ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಸಂಪರ್ಕ ರಸ್ತೆಗಳ ಅಭಿವೃದ್ಧಿ ಪಡಿಸಲಾಗಿದೆ ಶಾಸಕ ಟಿ.ರಘುಮೂರ್ತಿ.

by | 28/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ 28
ನಾನು ಪ್ರಥಮಬಾರಿಗೆ ಚುನಾವಣೆ ಸ್ಪರ್ಧೆ ಮಾಡಿದ ಸಂದರ್ಭದಲ್ಲಿ ನನ್ನಿವಾಳ ಗ್ರಾಪಂ ವ್ಯಾಪ್ತಿಯ ಸುಮಾರು 30 ಹಟ್ಟಿಗಳಿಗೆ ರಸ್ತೆಗಳಿರಲಿಲ್ಲ ಗೆದ್ದ ನಂತರ ಎಲ್ಲಾ ಹಟ್ಟಿಗಳಿಗಳಿಗೆ ಡಾಂಬರ್ ರಸ್ತೆ ಮಾಡಿದ್ದೇನೆ ಈ ಬಾರಿ ಗೆದ್ದ ತಕ್ಷಳ ಹಟ್ಟಿಗಳ ಸರ್ವಾಂಗಿಣ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಟಿ,ರಘುಮೂರ್ತಿ ಭರವಸೆ ನೀಡಿದ್ದಾರೆ.


ತಾಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಚುನಾವಣೆ ಮತಯಾನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನನ್ನಿವಾಳ ಗ್ರಾಪಂ ವ್ಯಾಪ್ತಿಯ ಬುಡ್ಡಕಟ್ಟು ಸಮುದಾಯವರು ಇಲ್ಲಿನ ಮುಖ್ಯ ಕಸಬು ಪಶುಪಾಲನೆ ಹಾಗೂ ಬುಡ್ಡಕಟ್ಟು ದೇವರಿಗೆ ಹರಕೆ ರೂಪದಲ್ಲಿ ಬಿಟ್ಟ ಜಾನುವಾರುಗಳಿಗೆ ಕುಡಿಯುವ ನೀರು,ಮೇವಿನ ಕೊರತೆ, ದೇವರ ಎತ್ತಿನ ಗೂಡಗಳ ಬಳಿ ಮೂಲ ಭೂತ ಸೌಲಭ್ಯಗಳ ಕೊರತೆಯನ್ನು ನೀಗಿಸಿ ಪ್ರತಿ ಹಟ್ಟಿಗಳಿಗೆ ಡಾಂಬರ್ ರಸ್ತೆ ಸಂಪರ್ಕ ಹಾಗೂ ಪ್ರತಿ ಹಟ್ಟಿಗಳಿಗೆ ಸಮುದಾಯ ಭವಗಳನ್ನು ನಿರ್ಮಿಸಲಾಗಿದೆ.


ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲಾಗಿದೆ. ನಿವೇಶನ ಕೊರತೆ ಹಾಗೂ ಖಾಸಗಿ ಜಮೀನುಗಳಲ್ಲಿ ಮನಗೆಗಳಿರುವುದರಿಂದ ಹಕ್ಕು ಪತ್ರ ಹಾಗೂ ನಿವೇಶಗಳ ಕೊರತೆ ಈ ಬಾರಿ ಚುನಾವಣೆಯಲ್ಲಿ ಗೆದ್ದ ತಕ್ಷಣ ಗುಡಿಸಲು ಮುಕ್ತ ಮಾಡುವ ಮೂಲಕ ವಸತಿ , ಮಕ್ಕಳಿಗೆ ಶಿಕ್ಷಣ,ಆರೋಗ್ಯ ಸೇವೆಗಳಿಗೆ ಮೊದಲ ಆಧ್ಯತೆ ನೀಡಲಾಗುವುದು.
ನಾನು ಪ್ರಥಮ ಬಾರಿಗೆ ಚುನಾವಣೆ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ರಸ್ತೆಗಳು ಕಲ್ಲು ಗುಂಡಿಗಳಿAದ ಕೂಡಿದ್ದ ಎಲ್ಲಾ ಹಟ್ಟಿಗಳಿಗೂ ಡಾಂಬರ್ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ ಕುಡಿಯುವ ನೀರಿಕೊರತೆ ನೀಗಿಸಲಾಗಿದೆ.
ಪ್ರತಿಹಳ್ಳಿಗಳಿಗೆ ಆಶ್ರಯ ನಿವೇಶನ ಹಂಚಿಕೆಗೆ ಭೂಮಿ ಮಂಜುರಾತಿ ಹಾಗೂ ಸ್ಮಶಾನಗಳಿಗೆ ಜಾಗ ಮಂಜುರಾತಿ ಮಾಡಲಾಗಿದೆ. ಕ್ಷೇತ್ರ ಪ್ರತಿ ಹಳ್ಳಿಗಳಿಗೆ ಸಂಪರ್ಕ ರಸ್ತೆಗಳ ಅಭಿವೃದ್ಧಿ ಹಾಗೂ ಮುಖ್ಯ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ ಆರೋಗ್ಯ , ಶಿಕ್ಷಣ. ಸಾರಿಗೆ ,ನಿರುದ್ಯೋಗ ಹೋಗಲಾಡಿಸಲು ಖಾಸಗಿ ಸಹಬಾಗಿತ್ವದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರೆಯುವಂತೆ ಮಾಡಲಾಗುವುದು ಅಗತ್ಯ ಮೂಲಭೂತ ಸೌಲಭ್ಯಗಳಿಗೆ ಮೊದಲ ಆದ್ಯತೆ ನೀಡಲಾಗಿದೆ ಆದರೂ ಸಹ ಇನ್ನು ನನಗೆ ತೃಪ್ತಿಯಾಗಿಲ್ಲ ಮೂರನೇ ಬಾರಿಗೆ ಗೆಲ್ಲುವುದು ಖಚಿತ ಕಾಂಗ್ರೆಸ್ ಸರಕಾರ ಆಡಳಿತ ಚುಕ್ಕಾಣಿ ಹಿಡಿಯುವುದು ಖಚಿತ ಕಾಂಗ್ರೆಸ್ ಸರಕಾರ ಅಧಿಕಾರಿಗಳಕ್ಕೆ ಬಂದ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಸೌಲಭ್ಯಗಳನ್ನು ಕಲ್ಲಿಸಲಾಗಿದೆ ಎಂದು ತಿಳಿಸಿದರು.


ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಪ್ರತಿ ಯೊಬ್ಬ ಮತದಾರರು ಮತಗಟ್ಟೆಗೆ ಹೋಗಿ ಬ್ಯಾಲೆಟ್ ನಮೂನೆಯಲ್ಲಿ 3 ನೇ ಕ್ರಮ ಸಂಖ್ಯೆಯಿರುವ ಕೈ ಗುರುತಿಗೆ ಮತ ನೀಡಿ ಜಯಶೀಲರನ್ನಾಗಿ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭಲ್ಲಿ ಗ್ರಾಪಂ ಅಧ್ಯಕ್ಷೆ ಪಾರಿಜಾತ, ಸದಸ್ಯರಾದ ಜಿನ್ನಿ ಬೈಯಣ್ಣ, ಅಪ್ಪಣ್ಣ, ಮಾಜಿ ಗ್ರಾಪಂ ಅಧ್ಯಕ್ಷ ಬಸವರಾಜ್, ಮುಖಂಡರಾದ ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ್, ಮಾಜಿ ಜಿಪಂ ಸದಸ್ಯ ಪ್ರಕಾಶ್ ಮೂರ್ತಿ, ಓಬಯ್ಯ, ಜಯಣ್ಣ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಅಪಾರ ಸಂಖ್ಯೆಯ ಅಭಿಮಾನಿಗಳು , ಮತದಾರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page