ಕೆಂಪಣ್ಣ ಆಯೋಗ ವರದಿ : ಸಿದ್ದರಾಮಯ್ಯ ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by | 25/02/23 | ರಾಜಕೀಯ

ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಸಿಎಂ.ಸುಳ್ಳು ಹೇಳಿದ್ದಾರೆ ಎಂಬ ಆರೋಪಕ್ಕೆ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಸಿದ್ದರಾಮಯ್ಯ ಅವರೇ ನೇಮಿಸಿದ್ದ ನ್ಯಾಯಮೂರ್ತಿ
ಕೆಂಪಣ್ಣ ಅವರ ಆಯೋಗವು ಸುದೀರ್ಘವಾಗಿ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ತನಿಖೆ ನಡೆಸಿದ ವರದಿಯನ್ನು ನಾನು ಓದಿದ್ದೇನೆ. ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರು ಸುಳ್ಳು ಹೇಳುತ್ತಿದ್ದಾರೆ. ಅಧಿಕಾರಿಗಳು ಕಡತ ತಂದರು ಅನುಮೋದಿಸಿದೆ ಎಂದು ಬರೆದಿರುವುದಾಗಿ ಅವರೇ ಹೇಳಿರುವುದರ ಅರ್ಥ, ತಪ್ಪು ಮಾಡಿರುವುದನ್ನು ಒಪ್ಪಿಕೊಂಡಂತೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ ಎಂದರು.

ಕ್ರಮ ತೆಗೆದುಕೊಳ್ಳಲಾಗುವುದು :

ಅಡ್ವೊಕೇಟ್ ಜನರಲ್ ಬಗ್ಗೆ ಹೇಳಿದ್ದು, ಅವರ ವಾದದ ನಂತರ ನ್ಯಾಯಮೂರ್ತಿಗಳು ಏನು ಹೇಳಿದ್ದಾರೆ ಎನ್ನುವುದು ಮುಖ್ಯ ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳ ಭ್ರಷ್ಟಾಚಾರವನ್ನು ರಕ್ಷಿಸಲು ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಅದನ್ನೇ ನಾನು ಹೇಳಿದ್ದು. ತೀರ್ಪು ಹಾಗೂ ಆಯೋಗದ ವರದಿಯನ್ನು ನಾನು ಓದಿದ್ದು. ಈಗಾಗಲೇ ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಇನ್ನು ಮುಂದೆ ನಾವೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *