸಖಿ,ಯರಿದ್ದು ಇಲಾಖೆವಾರು ಸೌಲಭ್ಯಗಳ ಬಗ್ಗೆ ತರಬೇತಿ ನೀಡಿದ್ದು ರೈತರ ಮನೆ ಬಾಗಿಲಿಗೆ ಮಾಹಿತಿಯನ್ನು ತಲುಪಿಸುತ್ತಾರೆ.
ರೈತರು ಶೇಂಗಾ ಬೆಳೆಯನ್ನೇ ನಂಬಿಕೊಳ್ಳದೆ ಕಡಿಮೆ ನೀರಿನಲ್ಲಿ ಅತಿ ಹೆಚ್ಚು ಬೆಳೆಯುವ ಹೊಸ ತಳಿಗಳಾದ ಹರಳು, ಸಾವೆ, ನವಣೆ, ಕೊರ್ಲೆ, ಸಜ್ಜೆ, ತೊಗರಿ ಪರ್ಯಾಯ ಬೆಳೆಗಳನ್ನು ಬಿತ್ತನೆ ಮಾಡಿದರೆ ಉತ್ತಮ ಲಾಭ ಪಡೆಯ ಬಹುದು ಎಂದು ತಿಳಿಸಿದರು.
ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ,ಭೂತಯ್ಯ ಮಾತನಾಡಿ ಪೂರ್ವಜನರ ಕಾಲದಲ್ಲಿ ಕೊಟ್ಟಿಗೆ ಗೊಬ್ಬರ ಹಾಕಿ 5 ಚೀಲ ಬೆಳೆದರೂ ಸಾಲಗಾರರಾಗುತ್ತಿರಲಿಲ್ಲ ರಾಸಾಯನಿಕರ ಗೊಬ್ಬರ ಹಾಕಿ 50 ಚೀಲ ಬೆಳೆದರೂ ಸಾಲಗಾರರಾಗುತ್ತಾರೆ ರೈತರು.\
ರೈತರಿಗೆ ಬೆಂಬಲ ಬೆಲೆಯಿಲ್ಲ ಜನಸಂಖ್ಯೆ ಹೆಚ್ಚಳದಿಂದ ಹೆಚ್ಚು ಆಹಾರ ಉತ್ಪಾದನೆ ಮಾಡಲು ಹೈಬ್ರಿಡ್ ತಳಿ, ರಸಗೊಬ್ಬರ , ಕ್ರಿನಾಷಕ ಔಷಧಿ ಬಳಕೆಯಿಂದ ಭೂಮಿ ಬರಡಗಾಗುತ್ತಿದೆ ಆಹಾರದ ರುಚಿಯೂ ಕಡಿಮೆಯಾಗಿ ಅನೇಕ ರೋಗಗಳು ಬರುತ್ತಿವೆ ರೈತರ ಬಗ್ಗೆ ಸರಕಾರಗಳು ಕಾಳಜಿವಹಿಸುವಂತೆ ತಿಳಿಸಿದರು.
ರೈತ ಸಂಘದ ರೆಡ್ಡಿಹಳ್ಳಿವೀರಣ್ಣ ಮಾತನಾಡಿ ರೈತರಿಗೆ ಯಾವುದೇ ಭದ್ರತೆಯಿಲ್ಲ ರೈತರು ಅತಿವೃಷ್ಠಿ ಅನಾವೃಷ್ಠಿಗೆ ಸಿಲುಕಿ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ರೈತ ಪರ ಕಾನೂನು ಜಾರಿಗೆ ತರುವಂತೆ ತಿಳಿಸಿದರು.
ರೈತರ ಮುಖಂಡ ಚಿಕ್ಕಣ್ಣ ಮಾತನಾಡಿ ವೇದಾವತಿ ನದಿ ಪಾತ್ರದಲ್ಲಿ ಅಂರ್ಜಲ ಹೆಚ್ಚಳದಿಂದ ರೈತರ ಭತ್ತ ಬಿತ್ತನೆ ಮಾಡಲು ಮುಂದಾಗಿದ್ದಾರೆ ಆದರೆ ಕೃಷಿ ಇಲಾಖೆಯಲ್ಲಿ ಭತ್ತದ ಬೀಜ ಮಾರಾಟ ಮಾಡುತ್ತಿಲ್ಲ ಕೃಷಿ ಇಲಾಖೆ ರೈತರಿಗೆ ಭತ್ತದ ಜೀಜ ತರಿಸಿ ವಿತರಿಸುವಂತೆ ತಿಳಿಸಿದರು.
ಪ್ರಗತಿ ಪರ ರೈತ ದಯಾನಂದ್ ಸೇರಿದಂತೆ ಇತರ ಪ್ರಗತಿ ಪರ ರೈತರು ಮಾಹಿತಿ ಹಂಚಿಕೊಂಡರು.
ಸಭೆಯಲ್ಲಿ ಜಿಪಂ ಕೆಡಿಪಿ ಸದಸ್ಯ ರಂಗಸ್ವಾಮಿ, ಸಭೆಯಲ್ಲಿ ಕೃಷಿ ವಿಜ್ಞಾನಿ ಮಂಜುನಾಥ್, ಕೃಷಿ ಉಪನಿರ್ದೇಶಕ ಡಾ.ಪ್ರಭಾಕರ್, ಸಹಾಯಕ ನಿರ್ದೇಶಕ ಡಾ.ಅಶೋಕ್, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ವಿರುಪಾಕ್ಷಪ್ಪ, ಪಶುಸಂಗೋನಾ ಸಹಾಯಕ ನಿರ್ದೇಶ ಡಾ.ರೇವಣ್ಣ, ರೇಷ್ಮೆ ಅಧಿಕಾರಿ ಇಲಾಖೆಯಲ್ಲಿದೊರೆಯುವ ಸೌಲಭ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page