ಕೋವಿಡ್ ರೋಗ ಹಿನ್ನೆಲೆ ಹೊಸ ವರ್ಷಾಚರಣೆಯಲ್ಲಿ ವಿದ್ಯಾರ್ಥಿಗಳು ಜಾಗೃತಿ ವಹಿಸುವುದು ಅತ್ಯವಶ್ಯಕ:ಬಿ ರಾಜ್ ಕುಮಾರ್.

by | 30/12/23 | ಆರೋಗ್ಯ


ಚಳ್ಳಕೆರೆ: ನಗರದ ಹೆಗ್ಗೆರೆ ತಾಯಮ್ಮ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹೊಸ ವರ್ಷದ ನಿಮಿತ್ತ ವಿದ್ಯಾರ್ಥಿನಿಯರಿಗೆ ಕೊರೋನ ರೋಗ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಕುಮಾರ್ ಮಾತನಾಡಿ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ ಕೋವಿಡ್ ಸಾಂಕ್ರಾಮಿಕ ರೋಗ ಈಗಾಗಲೇ ರಾಜ್ಯದಲ್ಲಿ ಪ್ರವೇಶಿಸಿದ್ದು ವಿದ್ಯಾರ್ಥಿಗಳು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು ತಮ್ಮ ಮನೆಯ ಸದಸ್ಯರಿಗೂ ಹಾಗೂ ಸುತ್ತಮುತ್ತಲಿನ ಅನಕ್ಷರಸ್ತ ನಾಗರಿಕರಿಗೆ ಕಾಳಜಿ ವಹಿಸುವಂತೆ ಮನವರಿಕೆ ಮಾಡಿಕೊಡಬೇಕು ಹೊಸ ವರ್ಷ ಆಚರಣೆಯನ್ನು ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಸರಳವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಕಿವಿಮಾತು ಹೇಳಿದರು.

ಮುಖ್ಯ ಶಿಕ್ಷಕಿ ವೇಣಿ ಮಾತನಾಡಿ ವಿದ್ಯಾರ್ಥಿಗಳ ಬಾಳಿನಲ್ಲಿ ಹಳೆಯ ಕಹಿ ನೆನಪುಗಳು ಮಾಸು ಹೋಗಿ ಹೊಸ ವರ್ಷದಲ್ಲಿ ಹೊಸ ಕನಸುಗಳೊಂದಿಗೆ ತಮ್ಮ ಜೀವನವನ್ನು ರೂಪಿಸಿಕೊಳ್ಳುತ್ತ ಗಮನಹರಿಸಬೇಕು ಜೀವನವನ್ನು ಯಶಸ್ಸಿನತ್ತ ಕೊಂಡೊಯ್ಯಲು ಉತ್ತಮ ಸನ್ಮಾರ್ಗಗಳನ್ನು ಕಂಡುಕೊಂಡು ಪೋಷಕರಿಗೆ ಹಾಗೂ ಶಾಲೆಗೆ ಕೀರ್ತಿ ತರುವತ್ತ ಗಮನ ಕೇಂದ್ರೀಕರಿಸಬೇಕು ಕೋವಿಡ್ ರೋಗದ ಬಗ್ಗೆ ಯಾವುದೇ ಆತಂಕ ಬೇಡ ಆದರೆ ಮುಂಜಾಗ್ರತೆ ಅಗತ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News >>

ಕಾಣೆಯಾದ ಐದು ವರ್ಷದ ಬಾಲಕಿ ಪತ್ತೆ ಕುಟುಂಬಸ್ಥರ ಮಡಿಲು ಸೇರಿದ ಬಾಲಕಿ

ಚಳ್ಳಕೆರೆ ಮಾ.3 ಮನೆಯಿಂದ ಕಾಣೆಯಾಗಿದ್ದ 5 ವರ್ಷದ ಬಾಲಕಿ‌ ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ್ದಾಳೆ. ಹೌದು ಇದು ಚಳ್ಳಕೆರೆ ನಗರದ ಶಾಂತಿನಗರದ...

ಚಳ್ಳಕೆರೆಯಲ್ಲಿ 700 ಮನೆಗಳ ಲೋಕಾರ್ಪಣೆ ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ

ಚಿತ್ರದುರ್ಗ ಮಾ.01: ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’...

ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕ ಮಾಹಿತಿ ಸಲ್ಲಿಸಲು ಸೂಚನೆ

ಚಿತ್ರದುರ್ಗ ಫೆ.29: ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8)ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ...

ಬಾಲನಟರ ಪಾತ್ರಕ್ಕಾಗಿ ಮಕ್ಕಳ ಬಳಕೆ: ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

ಚಿತ್ರದುರ್ಗ ಫೆ.28: ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ, 2016ರನ್ವಯ ಕರ್ನಾಟಕ...

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ...

ಇ-ಆಸ್ತಿ ಆಂದೋಲನ ಸದುಪಯೋಗ ಪಡಿಸಿಕೊಳ್ಳುವಂತೆ ಪೌರಾಯುಕ್ತ ಚಂದ್ರಪ್ಪ.

ಸರಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸುತ್ತೋಲೆಯಂತೆ ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಇ -ಆಸ್ತಿ ಸೇವೆ ಆಂದೋಲನ ಪ್ರಾರಂಭ ಮಾಡಿದ್ದೆವೆ...

ನೀರಿನ ಅಸಮರ್ಪಕ ಬಳಕೆಯಿಂದ ಬರ ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ

ಚಿತ್ರದುರ್ಗ ಫೆ.23: ನೀರಿನ ಅಸಮರ್ಪಕ ಬಳಕೆಯಿಂದ ನೀರಿನ ಸಮಸ್ಯೆ ಹಾಗೂ ಬರ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರು ಜಲರಕ್ಷಕರಾಗಿ ಎಚ್ಚೆತ್ತುಕೊಂಡಾಗ...

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ಜೂನ್ ವೇಳೆಗೆ ರೈಲ್ವೇ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ: ವರ್ಷಾಂತ್ಯಕ್ಕೆ ನೇರ ರೈಲು ಕಾಮಗಾರಿ ಆರಂಭ

ಚಿತ್ರದುರ್ಗ. ಫೆ.26: ದಾವಣಗೆರೆ ರಸ್ತೆ ಹಾಗೂ ಕವಾಡಿಗರಹಟ್ಟಿ ಹತ್ತಿರದ ಹೊಳಲ್ಕೆರೆ ರಸ್ತೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ಯೋಜನೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page