ಕೋಟೆನಾಡಿನಲ್ಲಿ ಮತ್ತೆ ಹರಳಿದ ಕಮಲ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಗೋವಿಂದಕಾರಜೋಳು ಗೆಲುವು.

by | 04/06/24 | ಲೋಕಸಭಾ ಚುನಾವಣೆ-2024


ಚಿತ್ರದುರ್ಗ ಜೂ.4 ಕೋಟೆ ನಾಡಿನಲ್ಲೆ ಮತ್ತೆ ಹರಳಿದ ಕಮಲ ಬಿಜೆಪಿ ಅಭ್ಯರ್ಥಿ ಗೋವಿಂದಕಾರಜೋಳ ಕೈಹಿಡಿದ ಮತದಾರರು. ಪ್ರತಿ ಬಾರಿಯೂ ಹೊರಗಿನವರೇ ಬರುತ್ತಾರೆ ಸ್ಥಳಿಯರಿಗೆ ಅವಕಾಶ ಕೊಡುವುದಿಲ್ಲ ಎಂಬುದು ಕಾಂಗ್ರೆಸ್ ಪಕ್ಷದಲ್ಲಿ ಅಸಮದಾನ ಹಾಗೂ ಪ್ರತಿಭಟನೆಗಳೂ ನಡೆದಿದ್ದು . ಉಚಿತ ಗ್ಯಾರೆಂಟಿ ಯೋಜನೆಗಳ ಜಾರಿಯಿಂದ ಮತದಾರರು ಕೈಹಿಡಿಯಲಿದ್ದಾರೆ ಎಂಬ ಭರವಸೆ ಹುಸಿಯಾಗಿದೆ. ಇತ್ತ ಬಿಜೆಪಿ ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಇಲ್ಲಿ ಯಶಸ್ವಿಯಾಗಿ ಮತ್ತೆ ಕೋಟೆ ನಾಡಿನಲ್ಲಿ ಕಮಲವನ್ನ ಹರಳಿಸಲು ಮತದಾರರು ಕೈ ಬಿಟ್ಡು ಕಮಲಹಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದಕಾರಜೋಳ 47065 ಸಾವಿರಕ್ಕೂ ಹೆಚ್ಚು
ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಿಧಾನಸಭೆ ಕ್ಷೇತ್ರಗಳು

ಒಟ್ಟು ಎಂಟು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಚಿತ್ರದುರ್ಗದಲ್ಲಿ ಚುನಾವಣೆ ಮೊದಲು ರಾಜಕೀಯ ಚಿತ್ರಣ ಕಾಂಗ್ರೆಸ್‌ಗೆ ವರದಾನವಾಗಿ ಕಾಣುತ್ತಿತ್ತು. ಹಾಗೆಯೇ ಹಾಲಿ ಸಂಸದರನ್ನು ಹೊಂದಿರುವ ಬಿಜೆಪಿಗೆ ಸುಲಭವಾದ ಗೆಲುವಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು. ಒಟ್ಟು ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರ ಬರುವುದು ಒಂದು ಕಡೆ ಮಾತ್ರ!

ತುಮಕೂರು ಜಿಲ್ಲೆಯ ಶಿರಾ ಮತ್ತು ಪಾವಗಡ (ಎಸ್‌ಸಿ) ಈ ಕ್ಷೇತ್ರ ವ್ಯಾಪ್ತಿಗೆ ಬರುತ್ತವೆ. ಶಿರಾದಲ್ಲಿ ಟಿಬಿ ಜಯಚಂದ್ರ ಮತ್ತು ಪಾವಗಡದಲ್ಲಿ ಎಚ್‌ವಿ ವೆಂಕಟೇಶ್ ಕಾಂಗ್ರೆಸ್ ಶಾಸಕರಾಗಿದ್ದಾರೆ. ಮೊಳಕಾಲ್ಮೂರು (ಎಸ್‌ಟಿ), ಚಳ್ಳಕೆರೆ (ಎಸ್‌ಟಿ), ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಹೊಳಲ್ಕೆರೆ (ಎಸ್‌ಸಿ) ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಮತ ಎಣಿಯನಂತರ ಮತದಾರರ ತೀರ್ಪು ಬಿಜೆಪಿಯತ್ತ ನೀಡಿರುವುದು ಆಶ್ಚರ್ಯದ ಫಲಿತಾಂಶ ನೀಡಿದೆ. *ಚತ್ರದುರ್ಗ ಲೋಕಾ ಕ್ಷೇತ್ರದ ಹಿನ್ನೋಟ.*

