ಚಿತ್ರದುರ್ಗ ಅ.3:
2024-25ನೇ ಸಾಲಿಗೆ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿಯಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.
ಕೃಷಿ ಇಲಾಖೆಯ ಕೆ.ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದೆ. ಸಿಟಿಜನ್ ಲಾಗಿನ್ ಅಥವಾ ಆರ್‌ಎಸ್‌ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ಸೇವಾ ಕೇಂದ್ರ, ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೆ.ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಎಫ್‌ಐಡಿ, ಪಹಣಿ, ಆಧಾರ್ ಕಾರ್ಡ್, ಫೋಟೋ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಪ್ರತಿಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.
ಚಿತ್ರದುರ್ಗ ಜಿಲ್ಲಾ ಮಟ್ಟಕ್ಕೆ ಶೇಂಗಾ (ಮಳೆಯಾಶ್ರಿತ), ಚಿತ್ರದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕು ಮಟ್ಟಕ್ಕೆ ಮುಸುಕಿನ ಜೋಳ (ಮಳೆಯಾಶ್ರಿತ), ಹೊಸದುರ್ಗ ತಾಲ್ಲೂಕು ಮಟ್ಟಕ್ಕೆ ರಾಗಿ (ಮಳೆಯಾಶ್ರಿತ), ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕು ಮಟ್ಟಕ್ಕೆ ಶೇಂಗಾ (ಮಳೆಯಾಶ್ರಿತ) ಬೆಳೆಗಳಿಗೆ ಅರ್ಜಿ ಸಲ್ಲಿಸಬಹುದು.
ಜಿಲ್ಲಾ ಮಟ್ಟದ ಪ್ರಶಸ್ತಿಗೆ ಪ್ರಥಮ ರೂ. 30,000/-, ದ್ವಿತೀಯ ರೂ. 25, 000/-, ತೃತೀಯ ರೂ.20,000/ ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಗೆ ಪ್ರಥಮ ರೂ.15,000/-ದ್ವಿತೀಯ ರೂ.10,000/- ತೃತೀಯ ರೂ. 5000/- ಬಹುಮಾನ ಇರುವುದರಿಂದ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಪ್ರಸಕ್ತ ಸಾಲಿನಿಂದ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಅರ್ಜಿ ಶುಲ್ಕ ರದ್ದುಪಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments