ಕೇಂದ್ರದ ಯೋಜನೆಗಳನ್ನು ದೇಶದ ಮನೆಮನೆಗಳಿಗೆ ತಲುಪಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶ : ಸಂಯೋಜಕರಾದ ಎಸ್.ಕೆ.ಮಧುಸೂದನ್

by | 12/12/23 | ಸುದ್ದಿ


ಹಿರಿಯೂರು :
ವಿಕಸಿತ ಭಾರತ ಸಂಕಲ್ಪ ಯಾತ್ರೆಯಿಂದ ಕೇಂದ್ರದ ಯೋಜನೆಗಳ ಪರಿಚಯ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಜನಪ್ರಿಯ ಯೋಜನೆಗಳನ್ನು ದೇಶದ ಎಲ್ಲ ಗ್ರಾಮಗಳು ಸೇರಿದಂತೆ ಮನೆ ಮನೆಗಳಿಗೆ ತಲುಪಿಸುವ ಉದ್ದೇಶವನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆ ಹೊಂದಿದೆ ಎಂಬುದಾಗಿ ಆರ್ಥಿಕ ಸಾಕ್ಷರತಾ ಸಂಯೋಜಕರಾದ ಎಸ್.ಕೆ.ಮಧುಸೂದನ್ ಹೇಳಿದರು.
ತಾಲ್ಲೂಕಿನ ರಂಗನಾಥಪುರ, ಇಕ್ಕನೂರು, ಆಲೂರು, ಬಬ್ಬೂರು, ಮಸ್ಕಲ್, ಬ್ಯಾಡರಹಳ್ಳಿ, ಈಶ್ವರಗೆರೆ, ಹಬ್ಬಿನಹೊಳೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಂಗವಾಗಿ ದೇಶದ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಇತರೆ ಬ್ಯಾಂಕುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಜನಜಾಗೃತಿ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದ್ದು ದೇಶದ ಎಲ್ಲಾ ನಾಗರೀಕರಿಗೂ ಹಲವು ಕಾರ್ಯಕ್ರಮಗಳನ್ನು ನೀಡಬೇಕೆನ್ನುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶವಾಗಿದ್ದು, ಸಾರ್ವಜನಿಕರು ಈ ಯೋಜನೆಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳುವ ಮೂಲಕ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂಬುದಾಗಿ ಅವರು ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣ ವೀಕ್ಷಣೆ ಕಾರ್ಯಕ್ರಮ ಕೇಂದ್ರ ಸರಕಾರದ ನಾನಾ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಉದ್ದೇಶ ಹೊಂದಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂಬುದಾಗಿ ಹೇಳಿದರು.
ದೇಶದ ರೈತರ ಸಮಸ್ಯೆಗಳನ್ನು ಅರಿತು ಪಿಎಂ ಕೃಷಿ ಸಮ್ಮಾನ್ ಯೋಜನೆ, ಫಸಲ್ ಭೀಮಾ ಯೋಜನೆ, ರಸಗೊಬ್ಬರ, ಸಬ್ಸಿಡಿ, ದೇಶದ ಪ್ರತಿ ಮನೆಗೆ ಶೌಚಾಲಯ, ಪಿಎಂ ಆವಾಜ್ ಯೋಜನೆ, ಉಜ್ವಲ ಯೋಜನೆ ಅಡಿ ಉಚಿತ ಗ್ಯಾಸ್ ಸಂಪರ್ಕ ನೀಡಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಂಬುದಾಗಿ ಅವರು ಮಾಹಿತಿ ನೀಡಿದರಲ್ಲದೆ,
ಸಾಮಾಜಿಕ ಸುರಕ್ಷತೆ ವಿಮೆಯ ಅಗತ್ಯತೆ, ಮಹತ್ವ ಹಾಗೂ ವಿಮೆಯ ಲಾಭದ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದರಲ್ಲದೆ ಡ್ರೋನ್ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಔಷಧಿ ಸಿಂಪಡಣೆಯ ಬಗ್ಗೆ ತಿಳುವಳಿಕೆ ನೀಡಿದರು. ಇದೇ ಸಂದರ್ಭದಲ್ಲಿ ಎಲ್ಲರಿಗೂ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು, ಎಲ್ಲಾ ಸಾರ್ವಜನಿಕರು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಬಬ್ಬೂರು ಕೃಷಿ ಕೇಂದ್ರದ ವಿಜ್ಞಾನಿಗಳಾದ ಓಂಕಾರಪ್ಪ, ಜಿಲ್ಲಾ ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಮುಖ್ಯಸ್ಥರು, ಅನೇಕ ಗಣ್ಯರು, ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page