1952ರ ಮೊದಲ ಚುನಾವಣೆಯಲ್ಲಿ ಸಂಸತ್‌ಗೆ ಇಲ್ಲಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾದವರು ರಾಜ್ಯದ ಮಾಜಿ ಸಿಎಂ ಎಸ್ ನಿಜಲಿಂಗಪ್ಪ. 1957ರಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷದ ಜೆ ಮೊಹಮ್ಮದ್ ಇಮಾಮ್ ಗೆದ್ದಿದ್ದರು. 1962ರಲ್ಲಿ ಕಾಂಗ್ರೆಸ್‌ನ ವೀರಬಸಪ್ಪ ಗೆದ್ದರೆ, 1967ರಲ್ಲಿ ಜೆ ಮೊಹಮ್ಮದ್ ಇಮಾಮ್ ಅವರು ಸ್ವತಂತ್ರ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1991ರವರೆಗೂ ಇಲ್ಲಿ ಕಾಂಗ್ರೆಸ್ ಸತತವಾಗಿ ಗೆದ್ದಿತ್ತು.

1996ರಲ್ಲಿ ಜನತಾದಳದ ಕೋದಂಡರಾಮಯ್ಯ ಜಯಗಳಿಸಿದರು. 1998ರಲ್ಲಿ ಇದು ಕಾಂಗ್ರೆಸ್ ವಶವಾದರೆ, 1999ರಲ್ಲಿ ಮತ್ತೆ ಜನತಾದಳ ಇಲ್ಲಿ ಜಯಭೇರಿ ಬಾರಿಸಿತ್ತು. ನಟ ಶಶಿಕುಮಾರ್ ಅವರು ಸಂಸತ್‌ಗೆ ಆಯ್ಕೆಯಾದ ಚುನಾವಣೆ ಇದು. 2004ರಲ್ಲಿ ಇದು ಮತ್ತೆ ಕಾಂಗ್ರೆಸ್ ವಶವಾದರೆ, 2009ರಲ್ಲಿ ಬಿಜೆಪಿಯ ಜನಾರ್ದನ ಸ್ವಾಮಿ ಗೆಲುವಿನ ನಗೆ ಬೀರಿದರು. 2014ರಲ್ಲಿ ಕಾಂಗ್ರೆಸ್‌ನ ಬಿಎನ್ ಚಂದ್ರಪ್ಪ ವಿಜಯಮಾಲೆ ಧರಿಸಿದರು. 2019ರಲ್ಲಿ ಎ.ನಾರಾಯಣಸ್ವಾಮಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು.

2024ರ ಚುನಾವಣೆಯಲ್ಲಿ ಬಿಜೆಪಿ, ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತೆ ಕೋಟೆ ನಾಡಿನಲ್ಲಿ 47065 ಮತಗಳ ಹಂತರದಿಂದ ಗೆದ್ದು ಬೀಗಿ ಬಿಜೆಪಿ ಖಾತೆ ತೆರೆದಿದ್ದಾರೆ ಚಿತ್ತದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚು ಕಾಂಗ್ರೆಸ್ ಶಾಸಕರಿದ್ದರೂ ಸಹ ಬಿಜೆಪಿ ಜೆಡಿಎಸ್ ಮೈತ್ರಿಯ ಮುಂದೆ ಕೈ ಸೋಲುವಂತೆ ಮಾಡಿದೆ ಕಾಂಗ್ರೆಸ್ ಭದ್ರಕೋಟೆಯಲ್ಲಿ ಕೇಸರಿ ಪಡೆ ಗದ್ದುಗೆ ಏರುವಂತಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page