ಕೋವಿಡ್ ನಿರ್ವಹಣೆ ಕುರಿತ ಸಭೆಯಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಸೂಚನೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ವಿಶೇಷ ಕಾರ್ಯ ಯೋಜನೆ ರೂಪಿಸಿ.

by | 22/12/23 | ಸಿನಿಮಾ

ಚಿತ್ರದುರ್ಗ ಡಿ. 22
ಜಿಲ್ಲೆಯಲ್ಲಿ ಕೋವಿಡ್ ಹರಡದಂತೆ ಹಾಗೂ ಸಂಭವನೀಯ ಪರಿಸ್ಥಿತಿ ನಿರ್ವಹಣೆಗೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು, ಹಾಗೂ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನಿರ್ವಹಣೆಗೆ ವೈದ್ಯಕೀಯ ಸೌಲಭ್ಯಗಳ ಸಿದ್ಧತೆಯನ್ನು ಮಾಡಿಕೊಳ್ಳಲು ವಿಶೇಷ ಕಾರ್ಯ ಯೋಜನೆ ರೂಪಿಸುವಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದ ಎ. ನಾರಾಯಣಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಿದ್ಧತೆಗಳನ್ನು ಕೈಗೊಳ್ಳುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್‍ನ ಜೆಎನ್-01 ಹೊಸ ತಳಿ ಕೇರಳದಲ್ಲಿ ಹೆಚ್ಚು ಕಾಣಿಸಿಕೊಂಡಿದ್ದು, ಕರ್ನಾಟಕಕ್ಕೂ ಕಾಲಿಟ್ಟಿದೆ, ಇದರ ಜೊತೆಗೆ ದೇಶದಲ್ಲಿಯೂ ಕೂಡ ವ್ಯಾಪಕವಾಗುವ ಸಾಧ್ಯತೆಗಳಿವೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೂಡ ಈ ಬಗ್ಗೆ ಗುರುವಾರದಮದು ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ, ಕೆಲವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿಯೂ ಕೋವಿಡ್ ನಿಂದ 03 ಸಾವು ಸಂಭವಿಸಿದೆ ಎಂದು ವರದಿ ಬಂದಿದ್ದು, ಸಾವಿಗೆ ಏನೇ ಕಾರಣ ಹೇಳಿದ್ದರೂ, ಈ ಹಿಂದಿನ ಅನುಭವದ ಆಧಾರದಲ್ಲಿ ಇದನ್ನು ನಾವು ಹಗುರವಾಗಿ ಪರಿಗಣಿಸುವಂತಿಲ್ಲ. ಈ ಹಿಂದೆಯೂ ಕೂಡ ನಿಧಾನವಾಗಿ ಕಾಣಿಸಿಕೊಂಡ ಕೋವಿಡ್ ಬಳಿಕ ತೀವ್ರ ಗಂಭೀರ ಪರಿಸ್ಥಿತಿ ಉಂಟು ಮಾಡಿತ್ತು. ಹೀಗಾಗಿ ಈ ಬಾರಿ ನಾವು ನಿರ್ಲಕ್ಷ್ಯ ತೋರುವಂತಿಲ್ಲ. ಆಸ್ಪತ್ರೆಗಳಲ್ಲಿ ದಾಖಲಾಗುವ ಜ್ವರ ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಬೇಕು, ಹಾಗೂ ಆಯಾ ದಿನದಂದೇ ಫಲಿತಾಂಶ ಸಿಗುವಂತಾಗಬೇಕು ಎಂದರು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವನೀಯ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್‍ಗಳು, ಐಸಿಯು, ಬೆಡ್‍ಗಳು, ವೆಂಟಿಲೇಟರ್‍ಗಳು ಹಾಗೂ ಆಕ್ಸಿಜನ್ ವ್ಯವಸ್ಥೆ, ಮತ್ತು ಅಗತ್ಯ ಔಷಧಿ ಉಪಕರಣಗಳನ್ನು ಸಿದ್ಧವಾಗಿರಿಸಿಕೊಳ್ಳಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಬೆಡ್, ಆಕ್ಸಿಜನ್ ಸಿಲಿಂಡರ್, ವೆಂಟಿಲೇಟರ್, ಆಕ್ಸಿಜನ್ ಘಟಕಗಳ ಪರಿಶೀಲನೆ ಮಾಡಬೇಕು, ಒಂದು ವೇಳೆ ಯಾವುದೇ ದುರಸ್ತಿಗಳಿದ್ದಲ್ಲಿ ಕೂಡಲೆ ಮಾಡಿಸಬೇಕು, ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳಬೇಕು. ಸಿಎಸ್‍ಆರ್ ನಿಧಿಯಡಿ ಈ ಹಿಂದೆ ಮೆಡಿಕಲ್ ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲಾಗಿದ್ದು, ಈವರೆಗೂ ಅವು ಸಂಬಂಧಿಸಿದ ಆಸ್ಪತ್ರೆಗಳಿಗೆ ಹಸ್ತಾಂತರವಾಗಿಲ್ಲ, ಕೆಲವೆಡೆ ಸಂಪರ್ಕವನ್ನೇ ನೀಡಿಲ್ಲ, ಹೀಗಾಗಿ ಕೂಡಲೆ ಇದರ ಬಗ್ಗೆ ಕ್ರಮ ಕೈಗೊಂಡು, ವರದಿ ಸಲ್ಲಿಸಬೇಕು. ವೆಂಟಿಲೇಟರ್‍ಗಳ ಬಳಕೆ ದೀರ್ಘ ಕಾಲದಿಂದ ಮಾಡದೇ ಇರುವುದರಿಂದ ಇವುಗಳ ಸೆನ್ಸಾರ್ ಉಪಕರಣ ಹಾಳಾಗುತ್ತದೆ ಎಂದು ವೈದ್ಯರು ತಿಳಿಸಿದ್ದು, ಸೆನ್ಸಾರ್‍ಗಳ ಖರೀದಿಸಿ ದುರಸ್ತಿಗೊಳಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು. ಒಟ್ಟಾರೆ ಕೋವಿಡ್ ನಿಯಂತ್ರಣ ಮತ್ತು ನಿರ್ವಹಣೆಗೆ ಅಗತ್ಯವಿರುವ ಅನುದಾನದ ಬಗ್ಗೆ ಕಾರ್ಯ ಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಜಿಲ್ಲಾಸ್ಪತ್ರೆಯಲ್ಲಿ ಸಂತೆಯ ರೀತಿ ವಾತಾವರಣ ಇರುವುದನ್ನು ಗಮನಿಸಿಸಲಾಗಿದೆ, ಸ್ವಚ್ಛತೆಯ ಕೊರತೆ ಇದೆ. ಪರಿಸ್ಥಿತಿ ಈ ರೀತಿ ಆದರೆ, ಕೋವಿಡ್‍ನ ನಿರ್ವಹಣೆ ತುಂಬಾ ಕಷ್ಟಕರವಾಗುತ್ತದೆ. ಕೂಡಲೆ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಕ್ರಮ ಕೈಗೊಂಡು, ಅಲ್ಲಿನ ಪರಿಸ್ಥಿತಿ ಸರಿಪಡಿಸಬೇಕು ಎಂದು ತಾಕೀತು ಮಾಡಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಶಂಕಾಸ್ಪದ ಪ್ರಕರಣಗಳಿಗೆ ಸಂಬಂಧಿಸಿದಂತೆ 72 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಎಲ್ಲವೂ ನೆಗೆಟಿವ್ ಬಂದಿದೆ. ಮುಂದೆಯೂ ಕೋವಿಡ್ ಟೆಸ್ಟ್ ಸಂಖ್ಯೆಯನ್ನು ಹೆಚ್ಚು ಹೆಚ್ಚು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಡಿಹೆಚ್‍ಒ ಡಾ. ರೇಣುಪ್ರಸಾದ್ ಮಾತನಾಡಿ, ಕೋವಿಡ್ ಜೆಎನ್-01 ಹೊಸ ತಳಿ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕಾ ಕ್ರಮಗಳಾದ ಮಾಸ್ಕ್ ಧರಿಸುವುದು, ಕೈಗೊಳ್ಳನ್ನು ಆಗಾಗ್ಗೆ ಸಾಬೂನಿನಿಂದ ಸ್ವಚ್ಛಗೊಳಿಸುವುದು, ರೋಗ ಲಕ್ಷಣಗಳಿದ್ದವರು ಸಾರ್ವಜನಿಕರೊಂದಿಗೆ ಬೆರೆಯಬಾರದು. ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 312 ಐಸೋಲೇಷನ್ ಬೆಡ್‍ಗಳು, ಆಕ್ಸಿಜನ್ ನೀಡಬಹುದಾದ ಸಂಪರ್ಕವಿರುವ 245 ಬೆಡ್‍ಗಳು, ಹಾಗೂ ಇತರೆ 102 ಬೆಡ್ ಸೇರಿದಂತೆ ಒಟ್ಟು 660 ಬೆಡ್‍ಗಳು ಲಭ್ಯವಿದೆ, ಖಾಸಗಿ ಆಸ್ಪತ್ರೆಗಳಲ್ಲಿ 800 ಬೆಡ್‍ಗಳಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ 62 ವೆಂಟಿಲೇಟರ್‍ಗಳಿದ್ದು, ಇದರಲ್ಲಿ 23 ಮಾತ್ರ ಕಾರ್ಯ ನಿರ್ವಹಿಸುತ್ತಿವೆ. 303 ಆಕ್ಸಿಜನ್ ಕಾನ್ಸಂಟ್ರೇಟರ್ಸ್, 606 ಆಕ್ಸಿಜನ್ ಸಿಲಿಂಡರ್‍ಗಳು ಲಭ್ಯವಿದೆ. ವೈದ್ಯಕೀಯ ಆಕ್ಸಿಜನ್ ಪ್ಲಾಂಟ್‍ಗೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯಲ್ಲಿ 500 ಲೀ., 300 ಲೀ. ಹಾಗೂ 1000 ಲೀ. ಸಾಮಥ್ರ್ಯದ ಪ್ಲಾಂಟ್, ಹೊಸದುರ್ಗದಲ್ಲಿ 500 ಲೀ., ಹಿರಿಯೂರಿನಲ್ಲಿ 250 ಲೀ. ಸಾಮಥ್ರ್ಯದ ಆಕ್ಸಿಜನ್ ಪ್ಲಾಂಟ್ ಇನ್ಸ್ಟಾಲೇಶನ್ ಪೂರ್ಣಗೊಂಡಿದೆ. ಆದರೆ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹೊಳಲ್ಕೆರೆಯಲ್ಲಿ ಪೂರ್ಣಗೊಂಡಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹೊಳಲ್ಕೆರೆಯಲ್ಲಿ ತ್ವರಿತವಾಗಿ ಇನ್ಸ್ಟಾಲೇಶನ್ ಕಾರ್ಯ ಪೂರ್ಣಗೊಳಿಸಬೇಕು, ಹಾಗೂ ಎಲ್ಲ ಘಟಕಗಳು ಆಯಾ ಆಸ್ಪತ್ರೆಗಳಿಗೆ ಹಸ್ತಾಂತರವಾಗುವಂತೆ ಕ್ರಮ ಕೈಗೊಳ್ಳಬೇಕು, ಇದಕ್ಕೆ ಯಾವುದಾದರೂ ಅಡ್ಡಿ ಇದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ, ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲ್ಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.

ಕೆ.ಎಸ್. ನವೀನ್, ವಿಧಾನಪರಿಷತ್ ಸದಸ್ಯರು :
ಕೇರಳದ ಶಬರಿಮಲೆಗೆ ಹೋಗಿ ಬರುವ ಅಯ್ಯಪ್ಪಸ್ವಾಮಿ ಭಕ್ತಾದಿಗಳು, ತೀವ್ರ ಎಚ್ಚರಿಕೆ ವಹಿಸಬೇಕು. ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಕಾರಣ, ಶಬರಿಮಲೆಗೆ ಹೋಗಿ ಬಂದವರು ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ಕೆಲವು ದಿನಗಳ ಕಾಲ ಸಾರ್ವಜನಿಕರ ಮಧ್ಯೆ ಬೆರೆಯಬಾರದು, ಸ್ವಯಂ ಪ್ರೇರಣೆಯಿಂದ ಕೆಲವು ದಿನ ಹೋಂ ಕ್ವಾರಂಟೈನ್ ಆಗಿರಬೇಕು ಎಂದು ಭಕ್ತಾದಿಗಳಲ್ಲಿ ಮನವಿ ಮಾಡುತ್ತೇನೆ.

Latest News >>

ಕಾಣೆಯಾದ ಐದು ವರ್ಷದ ಬಾಲಕಿ ಪತ್ತೆ ಕುಟುಂಬಸ್ಥರ ಮಡಿಲು ಸೇರಿದ ಬಾಲಕಿ

ಚಳ್ಳಕೆರೆ ಮಾ.3 ಮನೆಯಿಂದ ಕಾಣೆಯಾಗಿದ್ದ 5 ವರ್ಷದ ಬಾಲಕಿ‌ ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ್ದಾಳೆ. ಹೌದು ಇದು ಚಳ್ಳಕೆರೆ ನಗರದ ಶಾಂತಿನಗರದ...

ಚಳ್ಳಕೆರೆಯಲ್ಲಿ 700 ಮನೆಗಳ ಲೋಕಾರ್ಪಣೆ ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ

ಚಿತ್ರದುರ್ಗ ಮಾ.01: ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’...

ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕ ಮಾಹಿತಿ ಸಲ್ಲಿಸಲು ಸೂಚನೆ

ಚಿತ್ರದುರ್ಗ ಫೆ.29: ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8)ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ...

ಬಾಲನಟರ ಪಾತ್ರಕ್ಕಾಗಿ ಮಕ್ಕಳ ಬಳಕೆ: ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

ಚಿತ್ರದುರ್ಗ ಫೆ.28: ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ, 2016ರನ್ವಯ ಕರ್ನಾಟಕ...

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ...

ಇ-ಆಸ್ತಿ ಆಂದೋಲನ ಸದುಪಯೋಗ ಪಡಿಸಿಕೊಳ್ಳುವಂತೆ ಪೌರಾಯುಕ್ತ ಚಂದ್ರಪ್ಪ.

ಸರಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸುತ್ತೋಲೆಯಂತೆ ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಇ -ಆಸ್ತಿ ಸೇವೆ ಆಂದೋಲನ ಪ್ರಾರಂಭ ಮಾಡಿದ್ದೆವೆ...

ನೀರಿನ ಅಸಮರ್ಪಕ ಬಳಕೆಯಿಂದ ಬರ ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ

ಚಿತ್ರದುರ್ಗ ಫೆ.23: ನೀರಿನ ಅಸಮರ್ಪಕ ಬಳಕೆಯಿಂದ ನೀರಿನ ಸಮಸ್ಯೆ ಹಾಗೂ ಬರ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರು ಜಲರಕ್ಷಕರಾಗಿ ಎಚ್ಚೆತ್ತುಕೊಂಡಾಗ...

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ಜೂನ್ ವೇಳೆಗೆ ರೈಲ್ವೇ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ: ವರ್ಷಾಂತ್ಯಕ್ಕೆ ನೇರ ರೈಲು ಕಾಮಗಾರಿ ಆರಂಭ

ಚಿತ್ರದುರ್ಗ. ಫೆ.26: ದಾವಣಗೆರೆ ರಸ್ತೆ ಹಾಗೂ ಕವಾಡಿಗರಹಟ್ಟಿ ಹತ್ತಿರದ ಹೊಳಲ್ಕೆರೆ ರಸ್ತೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ಯೋಜನೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page