ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು ಸಿ.ಎಂ.ಸಿದ್ದರಾಮಯ್ಯ.

by | 21/12/23 | ಆರೋಗ್ಯ

ಬೆಂಗಳೂರು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ Siddaramaiah ಅವರು ಉನ್ನತ ಮಟ್ಟದ ಸಭೆ ನಡೆಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು.
ಈಗಿನ ಉಪತಳಿ JN.1 (ಒಮಿಕ್ರಾನ್ ಉಪತಳಿ) ಆಗಿದೆ. ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಜನರಲ್ಲಿ ಪತ್ತೆಯಾಗಿದ್ದು, 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ICU ನಲ್ಲಿದ್ದಾರೆ. ಅವರು ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ.

ರಾಜ್ಯದಲ್ಲಿ ನಿತ್ಯ 5,000, ಬೆಂಗಳೂರಲ್ಲಿ ಸಾವಿರ ಕೊರೊನಾ ಟೆಸ್ಟ್ ನಡೆಯುತ್ತಿದೆ.
ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ.

ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು.
ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು.

ಕೊವಿಡ್ ಚಿಕಿತ್ಸೆಗೆ ನಿಗದಿಪಡಿಸಲಾದ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ.

ಮಾಧ್ಯಮದವರು, ಸುದ್ದಿ ವಾಹಿನಿಯವರು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ.

#KarnatakaFightsJN1

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page