ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ನಿರ್ವಾಹಕರು ಮತ್ತು ಕ್ಲೀನರ್‍ಗಳ ನೋಂದಣಿಗಾಗಿ ಮನವಿ

by | 21/10/23 | ಆರ್ಥಿಕ

ಚಿತ್ರದುರ್ಗ ಅ.21:
ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‍ಗಳಿಗಾಗಿ ಅಪಘಾತ ಪರಿಹಾರ ಸೌಲಭ್ಯ ಒದಗಿಸುವ ಉದ್ದೇಶದಿಂದ “ಕರ್ನಾಟಕ ರಾಜ್ಯ ಖಾಸಗೀ ವಾಣಿಜ್ಯ ಸಾರಿಗೆ ವಾಹನ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ” ಜಾರಿಗೆ ತಂದಿರುತ್ತದೆ. ಈ ಯೋಜನೆಯಡಿ ಕರ್ನಾಟಕ ಸಾರಿಗೆ ಇಲಾಖೆಯಿಂದ ಊರ್ಜಿತ ಚಾಲನಾ ಪರವಾನಗಿ ಪಡೆದ ಖಾಸಗಿ ವಾಣಿಜ್ಯ ಚಾಲಕರನ್ನು ಫಲಾನುಭವಿಗಳಾಗಿ ಪರಿಗಣಿಸಲಾಗಿದ್ದು, ನಿರ್ವಾಹಕರು ಮತ್ತು ಕ್ಲೀನರ್‍ಗಳು ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು.
ಕಾರ್ಮಿಕ ಇಲಾಖೆಯ ಈ ಯೋಜನೆ ಜಾರಿಗೆ ತಂದಿದ್ದು, ಕರ್ನಾಟಕ ರಾಜ್ಯ ಖಾಸಗೀ ವಾಣಿಜ್ಯ ಸಾರಿಗೆ ವಾಹ ನ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ, ಖಾಸಗೀ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‍ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಠಕ್ಕೆ ಸಿಲುಕುವ ಸಾದ್ಯತೆಗಳು ಹೆಚ್ಚಾಗಿದ್ದು ಇವರು ಅಪಘಾತಕ್ಕೀಡಾದಾಗ ಮರಣಕ್ಕೆ ತುತ್ತಾಗುವ ಶಾಶ್ವತ ದುರ್ಬಲತೆ ಅಥವಾ ತಾತ್ಕಾಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ ಅವರ ದುಡಿಮೆಯನ್ನೇ ಅವಲಂಭಿಸಿರುವ ಅವರ ಕುಟುಂಬವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಂಕಷ್ಠಕ್ಕೆ ಸಿಲುಕುತ್ತದೆ. ಇಂತಹ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಅಪಘಾತ ಪರಿಹಾರ ಸೌಲಭ್ಯ ಒದಗಿಸುವ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಸದುದ್ದೇಶದಿಂದ ಖಾಸಗೀ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‍ಗಳು ಈ ಯೋಜನೆಯಡಿ ಕಾರ್ಮಿಕ ಅಧಿಕಾರಿಯವರ ಕಛೇರಿ, ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಇಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಷರತ್ತುಗಳು: ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ಯೋಜನೆಯ ಖಾಸಗೀ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು ನಿರ್ವಾಹಕರು ಹಾಗೂ ಕ್ಲೀನರ್‍ಗಳಿಗೆ ಅನ್ವಯಿಸುತ್ತದೆ.. ವಯೋಮಿತಿ 20 ರಿಂದ 70 ವರ್ಷಗಳು.ಜ ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲು ಸಹ ಲಭ್ಯವಾಗುತ್ತದೆ. ಚಾಲಕರು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಾಲಾಯಿಸಲು ಊರ್ಜಿತ ಚಾಲನಾ ಪರವಾನಿಗೆ ಹೊಂದಿರುವುದು ಕಡ್ಡಾಯ, ಚಾಲಕರು ಮಂಡಳಿಯಲ್ಲಿ ಯೋಜನೆಯಡಿ ಪ್ರತ್ಯೇಕವಾಗಿ ನೋಂದಣಿ ಮಾಡಿಸುವ ಅವಶ್ಯಕತೆ ಇರುವುದಿಲ್ಲ. ನಿರ್ವಾಹಕರು ಹಾಗೂ ಕ್ಲೀನರ್‍ಗಳು ಮಂಡಳಿಯ ನಿಯಮಾನುಸಾರ ಕಾರ್ಮಿಕ ಇಲಾಖೆಯಲ್ಲಿ ಯೋಜನೆಯಡಿ ಫಲಾನುಭವಿಯಾಗಿ ನೋಂದಣಿ ಮಾಡಿಸಿಕೊಳ್ಳಬೇಕು.
ಸೌಲಭ್ಯಗಳು: ಅಪಘಾತದಿಂದ ಚಾಲಕರು ನಿರ್ವಾಹಕರು ಮತ್ತು ಕ್ಲೀನರ್ (Conductor & Cleaner) ಗಳು ಮರಣ ಹೊಂದಿದ್ದಲ್ಲಿ ಅವರ ನಾಮನಿರ್ದೇಶಿತರಿಗೆ ರೂ. 5. ಲಕ್ಷ ಪರಿಹಾರ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ಗರಿಷ್ಠ ರೂ. 2. ಲಕ್ಷದವರೆಗೆ ಪರಿಹಾರ ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದಾಗ ಅಪಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಠ ರೂ. 50, ಸಾವಿರಗಳ ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನ ಪಾವತಿಸಲಾಗುವುದು. 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಲ್ಲಿ ಗರಿಷ್ಠ ರೂ. 1. ಲಕ್ಷದವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುವುದು.
ಕ್ಲೈಮ್ ಅರ್ಜಿ ಸಲ್ಲಿಸುವ ವಿಧಾನ: ಪರಿಹಾರ ಮೊತ್ತವನ್ನು ಪಡೆಯಲು ಅಪಘಾತ ಸಂಭವಿಸಿದ ಒಂದು ವರ್ಷದೊಳಗೆ ಮಂಡಳಿಗೆ ಫಲಾನುಭವಿ/ನಾಮ ನಿರ್ದೇಶಿತರು ಅರ್ಜಿಯನ್ನು ಸಲ್ಲಿಸಬೇಕು. ಸ್ವೀಕರಿಸಿದ ಕ್ಲೈಮ್ ಅರ್ಜಿಯ ದಾಖಲೆಗಳನ್ನು ಪರಿಶೀಲಿಸಿ ಅರ್ಹರಿದ್ದಲ್ಲಿ ಪರಿಹಾರದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ನಿರ್ವಾಹಕರು ಮತ್ತು ಕ್ಲೀನರ್ (Conductor & Cleaner)ಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡು ಅಪಘಾತ ಪರಿಹಾರ ಪಡೆದುಕೊಳ್ಳಬಹುದಾಗಿದೆ
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 08194-231394 ಗೆ ಸಂಪರ್ಕಿಸಬಹುದಾಗಿದೆ ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *