ಕೈ ಕೊಟ್ಟ ಮಳೆ ಒಣಗುತ್ತಿರುವ ಬೆಳೆಗಳು. ಬರದ ಛಾಯೆ.ಬರಪೀಡಿತ ಪ್ರದೇಶ ಪಟ್ಟಿಯಿಂದ ಚಳ್ಳಕೆರೆ ಹಿರಿಯೂರು ವಂಚಿತ ರೈತರ ಅಕ್ರೋಶ.

by | 27/08/23 | ಕರ್ನಾಟಕ, ಕೃಷಿ


ಚಳ್ಳಕೆರೆ ಆ.27.ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬೆಳೆಗಳಿಗೆ‌ ಮಳೆರಾಯನ ವಕ್ರದೃಷ್ಟಿಯಿಂದ ಬಾರದ ಮಳೆ ಶೇಂಗಾ ವಿವಿಧ ಬೆಳೆಗಳು ಕಮರಿಹೋಗುತ್ತಿದ್ದು ಈ ಬಾರಿಯೂ ಮಳೆಯಿಲ್ಲದೆ ಮುಂದಿನ ದಿನಗಳು‌ ತೀವ್ರ ಬರಗಾಲಕ್ಕೆ ಸಿಲುಕುವ ಆತಂಕ ರೈತರಲ್ಲಿ ಮನೆ ಮಾಡಿದೆ.
ತಾಲೂಕಿನ ಮುಂಗಾರು ಆರಂಭದಲ್ಲಿ ಅಲ್ಪಸ್ವಲ್ಪ ಮಳೆ ಬಂದು ರೈತಾಪಿ ವರ್ಗ ಸಾಲಾ ಸೂಲ ಮಾಡಿ ದುಬಾರಿ ಬಿತ್ತನೆ ಬೀಜ.ಗೊಬ್ಬರ.ಕೂಲಿ.ಕೃಷಿ ಸೇರಿದಂತೆ ಬೆಳೆ ಬಿತ್ತನೆ ಮಾಡಿ ಉತ್ತಮ ಇಳುವರಿ ಕನಸು ಕಂಡಿದ್ದ ರೈತರಿಗೆ ಮಳೆರಾಯನ ವಕ್ರದೃಷ್ಠಿಯಿಂದ ಶೇಂಗಾ.ತೊಗರಿ.ಸಜ್ಜೆ.ಜೋಳ ಸೇರಿದಂತೆ ವಿವಿಧ ಬೆಳೆಗಳು ಹೂವು.ಕಾಯಿ ಕಟ್ಟುವ ಮುನ್ನವೇ ಬಿಸಿಲಿನ ತಾಪಕ್ಕೆ ಕಮರಿ ಹೋಗುತ್ತಿದ್ದು ಇನ್ನು ಒಂದು ಮಳೆ ಬಾರದಿದ್ದರೆ ಸಂಪೂರ್ಣ ಬೆಳೆಗಳು ನೆಲಕಚ್ಚಲಿದ್ದು ಹಾಕಿದ ಬಂಡವಾಳವೂ ಕೈಸೇರದೆ ಈಗೆ ಒಂದು ತಿಂಗಳು ಮಳೆ ಬಾರದಿದ್ದರೆ ಜನ ಜಸನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿಗಾಗಿ ಪರದಾಡುವ ಸ್ಥಿತಿ ಎದುರಾಗಿ ತೀವ್ರ ಬರದ ಛಾಯೆ ಆವರಿದಲಿದೆ.

ಒಂದು ತಿಂಗಳಿನಿಂದ ಮೋಡ ಕವಿದ ವಾತಾವರಣ ಇದ್ದರೂ ಒಮ್ಮೆಯೂ
ಹದ ಮಳೆ ಬಿದ್ದಿಲ್ಲ. ಆಗೊಮ್ಮೆ ಈಗೊಮ್ಮೆ ಕೆಲವು ಕಡೆ ಮಳೆ
ಎಂದರೆ ಮತ್ತೊಂದು ಕಡೆ ಮಳೆ ಬಾರದೆ ಮುಗಿಲಿನತ್ತ ನೋಡುತ್ತ ರೈತ,
ಎಲ್ಲಿ ಓಡುವಿರಿ ನಿಲ್ಲಿ ನಿಲ್ಲಿ ಮೋಡಗಳೇ ನಾಲ್ಕು ಹನಿಯ ಚೆಲ್ಲಿ ಹೋಗಿ‌ ಎಂದು ಪ್ರಾರ್ಥನೆ ಮಾಡಿದರೂ ಮಳೆರಾಯ ಕರುಣೆ ತೋರಿಸುತ್ತಿಲ್ಲ.ಬಯಲು ಸೀಮೆಯ ರೈತರು ಸುಮಾರು ಕಳೆದ ಹದಿನೈದು ವರ್ಷಗಳಿಂದ ಸಕಾಲಕ್ಕೆ ಮಳೆ ಬೆಳೆಯಾಗದೇ ಅತಿವೃಷ್ಟಿ-ಅನಾವೃಷ್ಟಿಗೆ ಸಿಲುಕಿ ನಷ್ಟ ಅನುಭವಿಸು
ತ್ತಲೇ ಇದ್ದಾರೆ. ಬೆಳೆ ಬಾರದೆ ಇದಕ್ಕೆ ಸಂಬಂಧಿಸಿದ ವಿಮೆ ಸಹ ಬರದೇ ಸಾಲಗಾರರಾಗುತ್ತಲೇ ಇದ್ದಾರೆ. ಈ ಹಿಂದೆ ಮಾಡಿರುವ ಸಾಲ ಒಂದು ಕಡೆಯಾದರೆ ಈಗ ಮತ್ತೆ ಮತ್ತೆ ಸಾಲ ಮಾಡಬೇಕಾದ ಸನ್ನಿವೇಶ ಎದುರಾಗು ತ್ತಲೇ ಇವೆ. ಪ್ರತಿ ವರ್ಷದಂತೆ ಈ ಬಾರಿಯೂ ಈರುಳ್ಳಿ, ಶೇಂಗಾ,ತೊಗರಿ,ಸಜ್ಜೆ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದು,ಮಳೆ ಕೈಕೊಟ್ಟ ಕಾರಣ ಋಷ್ಠಿ ಭೂ ಪ್ರದೇಶಗಳತ್ತ ಒಮ್ಮೆ ಕಣ್ಣು ಹಾಯಿಸಿದರೆ ಹೊಲಗಳಲ್ಲಿ ಶೇಂಗಾ ಒಣಗಿರುವ ದೃಶ್ಯ ಕಂಡುಬರುತ್ತದೆ. ನೀರಾವರಿ ಇರುವ ಪ್ರದೇಶಗಳನ್ನು ಹೊರತುಪಡಿಸಿದರೆ ಮಿಕ್ಕಂತೆ ರೈತರಿಗೆ ಈಬಾರಿಯೂ ಭರದ ಛಾಯೆ ಇದ್ದು ರೈತರಲ್ಲಿ ಆತಂಕವನ್ನುಂಟು ಮಾಡಿದೆ.
ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಜಮಧ್ವನಿ ಡಿಜಿಟಲ್ ಮೀಡಿಯಾದೊಂದಿಗೆಮಾತನಾಡಿ, ಬೆಳೆ ಹಾನಿ ಕುರಿತು ಕಂದಾಯ, ಕೃಷಿ ಮತ್ತು ವಿಮಾ ಕಂಪ
ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿರುವ ಪದ್ಧತಿ ಅವೈಜ್ಞಾನಿಕವಾಗಿದ್ದು ಕಳೆದವರ್ಷ ಬಿತ್ತನೆ ಮಾಡಿದ ಶೇಂಗಾ ಬೆಳೆ ನಷ್ಟ ವಾದರೂ ಬೆಳೆ ವಿಮೆ ಪಾವತಿಮಾಡಿಲ್ಲ. ಈ ಬಾರಿಯೂ ಮಳೆಯಿಲ್ಲದೆ ಬೆಳೆಗಳು ಒಣ ಗಲು ಪ್ರಾರಂಭಿ
ಸಿದ್ದು ತಾಲೂಕಿನ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾವುದೋ‌ ಒಂದು ಮೂಲೆಯಲ್ಲಿ ಉತ್ತಮ ಫಸಲು ಇರುವ ಭೂಮಿಯನ್ನು ಆಯ್ಕೆಮಾಡಿಕೊಂಡು ವಿಮೆ ಮಂಜೂರಾತಿಗಾಗಿ ಕಳಿಸುವುದನ್ನು ಬಿಟ್ಟುಗ್ರಾ.ಪಂ. ವ್ಯಾಪ್ತಿಯ ಎಲ್ಲಭೂಮಿಗಳಲ್ಲೂ ಬೆಳೆವಿಮೆ ಕಂಪನಿ ಹಾಗೂ ಇಲಾಖೆ ಅಧಿಕಾರಿಗಳುನಡೆಸುತ್ತಿರುವ ರೈತ ವಿರೋಧಿ, ಅವೈಜ್ಞಾನಿಕ ಪದ್ಧತಿಕೂಡಲೇ ಕೈಬಿಟ್ಟು ಮಳೆ ಕೈಕೊಟ್ಟಿರುವ ಪೂರ್ಣ ಪ್ರದೇಶವನ್ನು ವಿಮೆಗೂಳ ಪಡಿಸಬೇಕೆಂದು ಸರಕಾರಗಳನ್ನು ಒತ್ತಾಯಿಸಿದ್ದಾರೆ.
