ಚಳ್ಳಕೆರೆ ಆ.9
ಚಳ್ಳಕೆರೆ ತಾಲೂಕಿನ ಗಂಜಿಗುಂಟೆ ಗ್ರಾಮದ ನೂರಾರು ದಲಿತ ಕುಟುಂಬಗಳು ನಿವೇಶನಕ್ಕಾಗಿ ತಾಲೂಕು ಕಚೇರಿಯ ಮುಂದೆ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆಮುಂದುವರೆದಿದೆ. ಗಂಜಿಗುಂಟೆ ದಲಿತರ ನಿವೇಶನಕ್ಕಾಗಿ ಇಂದುಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಮುಂದುವರೆದಿದ್ದು.
ಶುಕ್ರವಾರ ನಿವೇಶನಕ್ಕಾಗಿ ಪ್ರತಿಭಟನೆ ಮಾಡುತ್ತಿರುವ ಸ್ಥಳಕ್ಕೆ ರೈತ ಮುಖಂಡ ಕೆ.ಪಿ.ಭೂತಯ್ಯ. ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ .ಕೆ.ಆರ್ ಎಸ್ ಪಕ್ಷ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತ ಪಡಿಸಿ ನಿವೇಶನಕ್ಕೆಂದು ಮೀಸಲಿಟ್ಟ ಭೂಮಿಯಲ್ಲಿ ಅಕ್ರಮವಾಗಿ ಮನೆ. ಕಣ.ಜಾನುವಾರು ಕೊಟ್ಟಿಗೆ ನಿರ್ಮಿಸಿಕೊಂಡವರನ್ನು ಕೂಡಲೆ ತೆರವುಗೊಳಿಸಿ ನಿವೇಶನ ರಹಿತ ಕುಟುಂಬಗಳಿಗೆ ಹಂಚಿಕೆ ಮಾಡಿ ನ್ಯಾಯಕೊಡದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
0 Comments