ಚಳ್ಳಕೆರೆ ಅ17
ರಾಜ್ಯದ ಖಾಸಗಿ ಶಾಲೆಗಳ ಮಾನ್ಯತೆಯನ್ನು ಕನಿಷ್ಠ 10 ವರ್ಷಗಳ ಅವಧಿವರೆಗೆ ನವೀಕರಣಗೊಳಿಸುವಂತೆ ರಾಜ್ಯದ ಉಚ್ಚನ್ಯಾಯಾಲಯ ಆದೇಶ ನೀಡಿರುವುದನ್ನು ಸರ್ಕಾರ ಗೆಜೆಟ್ ನೋಟಿಫಿಕೇಶನ್ ನಲ್ಲಿ ಪ್ರಕಟಿಸಿದ್ದರೂ ಸರ್ಕಾರದ ಶಿಕ್ಷಣ ಇಲಾಖೆ ಈ ಆದೇಶವನ್ನು ಜಾರಿಗೆ ತರುವಲ್ಲಿ ವಿಫಲವಾಗಿದ್ದು, ಮತ್ತು ಕಟ್ಟಡದ ಸುರಕ್ಷತೆ ಹಾಗೂ ಅಗ್ನಿ ಸುರಕ್ಷತೆ ಕುರಿತಂತೆ ಹೈಕೋರ್ಟ್ ಆದೇಶ ಪಾಲನೆ ಮಾಡುವಂತೆ ಆಗ್ರಹಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಪದಾಧಿಕಾರಿಗಳು ಸಾರ್ವಜನಿಕ ಶಿಕ್ಷಣಇಲಾಖೆಯ ಕ್ಷೇತ್ರಶಿಕ್ಷಣಾಧಿಕಾರಿಗಳಾದ ಶ್ರೀಯುತ ಸುರೇಶ್ ರವರಿಗೆ ಖಾಸಗಿ ಶಾಲೆಗಳ ಆಡಳಿತ ಮಂಡಳಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಯಾದಲಕಟ್ಟೆಜಗನ್ನಾಥ್ ಮಾತನಾಡಿ, ರಾಜ್ಯ ಸರ್ಕಾರ ಸುಮಾರು 2018 ರಲ್ಲೇ ಖಾಸಗಿ ಶಾಲೆಗಳಿಗೆ ಕನಿಷ್ಠ ಹತ್ತು ವರ್ಷಗಳ ಅವಧಿಗೆ ನವೀಕರಣದ ಮಾನ್ಯತೆ ನೀಡುವಂತೆ ಸರ್ಕಾರದ ಗೆಜೆಟ್ ನೋಟಿಫಿಕೇಷನ್ ನಲ್ಲಿ ಅಧಿಸೂಚನೆ ಹೊರಡಿಸಿದ್ದು, ಇದನ್ನು ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಜಾರಿಗೊಳಿಸುವಲ್ಲಿ ವಿಫಲವಾಗಿದೆ,
ಅಲ್ಲದೆ ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತೆ ಕುರಿತಂತೆ ಉಚ್ಚ ನ್ಯಾಯಾಲಯ ನೀಡಿರುವ ಆದೇಶ ಪಾಲಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿಗಳ ಮೂಲಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿಪತ್ರ ನೀಡಿದರಲ್ಲದೆ, ಈ ಕುರಿತಂತೆ ಆನ್ಲೈನ್ ನಲ್ಲಿ ಸೂಕ್ತ ಬದಲಾವಣೆ ತರುವ ಮೂಲಕ ಅನುಷ್ಠಾನಗೊಳಿಸಬೇಕು, ಈ ಬಗ್ಗೆ ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆಗೆ ಸೂಕ್ತ ಸೂಚನೆ ನೀಡಬೇಕು ಎಂಬುದಾಗಿ ಸರ್ಕಾರವನ್ನು ಒತ್ತಾಯಿಸಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಯಾದಲಕಟ್ಟೆ ಜಗನ್ನಾಥ್, ಕಾರ್ಯದರ್ಶಿ ಪಿ.ದಯಾನಂದ್ ಹಾಗೂ ಅನುದಾನಿತ ಶಾಲೆಗಳ ಸಂಘದ ಅಧ್ಯಕ್ಷ ಸುರೇಶ್, ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಶ್ರೀನಿವಾಸ್, ಜಿ.ಟಿ.ವೀರಭದ್ರಸ್ವಾಮಿ, ತಿಪ್ಪೇಸ್ವಾಮಿ, ಗೌರೀಶ್, ರಾಜಕುಮಾರ್, ಮಾರುತಿ ಪ್ರಸಾದ್, ಚಂದ್ರಣ್ಣ ಇತರರು ಉಪಸ್ಥಿತರಿದ್ದರು.
ಖಾಸಗಿ ಶಾಲೆಗಳ ಮಾನ್ಯತೆ ಯನ್ನು 10 ವರ್ಷಗಳ ವರೆಗೆ ನವೀಕರಣಗೊಳಿಸಲು ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಮನವಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments