ಚಳ್ಳಕೆರೆ ನ.9 ತಾಲೂಕಿನ ಗಡಿ ಗ್ರಾಮವಾದ ಕೊರ್ಲಕುಂಟೆ ಗ್ರಾಮದಲ್ಲಿ ವಿವಿಧ ಸಮುದಾಯಗಳು ಸೇರಿದಂತೆ ಸುಮಾರು 3000 ಜನಸಂಖ್ಯೆ ವಾಸವಾಗಿರುವ ಗ್ರಾಮದಲ್ಲಿ ಬಹುತೇಕ ಕೂಲಿ ಬದುಕಿನಿಂದ ಜೀವನ ಸಾಗಿಸುವ ಜನರಿದ್ದು ಈ ಭಾಗದಲ್ಲಿ ಆರೋಗ್ಯ ಹಾಗೂ ಶೈಕ್ಷಣಿಕ ಪ್ರಗತಿ ಬಹಳಷ್ಟು ಹಿಂದುಳಿದಿದ್ದು ಗ್ರಾಮದಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪದವಿಪೂರ್ವ ಕಾಲೇಜು ಆರಂಭಿಸಲು ಮತ್ತು ಸ್ಥಳೀಯವಾಗಿ ವಿದ್ಯಾರ್ಥಿ ನಿಲಯ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೊರ್ಲಕುಂಟೆ ತಿಪ್ಪೇಸ್ವಾಮಿ ಶಾಸಕ ಟಿ ರಘುಮೂರ್ತಿಯವರಿಗೆ ಮನವಿ ಸಲ್ಲಿಸಿದ್ದಾರೆ.
ತಾಲೂಕಿನ ಕೊರ್ಲಕುಂಟೆ ಗ್ರಾಮದಲ್ಲಿ ಕಾಲೇಜು ಸ್ಥಾಪನೆಯಿಂದ ಬಡಗಡ್ಡೆ ಪುಟ್ಲಾರಹಳ್ಳಿ ಬೊಮ್ಮನಕುಂಟೆ ವೃಂದಾನ ಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಬಡ ಮಕ್ಕಳ ಉನ್ನತ ಮಟ್ಟದ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ರಿಸನಂಬರ್ 21ರಲ್ಲಿ ಸರ್ಕಾರಿ ಗೋಮಾಳದ ಐದು ಎಕರೆ ಭೂಮಿ ಇದ್ದು ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಯಿಂದ ಸುಮಾರು 7,000 ಬಡ ಕುಟುಂಬಗಳ ಆರೋಗ್ಯ ರಕ್ಷಣೆಗೆ ಸ್ಥಳೀಯವಾಗಿ ಅನುಕೂಲವಾಗಲಿದೆ ಪರಶುರಾಂಪುರ ಹೋಬಳಿ ವ್ಯಾಪ್ತಿಯಲ್ಲಿ ಜಾಜುರು ಮತ್ತು ದೊಡ್ಡ ಚೆಲ್ಲೂರು ಗ್ರಾಮದಲ್ಲಿ ಪಿ ಎಚ್ ಸಿ ಸ್ಥಾಪಿಸಲಾಗಿದ್ದು ಈ ಕೇಂದ್ರಗಳು ಗ್ರಾಮಕ್ಕೆ ಸುಮಾರು 15 ಕಿಲೋ ಮೀಟರ್ ದೂರವಿರುವ ಕಾರಣ ಕೊರ್ಲಕುಂಟೆಗ್ರಾಮದಲ್ಲಿ ನೂತನವಾಗಿ ಪಿ ಹೆಚ್ ಸಿ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಕೊರ್ಲಕುಂಟೆ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲು ಶಾಸಕ ಟಿ ರಘುಮೂರ್ತಿಗೆ ಮನವಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments