ಕ್ಷಯಮುಕ್ತ ಜಿಲ್ಲೆ: ಸಹಕಾರ ಅಗತ್ಯ -ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ

by | 05/06/23 | ಆರೋಗ್ಯ

ಚಿತ್ರದುರ್ಗ(ಜನಧ್ವನಿ ವಾರ್ತೆ)ಜೂನ್.5:
ದೇಶವನ್ನು ಪೊಲೀಯೋ ಮುಕ್ತ ರಾಷ್ಟ್ರವನ್ನಾಗಿ ಮಾಡಲಾಗಿದೆ. ಇದೇ ಮಾದರಿಯಲ್ಲಿ ದೇಶ, ರಾಜ್ಯ ಹಾಗೂ ಜಿಲ್ಲೆಯನ್ನು ಕ್ಷಯಮುಕ್ತವಾಗಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಕ್ಷಯರೋಗ ವೇದಿಕೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2025ರ ವೇಳೆಗೆ ದೇಶವನ್ನು ಕ್ಷಯರೋಗ ಮುಕ್ತವಾಗಿಸಲು ರಾಷ್ಟ್ರೀಯ ಸ್ವಾಸ್ಥ್ಯ ಮಿಷನ್ ಗುರಿ ಹೊಂದಿದೆ. ಕ್ಷಯರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಜನರಲ್ಲಿ ಕುಷ್ಠ ಹಾಗೂ ಕ್ಷಯರೋಗದ ಬಗ್ಗೆ ಕಳಂಕ ಮನೋಭಾವ ಇದೆ. ಇದರಿಂದ ರೋಗಿಗಳನ್ನು ತಾರತಮ್ಯ ಭಾವದಿಂದ ನೋಡುತ್ತಾರೆ. ಈ ಕಾರಣದಿಂದ ರೋಗ ಲಕ್ಷಣ ಇರುವವರು ಕ್ಷಯರೋಗ ಪತ್ತೆ ಮಾಡಿಸಿಕೊಳ್ಳುವಲ್ಲಿ ಹಿಂಜರಿಕೆ ತೋರುತ್ತಾರೆ. ಕಾಲರಾ ರೋಗದ ತರ ಕ್ಷಯ ರೋಗವು ಬ್ಯಾಕ್ಟೀರಿಯಾದಿಂದ ಹರಡುತ್ತದೆ. ಬಿಸಿಲಸ್ ಕುಟುಂಬದ ಮೈಕೋಬ್ಯಾಕ್ಟೀರಿಯಲ್ ಟ್ಯುಬರ್ ಕ್ಯುಲೋಸಿಸ್ ಕ್ಷಯರೋಗ ಹರಡಲು ಕಾರಣ. ಇದರ ಬಗ್ಗೆ ಜನರಿಗೆ ತಿಳುವಳಿಕೆ ನೀಡಬೇಕು. ಟಿ.ಬಿ. ಕಾಯಿಲೆ ಕುರಿತಾದ ಮನಸ್ಥಿತಿ ಬದಲಾಯಿಸಬೇಕು.
ಕ್ಷಯರೋಗದ ಪತ್ತೆ ಕಾರ್ಯ ಹೆಚ್ಚಾಗಬೇಕು. ರೋಗ ಕಂಡುಬಂದವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ರೋಗಿಗಳನ್ನು ಅನುಪಾಲನೆ ಮಾಡಬೇಕು. ಇದರಿಂದ ಕ್ಷಯರೋಗವನ್ನು ದೇಶದಿಂದ ಹೋಗಲಾಡಿಸಲು ಸಾಧ್ಯವಾಗುತ್ತದೆ.
ವಿಶ್ವಸಂಸ್ಥೆಯ ವರದಿ ಪ್ರಕಾರ ಶೇ.27 ರಷ್ಟು ಕ್ಷಯರೋಗದ ವರದಿಗಳು ಭಾರತದಲ್ಲಿ ದಾಖಲಾಗುತ್ತಿವೆ. ಶೇ.33 ರಷ್ಟು ಕ್ಷಯರೋಗದಿಂದ ಮರಣ ಹೊಂದುವರ ಪ್ರಮಾಣ ಭಾರತದಲ್ಲಿದೆ. ಕ್ಷಯರೋಗದಲ್ಲಿ ಕರ್ನಾಟಕ ದೇಶದಲ್ಲಿ 8ನೇ ಸ್ಥಾನದಲ್ಲಿದೆ. ದೇಶದಲ್ಲಿ ಕ್ಷಯದಿಂದ ಮರಣ ಹೊಂದುವವರ ಪ್ರಮಾಣ ಶೇ.4 ರಷ್ಟಿದ್ದರೆ ಕರ್ನಾಟಕ ರಾಜ್ಯದಲ್ಲಿ ಈ ಪ್ರಮಾಣ ಶೇ.8 ರಷ್ಟಿದೆ. ಇದು ಕ್ಷಯರೋಗ ಗಂಭೀರತೆಯನ್ನು ಮನದಟ್ಟು ಮಾಡುತ್ತದೆ. ಇದನ್ನು ಗಮನದಲ್ಲಿ ಇರಿಸಿಕೊಂಡು ಕ್ಷಯರೋಗ ನಿರ್ಮೂಲನೆ ಪ್ರಯತ್ನ ಪಡಬೇಕು ಎಂದರು.
ವೈದ್ಯಕೀಯ ಕ್ಷೇತ್ರ ಅಪಾರವಾಗಿ ಮುಂದುವರೆದಿದೆ. ಯಾವುದೇ ರೋಗಗಳನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ, ವೈಜ್ಞಾನಿಕವಾಗಿ ಚಿಕಿತ್ಸೆ ನೀಡಿದರೆ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ. ಇಂದಿನ ದಿನಗಳಲ್ಲಿ ಸಾಂಕ್ರಮಿಕ ರೋಗಗಳಿಂದ ಹೆಚ್ಚು ಮರಣಗಳು ಸಂಭವಿಸುತ್ತಿಲ್ಲ. ಆಧುನಿಕ ಜೀವನ ಶೈಲಿಯಿಂದಾಗಿ ಜನರಲ್ಲಿ ಹೃದಯ, ಕಿಡ್ನಿ, ಲಿವರ್ ಸಂಬಂಧಿ ರೋಗಗಳು ಕಂಡುಬರುತ್ತಿವೆ. ಹೃದಯಾಘಾತ ಹಾಗೂ ಇತರೆ ಕಾರಣಗಳಿಂದ ಸಾವು ಸಂಭವಿಸುತ್ತಿದೆ.
ಕ್ಷಯರೋಗದ ಬಗ್ಗೆ ಶಾಲಾ ಮಕ್ಕಳಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಶಾಲಾ ಪಾರ್ಥನೆ ಸಮಯ, ವಿಜ್ಞಾನ ಪಾಠ ಬೋಧನೆ ಸಂದರ್ಭದಲ್ಲಿ ಕ್ಷಯರೋಗ ಮಾಹಿತಿ ನೀಡಬೇಕು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಡಿ ಮಕ್ಕಳಿಗೂ ಕೂಡ ಕ್ಷಯರೋಗ ಪತ್ತೆ ಪರೀಕ್ಷೆ ಮಾಡಬೇಕು. ಇದೇ ರೀತಿ ಕಾರ್ಮಿಕರು ಕ್ಷಯರೋಗದ ಬಗ್ಗೆ ಮಾಹಿತಿ ನೀಡಬೇಕು. ಕರಪತ್ರ ಹಂಚುವುದರ ಜೊತೆಗೆ ಕ್ಷಯ ರೋಗದ ಕುರಿತು ಬೀದಿ ನಾಟಕಗಳನ್ನು ಆಯೋಜಿಸುಬೇಕು. ಸರ್ಕಾರೇತರ ಸಂಸ್ಥೆಗಳು, ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳನ್ನು ಬಳಿಸಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕ್ಷಯ ರೋಗ ನಿಯಂತ್ರಣ ಮಾಡುವಲ್ಲಿ ಜಿಲ್ಲೆಯಲ್ಲಿ ಉತ್ತಮ ಕೆಲಸಗಳಾಗಿವೆ. ಆದರೂ ಇದನ್ನು ಸಂಪೂರ್ಣ ಮುಕ್ತ ಮಾಡಲು ಅಧಿಕಾರಿಗಳು ಶ್ರಮಿಸಬೇಕು. ಅನಕ್ಷರಸ್ಥರಿಗೂ ಕೂಡ ಅರ್ಥವಾಗುವ ರೀತಿ ಕ್ಷಯ ರೋಗದ ಕುರಿತು ವಿಶೇಷ ವಿಡಿಯೋ ರೂಪಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಕ್ಷಯರೋಗ ಚಿಕಿತ್ಸೆಗೆ ಸಮಗ್ರ ರೀತಿಯಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಿ. ಈ ಯೋಜನೆಗೆ ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಮಗ) ಅಡಿ ಅನುದಾನ ಒದಗಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೇಳಿದರು.
ಕ್ಷಯರೋಗದ ಕುರಿತು ವಿಶ್ವ ರೋಗ ಸಂಸ್ಥೆ ಸಮಾಲೋಚಕಿ ಡಾ.ಹಂಸವೇಣಿ ಪ್ರಾತ್ಯಕ್ಷಕೆ ನೀಡಿ, ಕ್ಷಯರೋಗ ಹೆಚ್.ಐ.ವಿ ಸೋಂಕಿತರು, ಇತರೆ ಕೋಮಾರ್ಬಿಟಿ ರೋಗಗಳನ್ನು ಹೊಂದಿರುವರಿಗೆ ಹರಡುವ ಸಂಭವ ಹೆಚ್ಚಿದೆ. ಜಿಲ್ಲೆಯಲ್ಲಿ 1097 ಕ್ಷಯರೋಗ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಈ ವರ್ಷದ ಪ್ರಥಮ ತೈಮಾಸಿಕದಲ್ಲಿ 12312 ಕ್ಷಯರೋಗ ಪತ್ತೆ ಪರೀಕ್ಷೆ ನಡೆಸಲು ಗುರಿ ನೀಡಲಾಗಿತ್ತು. ಇದವರೆಗೂ 9547 ಪರೀಕ್ಷೆಗಳನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ 2022ರಲ್ಲಿ ಶೇ.8 ರಷ್ಟು ಕ್ಷಯರೋಗ ಮರಣಪ್ರಮಾಣ ದಾಖಲಾಗಿದೆ. ಇದರಲ್ಲಿ ಹೆಚ್.ಐ.ವಿ ಹಾಗೂ ತಡವಾಗಿ ಬೆಳಕಿಗೆ ಬಂದ ಪ್ರಕರಣಗಳು ಹೆಚ್ಚಿವೆ. ನೀ-ಕ್ಷಯ ಮಿತ್ರ ಯೋಜನೆ ಜಾರಿ ಮಾಡಲಾಗಿದೆ. ಕ್ಷಯರೋಗಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರತಿ ರೋಗಿ ಔಷದೋಪಚಾರಕ್ಕೆ ರೂ.1000 ಹಾಗೂ ಚಿಕಿತ್ಸೆ ಪೂರ್ಣಗೊಳ್ಳೂವ ವರೆಗೂ ರೂ. 2000 ರಿಂದ 3000 ಧನ ಸಹಾಯ ಇದರೊಂದಿಗೆ ಆಹಾರ ಕಿಟ್ ಸಹ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಮಿಸೈಲ್ ಹಾಗೂ ರೂಬೆಲ್ಲಾ ಲಸಿಕೆ ಅಭಿಯಾನದ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಂಗನಾಥ, ಕಾರ್ಯಕ್ರಮ ಅನುಷ್ಠಾನಧಿಕಾರಿ ಡಾ.ಕುಮಾರಸ್ವಾಮಿ, ಜಿಲ್ಲಾ ಕ್ಷಯರೋಗ ನಿರ್ಮೂಲ ಅಧಿಕಾರಿ ಡಾ.ಸಿ.ಓ ಸುಧಾ, ಕಾರ್ಮಿಕ ಅಧಿಕಾರಿ ಸಿ.ಎನ್.ಯಶೋಧರ, ಡಿ.ಡಿ.ಪಿ.ಐ ರವಿಶಂಕರ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಭಾರತಿ ಆರ್.ಬಣಕಾರ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಉಮಾಪತಿ, ತಾಲ್ಲೂಕು ಆರೋಗ್ಯ ಅಧಿಕಾರಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೂ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page