ಬರಪಟ್ಟಿಯಿಂದ ವಂಚನೆ. ಜಿಲ್ಲೆಯಲ್ಲಿ ಮಳೆಯ ಅಭಾವ ಉಂಟಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಇತ್ತ ಅಷ್ಟೊ, ಇಷ್ಟೋ ಬಿತ್ತನೆಯಾದ ಬೆಳೆಗಳು ಮಳೆಯಿಲ್ಲದೆ ಸೊರಗುತ್ತಿವೆ. ಮತ್ತೊಂದೆಡೆ ಸರ್ಕಾರ ಮಳೆ ಇಲ್ಲದಿರುವ ಪ್ರದೇಶಗಳನ್ನು ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದೆ.ಮತ್ತೊಂದೆಡೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಉಸ್ತುವರಿ ಸಚಿವ ಡಿ.ಸುಧಾಕರ್ ಕ್ಷೇತ್ರಹಿರಿಯೂರು ತಾಲೂಕು ಹಾಗೂ ಮೂರು ಬಾರಿ ಹ್ಯಾಟ್ರಿಕ್ ಗೆಲುವಿನ ಸರದಾರ ಕಾಂಗ್ರೇಸ್ ಶಾಸಕ ಟಿ.ರಘುಮೂರ್ತಿ ಕ್ಷೇತ್ರವಾದ ಚಳ್ಳಕೆರೆ ತಾಲೂಕುಗಳು ಸದಾ ಬರಪೀಡಿದ ಪ್ರದೇಶ ಎಂದು ಹಣೆ ಪಟ್ಟಿಕಟ್ಟಿಕೊಂಡಿದ್ದರೂ ಸಹ ಈ ಬಾರಿಯ ಬರಪೀಡಿತ ಪಟ್ಟಿಯಿಂದ ಕೈಬಿಡಲಾಗಿದೆ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿರುದ್ಧ ಆಕ್ರೋಶಗಳು ಭುಗಿಲೆದ್ದಿವೆ.

ನಮ್ಮ ತಾಲೂಕಿನಲ್ಲಿ ಮಳೆಯಾಗಿಲ್ಲ, ಬಿತ್ತನೆ ಕಾರ್ಯ ಕೂಡ ನಡೆದಿಲ್ಲ. ಒಂದಿಷ್ಟು ಬಿತ್ತನೆಯಾದ ಬೆಳೆಗಳು ಮಳೆಯಿಲ್ಲದೆ ಒಣಗುತ್ತಿವೆ. ಮಳೆಗಾಗಿ ರೈತರು ಮುಗಿಲು ನೋಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಚಿವರು ಹಿರಿಯೂರು ಹಾಗೂ ಚಳ್ಳಕೆರೆ ತಾಲೂಕನ್ನು ಬರ ಪೀಡಿತ ಪಟ್ಟಿಗೆ ಸೇರಿಸಿಲ್ಲ. ರೈತರ ಬಗ್ಗೆ ಎಳ್ಳಷ್ಟೂ ಕಾಳಜಿಯಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುತ್ತಿದೆ. ಇತ್ತ ಜಿಲ್ಲೆಯ ಏಕೈಕ ಜೀವನಾಡಿ ಆಗಿರುವ ವಾಣಿ ವಿಲಾಸ ಜಲಾಶಯಕ್ಕೆ ಸಹ ನೀರು ಹರಿದು ಬಂದಿಲ್ಲ. ಈಗಿದ್ದರೂ ಸಹ ಸಚಿವರು ಕ್ಷೇತ್ರ ಹಾಗೂ ಜಿಲ್ಲೆಯ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬರ ಪೀಡಿತ ಪ್ರದೇಶದ ಪಟ್ಟಿಯಲ್ಲಿ ,2018-19 ನೇ ಸಾಲಿನಲ್ಲಿ ಜಿಲ್ಲೆಯ ಹಿರಿಯೂರು.ಚಳ್ಳಕೆರೆ ಹೊಸದುರ್ಗ. ಮೊಳಕಾಲ್ಮೂ.ಹೊಳಲ್ಕೆರೆ . ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಘೋಷಣೆ ಮಾಡಿತ್ತು ಆದರೆ 2022-23 ನೇ ಸಾಲಿನಲ್ಲಿ ಬಯಲು ಸೀಮೆ ಪ್ರದೇಶ ಎಂದು ಹಣೆ ಪಟ್ಟಿಕಕೊಂಡಿರುವ ಚಳ್ಳಕೆರೆ ಹಾಗೂ ಹಿರಿಯೂರು ತಾಲೂಕುಗಳನ್ನು ಪರಪೀಡಿತ ರಾಜ್ಯದ ಅತೀ ಕಡಿಮೆ ಮಳೆ ಬೀಳುವ ಪ್ರದೇಶ ಎಂದು ಚಳ್ಳಕೆರೆ ಗುರುತಿಸಿಕೊಂಡಿದೆ. ಆದರೂ ಇಂತಹ ಸಂದರ್ಭದಲ್ಲಿ ಚಳ್ಳಕೆರೆ ತಾಲೂಕನ್ನು ಗುರುತಿಸದಿರುವುದು ದುರ್ದೈವ ಸಂಗತಿಯಾಗಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ಈಗಲಾದರೂ ಸರಕಾರ ಕೈಬಿಟ್ಟಿರುವ ತಾಲೂಕುಗಳನ್ನು ಬರಪೀಡಿ ಪ್ರದೇಶ ಪಟ್ಟಿಗೆ ಸೇರಿಸುವರೇ ಕಾದು ನೋಡ ಬೇಕಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page