ಗೃಹಲಕ್ಷ್ಮಿಯೋಜನೆಗೆ ಅರ್ಹವಿರುವ ಯಾವ ಮಹಿಳೆಯರು ಈ ಯೋಜನೆಯಿಂದ ವಂಚಿತರಾಗದಂತೆ ನಿಗ ವಹಿಸಿ ಮನೆಮನೆಗೆ ತೆರಳಿ ಕೆಲಸ ಮಾಡಬೇಕು ಶಾಸಕ ಟಿ.ರಘುಮೂರ್ತಿ.

by | 30/08/23 | ಆರ್ಥಿಕ

ಚಳ್ಳಕೆರೆ ಆ.30.ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷ ಐದು ಗ್ಯಾರೆಂಟಿಗಳ ಭರವಸೆ ಕೊಟ್ಟಿತ್ತು. ಅದರಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದು ಅರ್ಹ ಗೃಹಿಣಿಯರ ಬ್ಯಾಂಕ್ ಖಾತೆ 2 ಸಾವಿರ ರೂ ಹಾಕಲಾಗುವುದು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆ ವಂಚಿತ ಫಲಾನುಭವಿಗಳಿಗೆ ಆತಂಕ ಬೇಡ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ಅಧಿಕಾರಿಗಳು ನಿಗಾ ವಹಿಸಿ
ಕಾಂಗ್ರೆಸ್ ಪಕ್ಷದ ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿಯ ಮೂಲಕ ನುಡಿದಂತೆ ನಡೆದಿದೆ
ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು ಬಡವರ ಮಧ್ಯಮ ವರ್ಗದ ದೀನ ದಲಿತರ ಸಾಮಾನ್ಯ ಜನರಿಗೆ‌ ನೆರವಾಗುವಂತಹ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಈಗಾಗಲೇ 4 ಯೋಜನೆಗಳನ್ನು ಜಾರಿಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಯ ಕಣ್ಮಣಿಯಾಗಿದ್ದಾರೆ.
ರಾಜ್ಯ ಸರ್ಕಾರ ಇಂದು ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿ ಮನೆ ಯಜಮಾನಿಗೆ 2.ಸಾವಿರ ರೂಗಳನ್ನು ಬ್ಯಾಂಕ್ ಖಾತೆಗೆ ಜಮಾ ಮಾಡುವ ಮೂಲಕ ಮಹಿಳೆಯರ ಬದುಕನ್ನು ಸ್ವಾವಲಂಬನೆಗೊಳಿಸುತ್ತಿದೆ ಮನೆಯ ಜವಾಬ್ದಾರಿಯನ್ನು ನೋಡಿಕೊಳ್ಳುವ ಗೃಹಿಣಿಯರಿಗೆ ಅನುಕೂಲವಾಗಲಿ ಎಂಬ ಚಿಂತನೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೋಜನೆಯನ್ನು ರೂಪಿಸಿ ಮಹಿಳೆಯರ ಬದುಕಿನಲ್ಲಿ ಆಶಾಕಿರಣ ಮೂಡಿಸಿದ್ದಾರೆ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರ ಸಿದ್ಧವಿದ್ದು ಈಗ ಗೃಹಲಕ್ಷ್ಮಿ ಯೋಜನೆ ಜಾರಿಯೊಂದಿಗೆ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ನುಡಿದಂತೆ ನಡೆವ ಸರ್ಕಾರ ಎಂಬುದನ್ನು ರಾಜ್ಯದ ಜನತೆಯ ಮುಂದೆ ಕಾಂಗ್ರೆಸ್ ಪಕ್ಷದ ಸರ್ಕಾರ ಸಾಬೀತುಪಡಿಸಿದೆ ವಿರೋಧ ಪಕ್ಷಗಳ ಟೀಕೆಗಳಿಗೆ ಯೋಜನೆಗಳ ಜಾರಿಯ ಮೂಲಕ ತಕ್ಕ ತಿರುಗೇಟು ನೀಡಿದ್ದೇವೆ ಮುಂದಿನ ದಿನಗಳಲ್ಲಿ ನಿರುದ್ಯೋಗ ಪದವೀಧರರಿಗೆ ಯುವನಿಧಿ ಯೋಜನೆಯನ್ನು ಜಾರಿಗೊಳಿಸಿ ಯುವಕರಿಗೆ ಆಸರೆ ನೀಡಲಾಗುವುದು ಕಾಂಗ್ರೆಸ್ ಸರ್ಕಾರ 2013 ರಿಂದಲೂ ಬಡವರ ನಿರ್ಗತಿಕರ ಪರ ಯೋಜನೆಗಳನ್ನು ರೂಪಿಸಿ ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಿದೆ 

ಅನ್ನಭಾಗ್ಯ ಯೋಜನೆಗೆ ಕೇಂದ್ರದ ಅಡ್ಡಿ: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹತ್ತು ಕೆಜಿ ಅಕ್ಕಿ ನೀಡಬೇಕು ಎಂಬ ಕನಸನ್ನು ರಾಜ್ಯ ಸರ್ಕಾರ ಹೊಂದಿತ್ತು ಕೇಂದ್ರ ಸರ್ಕಾರಕ್ಕೆ ಹಣ ನೀಡುತ್ತೇವೆ ಅಕ್ಕಿ ಕೊಡಿ ಎಂದರೂ ಅಕ್ಕಿ ನೀಡಲಿಲ್ಲ ಆದರೂ ಸರ್ಕಾರ ತನ್ನ ಛಲ ಬಿಡದೆ 5 ಕೆ.ಜಿ ಅಕ್ಕಿಯ ಮೊತ್ತವನ್ನು ಜನರ ಖಾತೆಗೆ ನೇರವಾಗಿ ಜಮಾ ಮಾಡಿದೆ ಇಂತಹ ಜನಪರ ಆಡಳಿತವನ್ನು ನೀಡಲು ಕಾಂಗ್ರೆಸ್ ಪಕ್ಷದ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆ ಆತಂಕ ಬೇಡ: ಗೃಹಲಕ್ಷ್ಮೀ ಯೋಜನೆಗೆ ಫಲಾನುಭವಿಯಾದ ಹೆಣ್ಣು ಮಕ್ಕಳು ಕೆಲವು ತಾಂತ್ರಿಕ ದೋಷ ಅಥವಾ ಸರ್ಕಾರ ಕೇಳಿರುವ ದಾಖಲೆಗಳನ್ನು ಒದಗಿಸಲು ಸಾಧ್ಯವಾಗಿಲ್ಲದಿದ್ದರೆ ವಿಚಲಿತಗೊಳ್ಳದೆ ಎಲ್ಲಾ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ ಇದೇ ವೇಳೆ ಯೋಜನೆಗೆ ಅರ್ಹವಿರುವ ಯಾವ ಮಹಿಳೆಯರು ಈ ಯೋಜನೆಯಿಂದ ವಂಚಿತರಾಗದಂತೆ ನಿಗ ವಹಿಸಿ ಮನೆಮನೆಗೆ ತೆರಳಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರಿಪ್ರಸಾದ್ ಮಾತನಾಡಿ ಗೃಹಲಕ್ಷ್ಮಿ ಯೋಜನೆಯು ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಇಂತಹ ಯೋಜನೆಯನ್ನು ರೂಪಿಸಿ 2000 ರೂಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ನಗರ ಹಾಗೂ ಗ್ರಾಮೀಣ ಪ್ರದೇಶದ 88,920 ಮಹಿಳಾ ಫಲಾನುಭವಿಗಳು ನೋಂದಾಯಿಸಿದ್ದು 77,719 ಫಲಾನುಭವಿಗಳು ಯೋಜನೆಯ ಲಾಭ ಪಡೆದಿರುತ್ತಾರೆ ಶೇಕಡ 87 ರಷ್ಟು ಗುರಿ ಸಾಧಿಸಿದ್ದು ಮುಂದಿನ ದಿನಗಳಲ್ಲಿ ಅರ್ಹ ಫಲಾನುಭವಿಗಳು ಯಾವುದೇ ಆತಂಕ ಪಡದೆ ಹತ್ತಿರದ ಅಂಗನವಾಡಿ ಕೇಂದ್ರಗಳಲ್ಲಿ ಅಥವಾ ಶಿಶು ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಉಚಿತವಾಗಿ ನೊಂದಾಯಿಸಲು ಅವಕಾಶ ನೀಡಲಾಗಿದೆ ಎಲ್ಲಾ ಅರ್ಹ ಮಹಿಳೆಯರು ಇದರ ಲಾಭವನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.

ನಗರಸಭಾ ಮಾಜಿ ಉಪಾಧ್ಯಕ್ಷೆ ಮಂಜುಳಾ ಪ್ರಸನ್ನ ಕುಮಾರ್ ಮಾತನಾಡಿ ಮನೆ ಯಜಮಾನಿಗೆ ಸರ್ಕಾರ 2000 ರೂಗಳನ್ನು ನೀಡಿ ಮನೆ ಜವಾಬ್ದಾರಿಯನ್ನು ನಿರ್ವಹಿಸಲು ಸಹಕಾರ ನೀಡಿದೆ ಮನೆಯ ಕುಟುಂಬದ ನಿರ್ವಹಣೆಗೆ ಈ ಹಣವನ್ನು ವಿನಿಯೋಗಿಸಿ ಅಥವಾ ತಮ್ಮ ಸ್ವಾವಲಂಬನೆ ಬದುಕನ್ನು ಕಟ್ಟಿಕೊಳ್ಳಲು ಸ್ತ್ರೀಯರು ಉಪಯೋಗಿಸಿಕೊಳ್ಳಬೇಕು ಕಾಂಗ್ರೆಸ್ ಪಕ್ಷ ರಾಜ್ಯದ ಬಡ ಜನರ ಹಿತ ದೃಷ್ಟಿಯಿಂದ ಇಂತಹ ಜನಪರ ಯೋಜನೆಗಳನ್ನು ರೂಪಿಸಿರುವುದು ಸ್ವಾಗತಾರ್ಹವಾಗಿದೆ ಎಂದರು.

ಈ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ನಗರದ ರಹೀಂ ನಗರದ ಶಾದಿ ಮಹಲ್ ನಗರಸಭಾ ಕಲ್ಯಾಣ ಮಂಟಪ ಶ್ರೀರಾಮ ಮಂದಿರ ಚೇಂಬರ್ ಆಫ್ ಕಾಮರ್ಸ್ ಸಭಾಂಗಣ ಕಂಬಳಿ ಮಾರುಕಟ್ಟೆ ಅಂಬೇಡ್ಕರ್ ಭವನ ಈ ಸ್ಥಳಗಳಲ್ಲಿ ಏಕಕಾಲಕ್ಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರೆಹಾನ್ ಪಾಷಾ ನಗರಸಭೆ ಪೌರಾಯುಕ್ತ ಸಿ ಚಂದ್ರಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರಿಪ್ರಸಾದ್ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ರಮೇಶ್ ಗೌಡ ಮಲ್ಲಿಕಾರ್ಜುನ ವೀರಭದ್ರಪ್ಪ ಗದ್ದಿಗೆ ತಿಪ್ಪೇಸ್ವಾಮಿ ಚಳ್ಳಕೆರಪ್ಪ ಮಂಜುಳ ಪ್ರಸನ್ನ ಕುಮಾರ್ ಜಯಲಕ್ಷ್ಮಿ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ವರ್ಗ ಹಾಗೂ ನಗರ ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page