ಚಳ್ಳಕೆರೆ ಮೇ 6 ಗುಡುಗು/ಸಿಡಿಲು ಬಡಿತದಂತಹ ಪ್ರಕೃತಿ ವಿಕೋಪದಿಂದ ಆಗುವ ಪ್ರಾಣಹಾನಿಯನ್ನು ತಡೆಯಲು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಸೇರಿದಂತೆ ಕರ್ನಾಟಕದ ಹಲವು ಬಾಗಗಳಲ್ಲಿ ಮೇ 7 ರಿಂದ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ
ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಪ್ರಕೃತಿ ವಿಕೋಪಗಳನ್ನು ತಡೆಯಲು ಸರಕಾರ ಹೊರಡಿಸಿದರುವ ಮಾರ್ಗ ಸೂಚಿ ಹಾಗೂ ನಿರ್ದೇಶನಗಳನ್ನು ಚಾಚು ತಪ್ಪದೆ ಪಾಲಿಸುವ ಮೂಲಕ ಗುಡುಗು ಸಿಡಿಲು ಮತ್ತು ಮಳೆಯಿಂದ ಆಗುವ ಅಪಾಯಗಳನ್ನು ಮತ್ತು ಪ್ರಾಣ ಹಾನಿಗಳನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಗಳು ಸೂಚನೆ ನೀಡಿದ್ದಾರೆ.
ಗುಡುಗು ಹಾಗೂ ಸಿಡಿಲು ಬಡಿತದಿಂದ ಅಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಹವಮಾನ ಇಲಾಖೆ ಸೂಚನೆ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ನೀಡಿ ಪ್ರಕೃತಿ ವಿಕೋಪದಿಂದ ಆಗುವ ಪ್ರಾಣ ಹಾನಿಯನ್ನು ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗೃತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ,
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments